Home Karnataka State Politics Updates ಶಾಸಕ ಎಂಪಿ ರೇಣುಕಾಚಾರ್ಯ ವಿರುದ್ಧ FIR ದಾಖಲು!

ಶಾಸಕ ಎಂಪಿ ರೇಣುಕಾಚಾರ್ಯ ವಿರುದ್ಧ FIR ದಾಖಲು!

Hindu neighbor gifts plot of land

Hindu neighbour gifts land to Muslim journalist

ದಾವಣಗೆರೆ ಹೊನ್ನಾಳಿಯ ಶಾಸಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ( MLA MP Renukacharya ) ವಿರುದ್ಧ ಎಫ್‌ಐಆರ್ ದಾಖಲಾಗಿರುವ ಘಟನೆ ನಡೆದಿದೆ.

ಸರ್ಕಾರಿ ನೌಕರರಿಗೆ ಕೆಲಸ ಮಾಡಲು ಅಡ್ಡಿಪಡಿಸಿದ ಆರೋಪದ ಹಿನ್ನಲೆಯಲ್ಲಿ, ನೌಕರರು ದಾವಣಗೆರೆ ಜಿಲ್ಲೆಯ ನ್ಯಾಮತಿ ಪೊಲೀಸ್ ಠಾಣೆಗೆ ಶಾಸಕ ಎಂ.ಪಿ ರೇಣುಕಾಚಾರ್ಯ ವಿರುದ್ಧ ದೂರು ನೀಡಿದ್ದು, ಆ ದೂರಿನ ಅನ್ವಯ ಶಾಸಕ ರೇಣುಕಾಚಾರ್ಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಕೆಲ ದಿನಗಳ ಹಿಂದಷ್ಟೇ ಶಾಸಕರ ತಮ್ಮನ ಪುತ್ರ ಚಂದ್ರಶೇಖರ್ ನಾಪತ್ತೆಯಾಗಿ, ಬಳಿಕ ಕಾಲುವೆಯಲ್ಲಿ ಕಾರಿನ ಸಹಿತ ಶವವಾಗಿ ಪತ್ತೆಯಾಗಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಸಿಎಂ ಬೊಮ್ಮಾಯಿ ಅವರಲ್ಲಿ ಮನವಿ ಕೂಡ ಮಾಡಿದ್ದರು. ಈ ಪ್ರಕರಣದ ನಡುವೆ ಸರ್ಕಾರಿ ನೌಕರರಿಗೆ ಕೆಲಸ ಮಾಡಲು ಅಡ್ಡಿಪಡಿಸಿದ ಆರೋಪದಲ್ಲಿ ರೇಣುಕಾಚಾರ್ಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ.