Home ಬೆಂಗಳೂರು ಸರ್ಕಾರದಿಂದ ಎಲ್ಲಾ ನೇರ ನೇಮಕಾತಿ, ಮುಂಬಡ್ತಿಗೆ ತಡೆ

ಸರ್ಕಾರದಿಂದ ಎಲ್ಲಾ ನೇರ ನೇಮಕಾತಿ, ಮುಂಬಡ್ತಿಗೆ ತಡೆ

Hindu neighbor gifts plot of land

Hindu neighbour gifts land to Muslim journalist

ರಾಜ್ಯ ಸರ್ಕಾರದಿಂದ (Karnataka Government) ಕೆಲ ದಿನಗಳ ಹಿಂದೆ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮೀಸಲಾತಿಯನ್ನು ಹೆಚ್ಚಿಸಲಾಗಿತ್ತು. ಈ ಮೀಸಲಾತಿ ಹೆಚ್ಚಳದ ಅನ್ವಯ ನೇರನೇಮಕಾತಿ, ಮುಂಬಡ್ತಿಯಲ್ಲಿ ಅವಕಾಶ ನೀಡೋ ಸಲುವಾಗಿ, ಈಗ ಎಲ್ಲಾ ನೇರ ನೇಮಕಾತಿ, ಮುಂಬಡ್ತಿಗೆ ( Direct Recruitment, Promotion ) ತಡೆ ನೀಡಲಾಗಿದೆ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ (Karnataka Chief Secretory Vandita Sharma )ಅವರು ಹೊರಡಿಸಿರುವಂತ ಟಿಪ್ಪಣಿಯಲ್ಲಿ ದಿನಾಂಕ 23-10- 2022ರಂದು ಕರ್ನಾಟಕ ಅನುಸೂಚಿತ ಜಾತಿ, ಪಂಗಡಗಳಿಗೆ ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳಲ್ಲಿ (Jobs ) ಮೀಸಲಾತಿ ಸಂಬಂಧ ಆಧ್ಯಾದೇಶವನ್ನು ದಿನಾಂಕ 01-11-2022ರಿಂದ ಜಾರಿಗೆ ಬರುವಂತೆ ಹೊರಡಿಸಲಾಗಿದೆ ಎಂದಿದ್ದಾರೆ.

ಈ ಆದೇಶದಂತೆ ನೇರ ನೇಮಕಾತಿ ಅಥವಾ ಪದೋನ್ನತಿಯಲ್ಲಿ ಅನುಸೂಚಿತ ಜಾತಿ, ಪಂಗಡಗಳಿಗೆ ಸೇರಿದ ವ್ಯಕ್ತಿಗಳಿಗೆ ಹೆಚ್ಚಿಸಲಾಗಿರುವ ಮೀಸಲಾತಿಯನ್ನು ಜಾರಿಗೊಳಿಸಲು ರೋಸ್ಟರ್ ಬಿಂದುಗಳನ್ನು ಗುರುತಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ತಿಳಿಸಿದ್ದಾರೆ.