SSLC Exam 2022-23: SSLC ವಿದ್ಯಾರ್ಥಿಗಳ ಗಮನಕ್ಕೆ | ಎಸ್ಎಸ್ಎಲ್‌ಸಿ ಪರೀಕ್ಷೆಗೆ ನೋಂದಣಿ ದಿನಾಂಕ ಮತ್ತೊಮ್ಮೆ ವಿಸ್ತರಣೆ !

ಮಾರ್ಚ್, ಏಪ್ರಿಲ್‌ನಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ 2023ರ ಎಸ್ಎಸ್ಎಲ್‌ಸಿ ಮುಖ್ಯ ಪರೀಕ್ಷೆ ನಡೆಯಲಿವೆ. ಈ ಪರೀಕ್ಷೆಗಾಗಿ ರಾಜ್ಯದ ಶಾಲಾ, ಕಾಲೇಜುಗಳಿಂದ ಹಾಜರಾಗುವ ವಿದ್ಯಾರ್ಥಿಗಳನ್ನು ವಾರ್ಷಿಕ ಪರೀಕ್ಷೆಗೆ ನೋಂದಾಯಿಸಿಕೊಳ್ಳಲು ದಿನಾಂಕವನ್ನು ಮತ್ತೊಮ್ಮೆ ವಿಸ್ತರಿಸಿದೆ.

 

ಈ ಹಿಂದೆ ದಿನಾಂಕವನ್ನು 10-11-2022 ರವರೆಗೆ ವಿಸ್ತರಣೆ ಮಾಡಲಾಗಿತ್ತು. ಈ ದಿನಾಂಕವನ್ನು ವಿಸ್ತರಿಸಿದ್ದು, ಪರೀಕ್ಷೆ ನೋಂದಣಿಗೆ 25-11-2022 ರವರೆಗೆ ಅವಕಾಶ ನೀಡಿದೆ. ಹಾಗಾಗಿ ಅರ್ಜಿಗಳನ್ನು ಶಾಲೆಗಳ ಮುಖಾಂತರ ಸಲ್ಲಿಸಬಹುದಾಗಿದೆ. 2023 ಮಾರ್ಚ್ / ಏಪ್ರಿಲ್ ತಿಂಗಳಲ್ಲಿ ನಡೆಯಲಿರುವ 2022-23 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಗೆ ರಾಜ್ಯದ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ, ಅನುದಾನ ರಹಿತ ಶಾಲಾ/ ಕಾಲೇಜುಗಳಿಂದ ಹಾಜರಾಗುವ ಅರ್ಹ ವಿದ್ಯಾರ್ಥಿಗಳನ್ನು ನೋಂದಾಯಿಸಲು ಅವಕಾಶ ನೀಡಲಾಗಿದೆ.

ಸದರಿ ಶಾಲೆಗಳ ಮುಖ್ಯ ಶಿಕ್ಷಕರು ತಮ್ಮ ಶಾಲೆಯಿಂದ 2023ರ ಎಸ್ಎಸ್ಎಲ್‌ಸಿ ಪರೀಕ್ಷೆಗೆ ಹಾಜರಾಗುವ ಅರ್ಹ ಶಾಲಾ ವಿದ್ಯಾರ್ಥಿಗಳ (CCERF), ಖಾಸಗಿ ಅಭ್ಯರ್ಥಿಗಳ (CCEPF) ಮತ್ತು ಪುನರಾವರ್ತಿತ ಅಭ್ಯರ್ಥಿಗಳ (CCRPR, CCEPR, NSR,NSPR) ವಿವರಗಳನ್ನು ಮಂಡಳಿಯ https://sslc.karnataka.gov.in ಜಾಲತಾಣದ ಶಾಲಾ ಲಾಗಿನ್ ಮೂಲಕ ಅಪ್‌ಲೋಡ್ ಮಾಡಲು ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಶಾಲೆಯ ಮುಖ್ಯೋಪಾಧ್ಯಯರು ಈ ಮಾರ್ಗಸೂಚಿಯನ್ವಯ ವಿದ್ಯಾರ್ಥಿಗಳ ನೋಂದಣಿ ಮಾಡಲು ತಿಳಿಸಿದೆ.

ಪರೀಕ್ಷಾ ಮಂಡಳಿ ನಿಗದಿಪಡಿಸಿದ ಶುಲ್ಕ ವಿವರ ಈ ಕೆಳಗಿನಂತಿದೆ :
ಎಲ್ಲ ವಿಧದ ಪುನರಾವರ್ತಿತ ಅಭ್ಯರ್ಥಿಗಳು (CCRPR, CCEPR, NSR,NSPR)
• ಎಲ್ಲ ವಿಧದ ಪುನರಾವರ್ತಿತ ಅಭ್ಯರ್ಥಿಗಳು ಪರೀಕ್ಷಾ ಶುಲ್ಕ
• ಒಂದು ವಿಷಯಕ್ಕೆ- 370 ರೂಪಾಯಿ.
• ಎರಡು ವಿಷಯಕ್ಕೆ – 461 ರೂಪಾಯಿ.
• ಮೂರು ಹಾಗೂ ಮೂರಕ್ಕಿಂತ ಹೆಚ್ಚಿನ ವಿಷಯಗಳಿಗೆ – 620 ರೂಪಾಯಿ.

ಪ್ರಥಮ ಬಾರಿಗೆ ಪರೀಕ್ಷೆಗೆ ಹಾಜರಾಗುವ ಖಾಸಗಿ ಅಭ್ಯರ್ಥಿಗಳ (CCEPF) ಪರೀಕ್ಷಾ ಶುಲ್ಕ- ಪರೀಕ್ಷಾ ಶುಲ್ಕ ರೂ. 585 ಮತ್ತು ಲ್ಯಾಮಿನೇಷನ್ ಶುಲ್ಕ ರೂ.22 ಸೇರಿ ಒಟ್ಟು ರೂ.607.

ಪ್ರಥಮ ಬಾರಿಗೆ ಪರೀಕ್ಷೆಗೆ ಹಾಜರಾಗುವ ಶಾಲಾ ಅಭ್ಯರ್ಥಿಗಳ (CCERF) ಪರೀಕ್ಷಾ ಶುಲ್ಕ- ಪರೀಕ್ಷಾ ಶುಲ್ಕ
ರೂ. 585 ಮತ್ತು ಲ್ಯಾಮಿನೇಷನ್ ಶುಲ್ಕ ರೂ.22 ಸೇರಿ
ಒಟ್ಟು ರೂ.607.

ಪ್ರಥಮ ಬಾರಿಗೆ ಪರೀಕ್ಷೆಗೆ ಹಾಜರಾಗುವ ಖಾಸಗಿ ಅಭ್ಯರ್ಥಿಗಳಿಗೆ (CCEPF). ಹೊಸದಾಗಿ ನೋಂದಣಿಯಾಗುವ ಖಾಸಗಿ ಅಭ್ಯರ್ಥಿಗಳ
ನೋಂದಣಿ ಶುಲ್ಕ ಹಾಗೂ ಅರ್ಜಿ ಶುಲ್ಕ – ಪ್ರತಿ ವಿದ್ಯಾರ್ಥಿಗೆ- ರೂ.205.

Leave A Reply

Your email address will not be published.