ಶಾಲಾ ಶಿಕ್ಷಕರೇ ನಿಮಗೊಂದು ಭರ್ಜರಿ ಗುಡ್ ನ್ಯೂಸ್ | ಸಿಗಲಿದೆ ನಿಮಗೆ ಉಚಿತ ವಿದೇಶ ಪ್ರವಾಸ …ಹೇಗೆ ? ಇಲ್ಲಿದೆ ಸಂಪೂರ್ಣ ವಿವರ
ನಮ್ಮ ಸಮಾಜದಲ್ಲಿ ಗುರುವಿಗೆ ಮಹತ್ತರವಾದ ಸ್ಥಾನವಿದೆ. ಶಿಕ್ಷಣವನ್ನು ಮತ್ತೊಬ್ಬರಿಗೆ ಧಾರೆ ಎರೆದು ಸನ್ಮಾರ್ಗದಲ್ಲಿ ನಡೆಯಲು ಪ್ರೇರೇಪಿಸುವ ಜೊತೆಗೆ ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಸಮಾಜದಲ್ಲಿ ಗೌರವ ಪಡೆಯುವಂತೆ ಮಾಡುವಲ್ಲಿ ತೊಡಗಿಸಿಕೊಳ್ಳುವ ಶಿಕ್ಷಕರಿಗೆ ಎಷ್ಟು ಕೃತಜ್ಞತೆ ಸಲ್ಲಿಸಿದರು ಸಾಲದು.
ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಶಾಲೆಯ ಶಿಕ್ಷಕರಿಗೆ ಶೀಘ್ರದಲ್ಲೇ ಗುಡ್ ನ್ಯೂಸ್ ಸಿಗುವ ಸಾಧ್ಯತೆ ಇದ್ದು, ಬಿಬಿಎಂಪಿ ವ್ಯಾಪ್ತಿಯ ಶಾಲಾ ಶಿಕ್ಷಕರು ಬಿಬಿಎಂಪಿ ಪ್ರಾಯೋಜನೆಯಲ್ಲಿ ವಿದೇಶ ಪ್ರವಾಸ ಮಾಡುವ ಅವಕಾಶ ಸಿಗಲಿದೆ. ಹೌದು. ಶೈಕ್ಷಣಿಕ ಅಭಿವೃದ್ಧಿ ದೃಷ್ಟಿಯಿಂದ ಪಾಲಿಕೆಯ ಶಾಲಾ ಶಿಕ್ಷಕರಿಗೆ ವಿದೇಶಿ ಪ್ರವಾಸ ಭಾಗ್ಯ ಕಲ್ಪಿಸುವ ಅಧಿಕಾರಿಗಳು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.
ಹಾಗಾಗಿ, ಯೋಜನೆಯೊಂದನ್ನು ಸಿದ್ಧಪಡಿಸಿ ಮುಖ್ಯ ಆಯುಕ್ತರ ಅನುಮತಿಗೆ ಕಾಯುತ್ತಿದ್ದಾರೆ ಎನ್ನಲಾಗುತ್ತಿದೆ. ಒಂದು ವೇಳೆ ಈ ಯೋಜನೆಗೆ ಅನುಮತಿ ಸಿಕ್ಕರೆ ಶಾಲೆಗಳಿಗೆ ಶೇಕಡ 100 ರಷ್ಟು ಫಲಿತಾಂಶ ತಂದುಕೊಡುವ ಶಿಕ್ಷಕರಿಗೆ ಈ ಯೋಜನೆ ಅಡಿಯಲ್ಲಿ ವಿದೇಶ ಪ್ರವಾಸ ಭಾಗ್ಯ ಲಭಿಸಲಿದೆ.
ವರ್ಷದಿಂದ ವರ್ಷಕ್ಕೆ ಬಿಬಿಎಂಪಿ ವ್ಯಾಪ್ತಿಯ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿಯ ಪ್ರಮಾಣ ಹೆಚ್ಚಳವಾದರೂ ಕೂಡ , ನಿರೀಕ್ಷಿತ ಮಟ್ಟದಲ್ಲಿ ಫಲಿತಾಂಶ ದೊರೆಯದೆ ಇರುವುದರಿಂದ ಶಿಕ್ಷಕರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಶೈಕ್ಷಣಿಕ ವೃದ್ಧಿಗೆ ಪಾಲಿಕೆ ಈ ಕ್ರಮಕ್ಕೆ ಮುಂದಾಗಿದೆ ಎನ್ನಲಾಗುತ್ತಿದೆ.
ಈ ಹಿಂದೆ ಸರ್ಕಾರಿ ಶಾಲೆಗಳ ಫಲಿತಾಂಶ ಹೆಚ್ಚಳಕ್ಕೆ ಬಳ್ಳಾರಿಯಲ್ಲಿ ಇಂತದೊಂದು ಯೋಜನೆಯನ್ನು ಅಲ್ಲಿನ ಪಾಲಿಕೆ ಅನುಷ್ಠಾನಕ್ಕೆ ತಂದಿದ್ದು, ಈ ವೇಳೆ ಅಲ್ಲಿನ ಕೆಲ ಶಾಲೆಗಳಲ್ಲಿ ಶೇಕಡ ನೂರರಷ್ಟು ಫಲಿತಾಂಶ ದಾಖಲಾಗಿದೆ.
ಬೆಂಗಳೂರು ಉತ್ತರ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆಗಳಲ್ಲಿ ವರ್ಷದಿಂದ ವರ್ಷಕ್ಕೆ ಸರ್ಕಾರಿ ಶಾಲೆಗಳತ್ತ ಮುಖ ಮಾಡುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಏರಿಕೆಯಾಗಿರುವುದು ಗಮನಾರ್ಹವಾಗಿದೆ.
ಇತ್ತೀಚಿನ ದಿನಗಳಲ್ಲಿ ಸರಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟದ ಕೊರತೆ ಇದೆ ಹಾಗೂ ಮೂಲ ಸೌಕರ್ಯಗಳ ಕೊರತೆಯಿಂದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎನ್ನುವ ಕಾರಣದ ಜೊತೆಗೆ ಮತ್ತಿತ್ತರ ಕಾರಣಗಳಿಂದ ವಿದ್ಯಾರ್ಥಿಗಳು ಖಾಸಗಿ ಶಾಲೆಗಳತ್ತ ಮುಖ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗಿದೆ.
ಹಾಗಾಗಿ, ಈ ಯೋಜನೆಗೂ ಮುನ್ನ ಬಿಬಿಎಂಪಿ ಶಾಲೆಗಳಿಗೆ ಸರ್ಕಾರ ಗುಣಮಟ್ಟದ ಶಿಕ್ಷಣದ ಜೊತೆಗೆ ಮೂಲ ಸೌಕರ್ಯ ಕಲ್ಪಿಸಬೇಕಾದ ಅನಿವಾರ್ಯತೆಯಿದೆ.