SSLC ಪುನಾರವರ್ತಿತ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ!!!

Share the Article

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷದ ಮಖ್ಯ ಪರೀಕ್ಷೆಗೆ ಪೂರ್ವ ತಯಾರಿ ನಡೆಸಲು ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದೆ. ಏಪ್ರಿಲ್ 2023ರ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಗೆ ( Karnataka SSLC Main Exam 2023 ) ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ಇದರ ನಡುವೆ ಪುನರಾವರ್ತಿತ ವಿದ್ಯಾರ್ಥಿಗಳಿಗೂ ಕೂಡ ನೆರವಾಗುವ ನಿಟ್ಟಿನಲ್ಲಿ ಪರೀಕ್ಷೆಗೆ ನೊಂದಣಿ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ.

ಈ ಬಗ್ಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಈ ಬಗ್ಗೆ ವಿವರಣೆಯ ಪ್ರಕಟಣೆ ಬಿಡುಗಡೆ ಮಾಡಲಾಗಿದೆ. ಏಪ್ರಿಲ್ 2023ರ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಗೆ ಹಾಜರಾಗಲು ಅಣಿಯಾಗುತ್ತಿರುವ ಖಾಸಗಿ ಅಭ್ಯರ್ಥಿಗಳು ಮತ್ತು ಎಲ್ಲಾ ವಿವಿಧ ಅರ್ಹ ಪುನರಾವರ್ತಿತ ಅಭ್ಯರ್ಥಿಗಳು ನೋಂದಣಿ ಮಾಡಿಕೊಳ್ಳಲು ಅನುವು ಮಾಡಿಕೊಡಲು ಅವಧಿಯನ್ನು ದಿನಾಂಕ 10-11-2022ರವರೆಗೆ ವಿಸ್ತರಿಸಲಾಗಿದೆ.

Leave A Reply