Apple Juice : ತೂಕ ಕಡಿಮೆ ಮಾಡಲು ಬಯಸುತ್ತೀರಾ? ಹಾಗಾದರೆ ಖಾಲಿ ಹೊಟ್ಟೆಯಲ್ಲಿ ಇದನ್ನು ಕುಡಿಯಿರಿ!

ದಿನಕ್ಕೊಂದು ಸೇಬು ತಿಂದರೆ ವೈದ್ಯರಿಂದ ದೂರ ಇರಬಹುದು ಎನ್ನುವುದು ಹಳೆಯ ಇಂಗ್ಲಿಷ್ ಗಾದೆಮಾತು. ಇದು ನಿಜವಾದರೂ ಇದನ್ನು ಪಾಲಿಸಿಕೊಂಡು ಹೋಗುವವರು ತುಂಬಾ ಕಡಿಮೆ. ದೇಹವನ್ನು ಆರೋಗ್ಯಕರವಾಗಿ ಮತ್ತು ಸದೃಢವಾಗಿಡಲು ಹಣ್ಣುಗಳ ಸೇವನೆ ಬಹಳ ಮುಖ್ಯ. ಅದರಲ್ಲೂ ಸೇಬು ಹಣ್ಣಿನ ಸೇವನೆಯು ಆರೋಗ್ಯಕ್ಕೆ ತುಂಬಾ ಉಪಯುಕ್ತವಾಗಿದೆ. ಸೇಬಿನ ರಸವನ್ನು ಕುಡಿಯುವುದರಿಂದ ದೇಹದ ಹಾನಿಕಾರಕ ವಿಷವನ್ನು ತೆಗೆದುಹಾಕುತ್ತದೆ.

 

ಸೇಬು ಹಣ್ಣಿನಲ್ಲಿ ಜೀವಸತ್ವಗಳು ಮತ್ತು ಖನಿಜಗಳು ಸಮೃದ್ಧವಾಗಿದ್ದೂ, ದೇಹವನ್ನು ರೋಗ ಮುಕ್ತವಾಗಿರಿಸಲು ಸಹಾಯಕಾರಿ. ಸೇಬು ಹಣ್ಣಿನ ರಸವನ್ನು ನಾವು ಬೆಳಗ್ಗೆ ಖಾಲಿ ಹೊಟ್ಟೆಗೆ ಸೇವಿಸುವುದರಿಂದ ಅನೇಕ ಆರೋಗ್ಯಕಾರಿ ಲಾಭಗಳಿವೆ.

ಕೊಲೆಸ್ಟ್ರಾಲ್:- ದೇಹದಲ್ಲಿನ ಕೊಲೆಸ್ಟ್ರಾಲ್‌ನ್ನು ಕಡಿಮೆ ಮಾಡಲು ಬಯಸುವವರಿಗೆ ಸೇಬು ಉತ್ತಮ ಆಹಾರವಾಗಿದೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇಬಿನ ರಸವನ್ನು ಕುಡಿಯುವುದು ತುಂಬಾ ಪ್ರಯೋಜನಕಾರಿ.

ತೂಕದ ಸಮಸ್ಯೆ:- ಸೇಬಿನ ರಸದಲ್ಲಿ ಫೈಬರ್ ಸಮೃದ್ಧವಾಗಿದ್ದೂ, ಇದು ನಿಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ. ಹಾಗಾಗಿ ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇಬು ಹಣ್ಣಿನ ಜ್ಯೂಸ್ ಕುಡಿಯುವುದರಿಂದ ತೂಕವನ್ನು ತ್ವರಿತವಾಗಿ ಕಳೆದುಕೊಳ್ಳಬಹುದು.

ಅಸ್ತಮಾ:- ಸೇಬು ಹಣ್ಣಿನಲ್ಲಿರುವ ಪೋಷಕಾಂಶಗಳು ಅಸ್ತಮಾಗೆ ಬಹಳ ಪ್ರಯೋಜನಕಾರಿಯಾಗಿದೆ.
ಅಸ್ತಮಾ ರೋಗಿಗಳು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇಬು ಹಣ್ಣಿ ರಸವನ್ನು ಕುಡಿಯುವುದು ತುಂಬಾ ಪ್ರಯೋಜನಕಾರಿಯಿದೆ.

ಹೃದಯ:- ಸೇಬುಗಳು ಪ್ಲೇವನಾಯ್ಡ್ ಮತ್ತು ಫೀನಾಲಿಕ್ ಆಮ್ಲಗಳನ್ನು ಹೊಂದಿರುತ್ತವೆ. ಹಾಗಾಗಿ ಸೇಬು ಹಣ್ಣಿನ ಜ್ಯೂಸ್ ಹೃದಯರಕ್ತನಾಳದ ಸಮಸ್ಯೆಗಳನ್ನು ತಡೆಯಲು ಪ್ರಯೋಜನಕಾರಿಯಾಗಿದೆ.

ಕ್ಯಾನ್ಸರ್:- ಇವು ಆಕ್ಸಿಡೇಟಿವ್ ಸ್ಟೈಸ್ ಆಗಿದ್ದು, ಇದು ಕ್ಯಾನ್ಸರ್ ವಿರೋಧಿಯಾಗಿದ್ದೂ, ಶ್ವಾಸಕೋಶದ ಕ್ಯಾನ್ಸರ್ ನಂತಹ ಕಾಯಿಲೆಗಲನ್ನು ದೂರ ಮಾಡುತ್ತದೆ. ಎಂದು ಅನೇಕ ಅಧ್ಯಯನಗಳಿಂದ ತಿಳಿದು ಬಂದಿದೆ.

ಕಣ್ಣಿನ ದೃಷ್ಟಿಗೆ ಸಹಕಾರಿ:- ಸೇಬಿನಲ್ಲಿ ವಿಟಮಿನ್ ಎ ಅಧಿಕವಾಗಿದೆ. ಪ್ರತಿದಿನ ಸೇಬು ಹಣ್ಣಿನ ರಸವನ್ನು ಕುಡಿಯುವುದರಿಂದ ದೃಷ್ಟಿ ಸುಧಾರಿಸುತ್ತದೆ.

Leave A Reply

Your email address will not be published.