ಕಚ್ಚಾತೈಲದ ಬೆಲೆಯಲ್ಲಿ ಭಾರೀ ಇಳಿಕೆ | ಪೆಟ್ರೋಲ್ ಡೀಸೆಲ್ ದರ ಇಲ್ಲಿ ಭಾರೀ ದುಬಾರಿ!
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಳಿತಗಳು ಕಂಡು ಬರುತ್ತಲೇ ಇದೆ . ಅದಲ್ಲದೆ ವಾಹನಗಳ ಬಳಕೆ ಮತ್ತು ಇಂಧನಗಳ ಬಳಕೆ ಸಹ ಹೆಚ್ಚಾಗುತ್ತಲೇ ಇದೆ. ಇಂಧನ ಪೂರೈಕೆಯಲ್ಲಿ ಇಳಿಕೆಯಾಗುತ್ತಿರುವುದು ಸಹ ಕಾಣಬಹುದಾಗಿದೆ. ಪ್ರಸ್ತುತ ಜಾಗತಿಕ ಮಾರುಕಟ್ಟೆಯಲ್ಲಿ ಕಳೆದ 24 ಗಂಟೆಗಳಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್ಗೆ ಸುಮಾರು 3 ಡಾಲರ್ಗಳಷ್ಟು ಕುಸಿದಿದೆ. ಆದ್ದರಿಂದ ಇಂದು ಶುಕ್ರವಾರ ಬೆಳಗ್ಗೆ ಸರ್ಕಾರಿ ತೈಲ ಕಂಪನಿಗಳು ಬಿಡುಗಡೆ ಮಾಡಿದ ಪೆಟ್ರೋಲ್ ಮತ್ತು ಡೀಸೆಲ್ ಚಿಲ್ಲರೆ ಬೆಲೆಯಲ್ಲಿ ಬದಲಾವಣೆ ಕಂಡುಬರುತ್ತಿದೆ.
ಸರ್ಕಾರಿ ತೈಲ ಕಂಪನಿಗಳು ಬಿಡುಗಡೆ ಮಾಡಿದ ದರದ ಪ್ರಕಾರ:
- ಇಂದು ಬೆಳಿಗ್ಗೆ ನೋಯ್ಡಾದಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 96.60 ರೂ. ಮತ್ತು ಡೀಸೆಲ್ ಬೆಲೆ ಲೀಟರ್ಗೆ 89.77 ರೂ. ಆಗಿದೆ.
- ಘಜಿಯಾಬಾದ್ನಲ್ಲೂ ಪೆಟ್ರೋಲ್ ಲೀಟರ್ಗೆ 96.26 ರೂ. ಮತ್ತು ಡೀಸೆಲ್ ಲೀಟರ್ಗೆ 89.45 ರೂ.ಗೆ ಮಾರಾಟವಾಗುತ್ತಿದೆ.
- ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಇಂದು ಪೆಟ್ರೋಲ್ ದರ ಲೀಟರ್ಗೆ 50 ಪೈಸೆ ಏರಿಕೆಯಾಗಿ 108.12 ರೂ.ಗೆ ಮತ್ತು ಡೀಸೆಲ್ ಲೀಟರ್ಗೆ 47 ಪೈಸೆ ಏರಿಕೆಯಾಗಿ 94.86 ರೂ.ಗೆ ತಲುಪಿದೆ.
ಇಂದು ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದುಬಾರಿಯಾಗಿದೆ. ಆದರೆ, ಉಳಿದ ಮೆಟ್ರೋ ನಗರಗಳಲ್ಲಿ ಪೆಟ್ರೋಲ್ ಬೆಲೆ ಮತ್ತು ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಎಂಬ ಮಾಹಿತಿ ದೊರೆತಿದೆ.
ಭಾರತದ ಪ್ರಮುಖ ಮೆಟ್ರೋಪಾಲಿಟನ್ ನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆಗಳು:
- ದೆಹಲಿಯಲ್ಲಿ ಪೆಟ್ರೋಲ್ 96.65 ರೂ. ಮತ್ತು ಡೀಸೆಲ್ ಲೀಟರ್ಗೆ 89.82 ರೂ. ಆಗಿದೆ.
- ಮುಂಬೈನಲ್ಲಿ ಪೆಟ್ರೋಲ್ 106.31 ರೂ. ಮತ್ತು ಡೀಸೆಲ್ ಲೀಟರ್ಗೆ 94.27 ರೂ.
- ಚೆನ್ನೈನಲ್ಲಿ ಪೆಟ್ರೋಲ್ 102.63 ರೂ. ಮತ್ತು ಡೀಸೆಲ್ ಲೀಟರ್ಗೆ 94.24 ರೂ.
- ಕೋಲ್ಕತ್ತಾದಲ್ಲಿ ಪೆಟ್ರೋಲ್ 106.03 ರೂ. ಮತ್ತು ಡೀಸೆಲ್ ಲೀಟರ್ಗೆ 92.76 ರೂ.
- ನೋಯ್ಡಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.60 ರೂ. ಮತ್ತು ಡೀಸೆಲ್ 89.77 ರೂ.
- ಲಕ್ನೋದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.57 ರೂ. ಮತ್ತು ಡೀಸೆಲ್ 89.76 ರೂ.
- ಜೈಪುರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 108.48 ರೂ. ಮತ್ತು ಡೀಸೆಲ್ 93.72 ರೂ.
- ತಿರುವನಂತಪುರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 107.71 ರೂ. ಮತ್ತು ಡೀಸೆಲ್ 96.52 ರೂ.
- ಪಾಟ್ನಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 107.24 ರೂ. ಮತ್ತು ಡೀಸೆಲ್ 94.04 ರೂ.
- ಗುರುಗ್ರಾಮದಲ್ಲಿ 97.18 ರೂ. ಮತ್ತು ಡೀಸೆಲ್ ಲೀಟರ್ಗೆ 90.05 ರೂ.
- ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 101.94 ರೂ. ಮತ್ತು ಡೀಸೆಲ್ 87.89 ರೂ.
- ಭುವನೇಶ್ವರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 103.19 ರೂ. ಮತ್ತು ಡೀಸೆಲ್ 94.76 ರೂ.
- ಚಂಡೀಗಢದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 96.20 ರೂ. ಮತ್ತು ಡೀಸೆಲ್ 84.26 ರೂ.
- ಹೈದರಾಬಾದ್ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 109.66 ರೂ. ಮತ್ತು ಡೀಸೆಲ್ 97.82 ರೂ. ಆಗಿದೆ.
ಕೇಂದ್ರ ಸರ್ಕಾರವು ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್ಗೆ 8 ರೂ. ಮತ್ತು ಡೀಸೆಲ್ಗೆ 6 ರೂ. ಕಡಿತಗೊಳಿಸಿದ್ದರಿಂದ ಮೇ ತಿಂಗಳಲ್ಲಿ ಇಂಧನದ ಬೆಲೆಯಲ್ಲಿ ಕೊಂಚ ಏರಿಳಿತ ಕಂಡುಬಂದಿತ್ತು.
ಜಾಗತಿಕ ಮಾರುಕಟ್ಟೆಯಲ್ಲಿ ಕಳೆದ 24 ಗಂಟೆಗಳಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್ಗೆ ಸುಮಾರು ಒಂದು ಡಾಲರ್ಗಳಷ್ಟು ಕುಸಿದಿದೆ. ಮೇ 22ರಂದು ತೈಲದ ಬೆಲೆಯಲ್ಲಿ ಕೊನೆಯ ಬದಲಾವಣೆಯಾಗಿತ್ತು. 5 ತಿಂಗಳಿಗೂ ಹೆಚ್ಚು ಕಾಲ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸ್ಥಿರವಾಗಿರುವುದು ಇದೇ ಮೊದಲು. ಮೇ 22ರಂದು ಸರ್ಕಾರವು ಅಬಕಾರಿ ಸುಂಕವನ್ನು ಕಡಿಮೆ ಮಾಡಿತ್ತು. ಇದರಿಂದಾಗಿ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಅಗ್ಗವಾಯಿತು. ಇದರ ನಂತರ, ಮಹಾರಾಷ್ಟ್ರದಲ್ಲಿ ತೈಲದ ಮೇಲಿನ ವ್ಯಾಟ್ ಅನ್ನು ಕಡಿಮೆಗೊಳಿಸಲಾಯಿತು. ಇದರಿಂದಾಗಿ ಇಂಧನ ಬೆಲೆ ಕಡಿಮೆಯಾಯಿತು.
ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು (OMC ಗಳು) ಅಂತಾರಾಷ್ಟ್ರೀಯ ಮಾನದಂಡದ ಬೆಲೆಗಳು ಮತ್ತು ವಿದೇಶಿ ವಿನಿಮಯ ದರಗಳಿಗೆ ಅನುಗುಣವಾಗಿ ಇಂಧನ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. OMC ಗಳಲ್ಲಿ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL), ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ಸೇರಿವೆ.
ಸರ್ಕಾರಿ ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪರಿಶೀಲಿಸಿದ ನಂತರ ದರವನ್ನು ನಿಗದಿಪಡಿಸುತ್ತವೆ:
ದರ ನಿಗಧಿ ಕಂಡು ಕೊಳ್ಳುವ ವಿಧಾನ :
- ನಿಮ್ಮ ನಗರದ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಪ್ರತಿದಿನ SMS ಮೂಲಕ ಪರಿಶೀಲಿಸಬಹುದು.
- ನೀವು ಇಂಡಿಯನ್ ಆಯಿಲ್ನ ಗ್ರಾಹಕರಾಗಿದ್ದರೆ, ನೀವು RSP ಡೀಲರ್ ಕೋಡ್ ಅನ್ನು ಬರೆಯುವ ಮೂಲಕ 9224992249 ಸಂಖ್ಯೆಗೆ SMS ಕಳುಹಿಸಬಹುದು.
- ನೀವು HPCL ಗ್ರಾಹಕರಾಗಿದ್ದರೆ ನೀವು HPPRICE ಡೀಲರ್ ಕೋಡ್ ಅನ್ನು ಟೈಪ್ ಮಾಡುವ ಮೂಲಕ 9222201122 ಸಂಖ್ಯೆಗೆ SMS ಕಳುಹಿಸಬಹುದು.
- BPCL ಗ್ರಾಹಕರು ಡೀಲರ್ ಕೋಡ್ ಅನ್ನು ನಮೂದಿಸುವ ಮೂಲಕ 9223112222ಗೆ RSP ಕಳುಹಿಸಬಹುದು.
ಒಟ್ಟಿನಲ್ಲಿ ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ವ್ಯಾಟ್ ಮತ್ತು ಸರಕು ಸಾಗಣೆ ಶುಲ್ಕಗಳಂತಹ ಸ್ಥಳೀಯ ತೆರಿಗೆಗಳಲ್ಲಿನ ವ್ಯತ್ಯಾಸವು ವಿವಿಧ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಮೇಲೆ ಪರಿಣಾಮ ಬೀರುತ್ತದೆ.
ಈಗಾಗಲೇ ಭಾರತದ ಪ್ರಮುಖ ನಗರಗಳಲ್ಲಿ 6 ತಿಂಗಳಿಂದ ಪೆಟ್ರೋಲ್-ಡೀಸೆಲ್ ಬೆಲೆ ಸ್ಥಿರವಾಗಿದೆ. ಮತ್ತು OPEC ರಾಷ್ಟ್ರಗಳು ಕಚ್ಚಾ ಉತ್ಪಾದನೆಯಲ್ಲಿ ಕಡಿತದ ಘೋಷಣೆಯ ನಂತರ ಕಚ್ಚಾ ತೈಲದಲ್ಲಿ ಏರಿಳಿತಗಳಾಗಿವೆ. ನವೆಂಬರ್ 1ರಿಂದ ತೈಲ ಕಂಪನಿಗಳು ಪ್ರತಿ ಲೀಟರ್ ತೈಲಕ್ಕೆ 40 ಪೈಸೆ ಪರಿಹಾರವನ್ನು ನೀಡುವ ನಿರೀಕ್ಷೆಯಿತ್ತು ಆದರೆ ಅನುಷ್ಠಾನ ತರಲಿಲ್ಲ. ಅದಲ್ಲದೆ ದೇಶಿಯ ಮಾರುಕಟ್ಟೆಯಲ್ಲಿ ಸುಮಾರು 6 ತಿಂಗಳಿನಿಂದ ಪೆಟ್ರೋಲ್ -ಡೀಸೆಲ್ ಬೆಲೆ ಸ್ಥಿರವಾಗಿದೆ. ಆದ್ದರಿಂದ ಜನಸಾಮಾನ್ಯರಿಗೆ ನೆಮ್ಮದಿ ತಂದಿದೆ.