Home News Crime News : ಮೋಸದಿಂದ ಕಾಡಿಗೆ ಕರೆದುಕೊಂಡು ಹೋಗಿ ಯುವತಿಯ ಮೇಲೆ ಅತ್ಯಾಚಾರ | ಒಂದು...

Crime News : ಮೋಸದಿಂದ ಕಾಡಿಗೆ ಕರೆದುಕೊಂಡು ಹೋಗಿ ಯುವತಿಯ ಮೇಲೆ ಅತ್ಯಾಚಾರ | ಒಂದು ಫೋನ್ ಕರೆಯಿಂದ ಯುವತಿಯ ಜೀವ ಉಳಿಯಿತು !

Hindu neighbor gifts plot of land

Hindu neighbour gifts land to Muslim journalist

ಕಾಮುಕರಿಗೆ ಕಾನೂನು ಎಷ್ಟೇ ಶಿಕ್ಷೆ ನೀಡಿದರೂ ಸಹ ಕಾಮುಕರ ಅಟ್ಟಹಾಸ ನಡೆಯುತ್ತಲೇ ಇದೆ. ಕಾಮುಕರ ಹೀನಾಯ ಕೃತ್ಯಗಳಿಗೆ ಕೊನೆ ಇಲ್ಲವೇ ಎಂದು ಹೆಣ್ಣು ಮಕ್ಕಳಿಗೆ ಭಯ ಶುರು ಆಗಿದೆ. ಹೌದು ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯ ಕಾಡಿನಲ್ಲಿ ಯುವತಿಯ ಮೇಲೆ ಅತ್ಯಾಚಾರ ನಡೆದ ನಂತರ ಸ್ನೇಹಿತೆಯ ಸಹಾಯದಿಂದ ಯುವತಿ ಬದುಕಿ ಉಳಿದಿದ್ದಾಳೆ.

ಪ್ರಸ್ತುತ ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯ ಕಾಡಿನಲ್ಲಿ ಯುವತಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 23 ವರ್ಷದ ಯುವಕನನ್ನು ಬಂಧಿಸಲಾಗಿದೆ.

ಪೊಲೀಸ್ ಮಾಹಿತಿ ಪ್ರಕಾರ ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯ ಕಾಡಿನಲ್ಲಿ ಯುವತಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 23 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತೆ ಕಾಲೇಜು ವಿದ್ಯಾರ್ಥಿನಿಯಾಗಿದ್ದು, ಆಕೆ ಆರೋಪಿಯನ್ನು ಪತ್ತೆ ಮಾಡಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ. ಆರೋಪಿಯು ಸಂತ್ರಸ್ತೆಯನ್ನು ತನ್ನ ಕಾರಿನಲ್ಲಿ ಹೊರಹೋಗುವ ಎಂಬ ನೆಪದಲ್ಲಿ ಕಾಡಿಗೆ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೂರಿನ ಪ್ರಕಾರ, ಯುವತಿಯು ಮೇಲೆ ಆತ ಅತ್ಯಾಚಾರ ಮಾಡಲು ಪ್ರಯತ್ನಿಸಿದಾಗ ಇದನ್ನು ವಿರೋಧಿಸಿ ತನ್ನ ಸಹಪಾಠಿಗೆ ಫೋನ್ ಮಾಡಿದ್ದಾಳೆ. ಆದರೆ ಆತ ಆಕೆಯ ಫೋನ್ ಕಸಿದುಕೊಂಡು ಕಾರಿನ ಹಿಂದಿನ ಸೀಟಿನಲ್ಲಿ ಎಸೆದಿದ್ದಾನೆ ಎಂದು ಸಂತ್ರಸ್ತೆ ತಿಳಿಸಿದ್ದಾಳೆ.

ಸಂತ್ರಸ್ತೆ ಗೆಳತಿಗೆ ಕರೆ ಮಾಡಿದ ಕರೆ ಸಂಪರ್ಕ ಕಡಿತಗೊಳ್ಳದ ಕಾರಣ, ಸಂತ್ರಸ್ತೆಯ ಸಹಪಾಠಿ ಫೋನ್‌ನಲ್ಲಿ ಆಕೆಯ ಕಿರುಚಾಟವನ್ನು ಕೇಳಿದ್ದು, ತಕ್ಷಣ ಪೊಲೀಸರನ್ನು ಸಂಪರ್ಕಿಸಿದ್ದಾರೆ. ಫೋನ್ ಇರುವ ಸ್ಥಳವನ್ನು ಪತ್ತೆಹಚ್ಚಿ ಆಕೆಯನ್ನು ರಕ್ಷಿಸಲಾಗಿದೆ ಎಂದು ಅವರು ಹೇಳಿದರು. ಆರೋಪಿಯನ್ನು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ), 376 (2) (ಎನ್) (ಒಂದೇ ಮಹಿಳೆಯ ಮೇಲೆ ಪುನರಾವರ್ತಿತ ಅತ್ಯಾಚಾರ), 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಬಂಧಿಸಲಾಗಿದೆ.

ಕಳೆದ ಬುಧವಾರ ಕಂಕೇರ್ ಪೊಲೀಸ್ ಠಾಣೆ ವ್ಯಾಪ್ತಿಯ ವ್ಯಾಸ್ಕೊಂಗೇರಾ ಅರಣ್ಯದಲ್ಲಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಕಂಕೇರ್ ಪೊಲೀಸ್ ಠಾಣೆಯ ಠಾಣಾಧಿಕಾರಿ (ಎಸ್‌ಎಚ್‌ಒ) ಶರದ್ ದುಬೆ ತಿಳಿಸಿದ್ದಾರೆ.

ಸದ್ಯ ಆರೋಪಿ ಪೊಲೀಸ್ ಕೈ ವಶದಲ್ಲಿ ಇದ್ದು ಹೆಚ್ಚಿನ ಮಾಹಿತಿ ಬಹಿರಂಗ ಆಗಬೇಕಿದೆ.