ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್‌ ನಾಯಕಿ ಗಾಯತ್ರಿ ಶಾಂತೇಗೌಡ ಮನೆ ಮೇಲೆ ಐಟಿ ದಾಳಿ

Share the Article

ಚಿಕ್ಕಮಗಳೂರು: ಜಿಲ್ಲೆಯ ಕಾಂಗ್ರೆಸ್‌ ನಾಯಕಿ ಗಾಯತ್ರಿ ಶಾಂತೇಗೌಡ ಅವರ ಮನೆ ಮೇಲೆ ಐಟಿ ದಾಳಿ ನಡೆಸಿದೆ. ನಗರದ ಹೂವಿನ ಮಾರ್ಕೆಟ್ ರಸ್ತೆಯಲ್ಲಿರುವ ಗಾಯತ್ರಿ ಶಾಂತೇಗೌಡ ಅವರ ಮನೆಗೆ 10ಕ್ಕೂ ಹೆಚ್ಚು ವಾಹನಗಳಲ್ಲಿ ಐಟಿ ಅಧಿಕಾರಿಗಳು ನಡೆಸಿದ್ದಾರೆ.

ಮುಂಜಾನೆಯಿಂದಲೂ ಐಟಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಅಧಿಕಾರಿಗಳು ಬಂದಿರುವ ಕಾರಿನ ಮುಂಭಾಗದ ಗ್ಲಾಸ್​ ಮೇಲೆ ಮದುವೆ ಬೋರ್ಡ್ ಇದೆ. ಯಾರಿಗೂ ಅನುಮಾನ ಬಾರದಿರಲೆಂದು ಅಭಿನವ್ ವೆಡ್ಸ್​ ದೀಪಿಕಾ ಎಂಬ ಪೋಸ್ಟರ್ ಅಂಟಿಸಿಕೊಂಡಿರುವ ವಾಹನಗಳಲ್ಲಿ ಐಟಿ ಅಧಿಕಾರಿಗಳು ಬಂದಿದ್ದಾರೆ. ಗಾಯತ್ರಿ ಅವರ ಪತಿ ಶಾಂತೇಗೌಡರು ಗುತ್ತಿಗೆದಾರರು. ಕಳಸಾಪುರ ರಸ್ತೆಯಲ್ಲಿರುವ ಅವರ ಮಾಲೀಕತ್ವದ ಕ್ರಷರ್ ಮೇಲೆಯೂ ಐಟಿ ಅಧಿಕಾರಿಗಳ ದಾಳಿ ನಡೆದಿದೆ. ದಾಳಿಯ ವೇಳೆ ಗಾಯತ್ರಿ ಶಾಂತೇಗೌಡರಿಗೆ ಸಂಬಂಧಿಸಿದ ಆಸ್ತಿ ವಿವರಗಳನ್ನು ಅಧಿಕಾರಿಗಳು ಪಡೆದುಕೊಳ್ಳುತ್ತಿದ್ದಾರೆ.

Leave A Reply