ಗೋಕರ್ಣದ ಮಹಾಬಲೇಶ್ವರ ದೇವಸ್ಥಾನಕ್ಕೆ ತೆರಳುವ ಭಕ್ತರಿಗೆ ವಿಶೇಷ ಸೂಚನೆ!!
ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳವಾದ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನಕ್ಕೆ ಹಲವಾರು ಭಕ್ತರು ಭೇಟಿ ನೀಡುತ್ತಾರೆ. ಹೀಗೆ ಭೇಟಿ ನೀಡುವಂತಹ ಜನರು ಅರೆನಗ್ನ ವಸ್ತ್ರ ಧರಿಸಿ ದೇವಸ್ಥಾನಕ್ಕೆ ತೆರಳುತ್ತಾರೆ. ಈ ರೀತಿಯಾಗಿ ಹೋಗುವುದಕ್ಕೆ ಇದೀಗ ನಿಷೇಧ ಹೇರಲಾಗಿದೆ.
ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ, ಉತ್ತರ ಕನ್ನಡ ಜಿಲ್ಲೆಯ ಕುಮುಟಾ ತಾಲೂಕಿನ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದ ಪಕ್ಕದಲ್ಲಿನ ರಥ ಬೀದಿಯಿಂದ ಅರೆಬರೆ ಉಡುಪು ಧರಿಸಿ ಸಾರ್ವಜನಿಕರು ಸಂಚರಿಸುತ್ತಿದ್ದರು. ಅದಕ್ಕೆ ಇದೀಗ ನಿಷೇಧ ವಿಧಿಸಲಾಗಿದೆ.
ಈ ನಿರ್ಧಾರವನ್ನು ಮಹಾಬಲೇಶ್ವರ ದೇವಸ್ಥಾನದ ಮೇಲುಸ್ತುವಾರಿ ಕಮಿಟಿಯಿಂದ ಕೈಗೊಳ್ಳಲಾಗಿದೆ. ಸಾರ್ವಭೌಮ ಶ್ರೀ ಮಹಾಬಲೇಶ್ವರ ದೇವಸ್ಥಾನ ರಥದ ನಿಲುಗಡೆ ಸ್ಥಳದಿಂದ ದೇವಸ್ಥಾನದ ಪಶ್ಚಿಮ ದ್ವಾರದವರೆಗೆ ಭಕ್ತರು ಅರೆಬರೆ ಬಟ್ಟೆಗಳನ್ನು ಧರಿಸಿ, ಸಂಚರಿಸುವುದನ್ನು ನಿಷೇಧಿಸಲಾಗಿದೆ ಎಂದಿದ್ದಾರೆ.
ಈ ನಿಷೇಧ ಏಕೆಂದರೆ, ಮಹಾಬಲೇಶ್ವರ ದೇವಸ್ಥಾನದ ಪಶ್ಚಿಮ ದ್ವಾರದವರೆಗಿನ ರಸ್ತೆಯಲ್ಲಿ ಅರೆಬರೆ ಉಡುಪು ಧರಿಸಿ ಸುತ್ತಾಡುವವರ ಸಂಖ್ಯೆ ಹೆಚ್ಚಾಗಿತ್ತು. ಈ ಕಾರಣದಿಂದಾಗಿ ದೇವಸ್ಥಾನದ ಮೇಲುಸ್ತುವಾರಿ ಸಮಿತಿಯು ಈ ನಿರ್ಧಾರವನ್ನು ಕೈಗೊಂಡಿದೆ.