Home latest Important information : ರಾಜ್ಯದಲ್ಲಿ ಇನ್ನೂ 4 ದಿನ ಅಬ್ಬರಿಸಲಿರುವ ವರುಣ| ಈ ಜಿಲ್ಲೆಗಳಲ್ಲಿ...

Important information : ರಾಜ್ಯದಲ್ಲಿ ಇನ್ನೂ 4 ದಿನ ಅಬ್ಬರಿಸಲಿರುವ ವರುಣ| ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

Hindu neighbor gifts plot of land

Hindu neighbour gifts land to Muslim journalist

ಇತ್ತೀಚಿನ ಕೆಲ ದಿನಗಳಲ್ಲಿ ಮಳೆರಾಯನ ಅಬ್ಬರ ಕಡಿಮೆಯಿದ್ದು, ಜನರು ಕೊಂಚ ಸಮಾಧಾನದ ನಿಟ್ಟುಸಿರು ಬಿಟ್ಟು ಹೆಚ್ಚಿನ ಜನರು ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದಾರೆ. ಈ ನಡುವೆ ಸದ್ಯದಲ್ಲೇ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ಇಂದಿನಿಂದ 4 ದಿನ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ. ಮಲೆನಾಡು, ಉತ್ತರ ಒಳನಾಡು, ಕರಾವಳಿ, ಬೆಂಗಳೂರು ಭಾಗಗಳಲ್ಲಿ ಕೂಡ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಾಮಾನ ಭಾರೀ ಕುಸಿತವಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಚಳಿ ತುಸು ಹೆಚ್ಚಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಕೋಲಾರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ರಾಮನಗರ, ತುಮಕೂರು, ಬೀದರ್, ವಿಜಯಪುರ, ಕಲಬುರಗಿ, ಮಂಡ್ಯ, ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ ಚಳಿ ಹೆಚ್ಚಳವಾಗಲಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ಕೋಲಾರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇಂದು ತಮಿಳುನಾಡು ಮತ್ತು ಕೇರಳದಲ್ಲಿ ಗುಡುಗು ಸಿಡಿಲಿನ ಸಹಿತ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡಿನ ಕಡಲೂರು, ಅರಿಯಲೂರು, ಮೈಲಾಡುತುರೈ, ತಂಜಾವೂರು, ತಿರುವರೂರು, ನೀಲಗಿರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಿಂಚು ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರ ಮತ್ತು ಬೆಂಗಳೂರಿನ ಸುತ್ತಮುತ್ತ ಮಂಜು ಕವಿಯುವ ಸಾಧ್ಯತೆಯಿದೆ.

ತಮಿಳುನಾಡಿನಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ದಕ್ಷಿಣ ತಮಿಳುನಾಡು ಮತ್ತು ಕೇರಳದಲ್ಲಿ ಭಾರೀ ಮಳೆಯಾಗಲಿದೆ. ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್- ಬಾಲ್ಟಿಸ್ತಾನ್ ಮತ್ತು ಮುಜಫರಾಬಾದ್ ಮತ್ತು ಹಿಮಾಚಲ ಪ್ರದೇಶದಲ್ಲಿ ಇಂದು ಚದುರಿದ ರೀತಿಯಲ್ಲಿ ಮಳೆಯಾಗುವ ಸಾಧ್ಯತೆಯಿದ್ದು , ಉತ್ತರಾಖಂಡದಲ್ಲಿ ಹಿಮಪಾತವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.