TET Exam 2022: ಶಿಕ್ಷಕರ ಅರ್ಹತಾ ಪರೀಕ್ಷೆಯ ವಿವರ ಇಲ್ಲಿದೆ.
ಇದೀಗ ಶಿಕ್ಷಕರ ಅರ್ಹತಾ ಪರೀಕ್ಷೆಯ ಸಮಯ ಬಂದಿದೆ. ಅದರ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ. ಈ ಶೈಕ್ಷಣಿಕ ಅರ್ಹತಾ ಪರೀಕ್ಷೆ ಸುಮಾರು 35 ಜಿಲ್ಲೆಗಳಲ್ಲಿ ಪ್ರಾರಂಭವಾಗಿದೆ. ಸಿಬ್ಬಂದಿ ವರ್ಗ ಈ ಅರ್ಹತಾ ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ ನಡೆಯದಂತೆ ಸಂಪೂರ್ಣವಾಗಿ ತಪಾಸಣೆ ನಡೆಸಲಾಗಿದೆ.
ಪರೀಕ್ಷಾ ಕೇಂದ್ರದಲ್ಲಿ ಪತ್ರಿಕೆ 2ರ ಪರೀಕ್ಷೆ ಬರೆಯುತ್ತಿದ್ದಾರೆ. ಬೆಳಿಗ್ಗೆ 9:30ರಿಂದ ಮಧ್ಯಾಹ್ನ 12 ರವರೆಗೆ ಈ ಪರೀಕ್ಷೆ ನಡೆಯಲಿದೆ. ಎರಡನೇ ಅಧಿವೇಶನ ಪತ್ರಿಕೆಯ ಸಮಯ 2.00 ರಿಂದ ಆರಂಭವಾಗಿ ಸಂಜೆ 4.30 ರವರೆಗೆ ನಡೆಯಲಿದೆ.
ಇನ್ನೂ ಈ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಆಗಮಿಸುವ ಅಭ್ಯರ್ಥಿಗಳು ಶೂ ಮತ್ತು ಬೆಲ್ಟ್ ಧರಸಿ ಬರುವಂತಿಲ್ಲ. ಹಾಗೂ ಪ್ರವೇಶ ಪತ್ರದಲ್ಲಿ ತಮ್ಮ ಸಹಿ ಮತ್ತು ಭಾವಚಿತ್ರ ಪ್ರಕಟವಾಗದಿರುವ ಅಥವಾ ಸಹಿ ಮತ್ತು ಬಾವಚಿತ್ರ ವ್ಯತ್ಯಾಸವಿರುವ ಅಭ್ಯರ್ಥಿಯು ತನ್ನೊಂದಿಗೆ ಆನ್‌ಲೈನ್ ಅರ್ಜಿ, ತಮ್ಮ ಇತ್ತೀಚಿನ ಭಾವಚಿತ್ರ ಮತ್ತು ಆಧಾರ್ ಕಾರ್ಡ್ ಅಥವಾ ಇನ್ಯಾವುದೇ ಅಧಿಕೃತ ಗುರುತಿನ ಚೀಟಿಯನ್ನು ಪರೀಕ್ಷಾ ಕೇಂದ್ರದ ಅಧಿಕಾರಿಗಳಿಗೆ ತೋರಿಸಬೇಕು ಎಂದು ತಿಳಿಸಲಾಗಿದೆ.
ಹಾಗೇ ಪರೀಕ್ಷೆ ನಡೆಯುವುದಕ್ಕಿಂತ ಒಂದು ಗಂಟೆಗೆ ಮೊದಲೇ ಪರೀಕ್ಷಾ ಕೇಂದ್ರಕ್ಕೆ ಬರುವಂತೆ ಸೂಚನೆ ನೀಡಲಾಗಿದೆ. ಅರ್ಹತಾ ಪರೀಕ್ಷೆಯನ್ನು ಅತ್ಯಂತ ಕಟ್ಟುನಿಟ್ಟಾಗಿ ನಡೆಸಲಾಗುತ್ತಿದ್ದು, ಪರೀಕ್ಷೆಗೆ ಆಗಮಿಸಿದ ಅಭ್ಯರ್ಥಿಗಳನ್ನು ಪರೀಕ್ಷಾ ಕೇಂದ್ರದಲ್ಲಿ ತಪಾಸಣೆಗೆ ಒಳಪಡಿಸಿದ ಬಳಿಕ ಪರೀಕ್ಷೆಗೆ ಹಾಜರಾಗಬಹುದು. ಪರೀಕ್ಷೆ ಪ್ರಾರಂಭವಾಗುವ 30 ನಿಮಿಷಗಳ ಮುಂಚಿತವಾಗಿ ಅಭ್ಯರ್ಥಿಗಳಿಗೆ ಪರೀಕ್ಷಾ ಕೊಠಡಿಗೆ ಪ್ರವೇಶವನ್ನು ನೀಡಲಾಗುತ್ತದೆ. ಪರೀಕ್ಷೆ ಆರಂಭವಾದ ನಂತರ ಪರೀಕ್ಷಾ ಕೊಠಡಿಗೆ ಪ್ರವೇಶ ನೀಡಲಾಗುವುದಿಲ್ಲ.
ಯಾದಗಿರಿ ನಗರದ 27 ಪರೀಕ್ಷಾ ಕೇಂದ್ರಗಳಲ್ಲಿ ಈಗಾಗಲೇ ಪರೀಕ್ಷೆ ಪ್ರಾರಂಭವಾಗಿದೆ. ಸುಮಾರು 6528 ಅಭ್ಯರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ. ಹಾಗೂ ಉತ್ತರ ಕನ್ನಡ ಶಿರಸಿಯಲ್ಲೂ ಪರೀಕ್ಷೆ ಆರಂಭವಾಗಿದೆ. ಒಂದು ಬಾರಿ ಅಭ್ಯರ್ಥಿ ಪರೀಕ್ಷಾ ಕೊಠಡಿಗೆ ಪ್ರವೇಶ ಪಡೆದ ನಂತರ ಪರೀಕ್ಷೆ ಮುಗಿಯುವ ತನಕ ಯಾವುದೇ ಕಾರಣಕ್ಕೂ ಪರೀಕ್ಷಾ ಕೇಂದ್ರದಿಂದ ಹೊರಹೋಗಲು ಅವಕಾಶವಿರುವುದಿಲ್ಲ ಎಂದು ಅಭ್ಯರ್ಥಿಗಳಿಗೆ ಸೂಚನೆ ನೀಡಲಾಗಿದೆ.
ಇನ್ನೂ , ಎಲೆಕ್ಟ್ರಾನಿಕ್ಸ್ ವಸ್ತುಗಳು ಸೇರಿದಂತೆ, ಕೈ ಗಡಿಯಾರ, ಮೊಬೈಲ್, ಕ್ಯಾಲ್‌ಕ್ಯುಲೇಟರ್, ಪೇಜರ್, ಬ್ಲೂಟೂತ್ ಮತ್ತು ಲಾಗ್‌ಟೇಬಲ್, ಬಿಳಿ ಪ್ಲೂಯಡ್, ಬೆಂಕಿಪೊಟ್ಟಣ ಅಥವಾ ಸಿಗರೇಟ್ ಲೈಟರ್ ಈ ರೀತಿಯ ವಸ್ತುಗಳನ್ನು ಪರೀಕ್ಷಾ ಕೊಠಡಿಯೊಳಗೆ ತರುವಂತಿಲ್ಲ ಅವುಗಳನ್ನು ನಿಷೇಧಿಸಲಾಗಿದೆ. ಅಭ್ಯರ್ಥಿಗಳು ತಮಗೆ ನಿಗದಿಸಿ ಪಡಿಸಿದ ಸ್ಥಳದಲ್ಲಿ ಕುಳಿತು ಪರೀಕ್ಷೆ ಬರೆಯುತ್ತಿದ್ದಾರೆ. ಅದಲ್ಲದೆ ಮುಖ್ಯವಾಗಿ ಹಾಲ್ಟಿಕೇಟ್ ತರಬೇಕು, ಇಲ್ಲವಾದಲ್ಲಿ ಪರೀಕ್ಷೆಗೆ ಪ್ರವೇಶ ನೀಡಲಾಗುವುದಿಲ್ಲ ಎಂಬ ಸೂಚನೆ ನೀಡಲಾಗಿದೆ. ಹಾಗೆಯೇ ಇದೀಗ TET ಪರೀಕ್ಷೆ ರಾಜ್ಯದ ಎಲ್ಲೆಡೆ 35 ಜಿಲ್ಲೆಗಳಲ್ಲಿ ಕಟ್ಟುನಿಟ್ಟಾದ ನಿಯಮಗಳ ಜೊತೆಗೆ ನಡೆಯುತ್ತಿದೆ