ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಸ್ಪತ್ರೆಗೆ ದಾಖಲು!

ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.

ಸಚಿವರು ನಿನ್ನೆಯೇ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು ಇನ್ನೂ 4-5 ದಿನ ವಿಶ್ರಾಂತಿ ಪಡೆಯಲಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.

ಈ ಕುರಿತು ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು, ತುರ್ತು ಚಿಕಿತ್ಸೆಗಾಗಿ ನಾನು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದೇನೆ ಮತ್ತು ವೈದ್ಯರ ಸಲಹೆಯಂತೆ 4-5 ದಿನಗಳ ಕಾಲ ಸಾರ್ವಜನಿಕ ಸಂಪರ್ಕಕ್ಕೆ ಸಿಗುತ್ತಿಲ್ಲ. ಯಾವುದೇ ಕೆಲಸಗಳಿಗಾಗಿ ನನ್ನ ಆಪ್ತ ಸಹಾಯಕರನ್ನು ಮತ್ತು ನನ್ನನ್ನು ದೂರವಾಣಿ ಮೂಲಕ ಸಂಪರ್ಕಿಸಲು ಕೋರುತ್ತೇನೆ ಎಂದು ಟ್ವೀಟರ್ ನಲ್ಲಿ ಮಾಹಿತಿ ನೀಡಿದ್ದಾರೆ.

Leave A Reply

Your email address will not be published.