Home latest Ration Card : ರೇಷನ್‌ ಕಾರ್ಡ್‌ ಹೊಂದಿರೋ ಎಲ್ಲರಿಗೂ ಒಂದು ಕಹಿ ಸುದ್ದಿ

Ration Card : ರೇಷನ್‌ ಕಾರ್ಡ್‌ ಹೊಂದಿರೋ ಎಲ್ಲರಿಗೂ ಒಂದು ಕಹಿ ಸುದ್ದಿ

Hindu neighbor gifts plot of land

Hindu neighbour gifts land to Muslim journalist

ಬಡತನ ರೇಖೆಗಿಂತ ಕೆಳಗಿರುವ ಜನರ ಜೀವನ ಬಹಳ ಕಷ್ಟಕರ ಆಗಿರುತ್ತದೆ ಮತ್ತು ಮೂಲಭೂತ ಸೌಕರ್ಯ ಪಡೆದುಕೊಳ್ಳುವಲ್ಲಿ ಆರ್ಥಿಕವಾಗಿ ಅಶಕ್ತರಾಗಿರುತ್ತಾರೆ. ಹಾಗಾಗಿ ಬಡವರ ಜೀವನ ಸುಧಾರಿಸಿಕೊಳ್ಳಲು ಸರ್ಕಾರ ಹೆಚ್ಚಿನ ಪ್ರಯತ್ನ ಮಾಡುತ್ತಿದೆ. ಅದಲ್ಲದೆ ಕೆಲವು ಸೌಲಭ್ಯಗಳನ್ನು ನೀಡಿ ಬಡವರನ್ನು ಪ್ರೋತ್ಸಾಹಿಸುತ್ತಿದೆ.

ಪಡಿತರ ಚೀಟಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಶೀಘ್ರದಲ್ಲೇ ಮಹತ್ವದ ನಿರ್ಧಾರವನ್ನು ಜಾರಿಗೆ ತರಲಿದೆ. ದೇಶಾದ್ಯಂತ ಲಕ್ಷಾಂತರ ಜನರ ಪಡಿತರ ಚೀಟಿಗಳು ರದ್ದಾಗಲಿವೆ. ಸರ್ಕಾರದ ಪ್ರಕಾರ ಸುಮಾರು 10 ಲಕ್ಷ ಜನರು ಉಚಿತ ಪಡಿತರ ಯೋಜನೆಯನ್ನು ವಂಚನೆಯಿಂದ ಪಡೆಯುತ್ತಿದ್ದಾರೆ. ಇಲಾಖೆಯು ಅವರ ಪಟ್ಟಿಯನ್ನು ಸಹ ಸಿದ್ಧಪಡಿಸಿದೆ ಮತ್ತು ಈ ಪಡಿತರ ಚೀಟಿಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದೆ. ಒಟ್ಟಿನಲ್ಲಿ ಸರ್ಕಾರವು ಜನತೆಯ ಏಳಿಗೆ ಮತ್ತು ಸಮಾನತೆಗಾಗಿ ಶ್ರಮಿಸುತ್ತಲೇ ಇದೆ. ಬಡವರಿಗೆ ಮೂಲಭೂತ ಸೌಲಭ್ಯ ಕಲ್ಪಿಸಲು ಸರ್ಕಾರ ಹರ ಸಾಹಸ ಪಡುತ್ತಿದೆ.

ವಿಶೇಷವಾಗಿ ದೇಶದ 80 ಕೋಟಿಗೂ ಹೆಚ್ಚು ಜನರು ಸರ್ಕಾರದ ಈ ಯೋಜನೆಯಿಂದ ಪ್ರಯೋಜನ ಪಡೆಯುತ್ತಿದ್ದಾರೆ. ಆದರೆ ಕೆಲವರು ಈ ಯೋಜನೆಯಡಿ ನಕಲಿ ಪಡಿತರವನ್ನು ಪಡೆಯುತ್ತಿದ್ದಾರೆ. ಅಂತಹವರ ವಿರುದ್ಧ ಕೇಂದ್ರ ಸರ್ಕಾರ ಈಗ ಕಠಿಣ ಕ್ರಮ ಕೈಗೊಳ್ಳುತ್ತಿದೆ. ಅವರ ಕಾರ್ಡ್‌ಗಳನ್ನು ರದ್ದುಗೊಳಿಸುವುದಲ್ಲದೆ, ಇದುವರೆಗೆ ಪಡೆದಿರುವ ಪಡಿತರವನ್ನು ಮರುಪಡೆಯಲು ನಿರ್ಧರಿಸಿದೆ. ಅದರಲ್ಲೂ ಉತ್ತರ ಪ್ರದೇಶದಲ್ಲಿ ನಕಲಿ ಪಡಿತರ ಪಡೆಯುತ್ತಿರುವವರ ಸಂಖ್ಯೆಯೇ ಅಧಿಕವಾಗಿದೆ ಎಂದು ವರದಿಯಲ್ಲಿ ತಿಳಿದು ಬಂದಿದೆ.

ಪ್ರಸ್ತುತ ಆದಾಯ ತೆರಿಗೆ ಪಾವತಿದಾರರು ಅಥವಾ 10 ಎಕರೆಗಿಂತ ಹೆಚ್ಚು ಜಮೀನು ಹೊಂದಿರುವವರ ಹೆಸರನ್ನು ಪಡಿತರ ಚೀಟಿಯಿಂದ ತೆಗೆದುಹಾಕಲಾಗುತ್ತದೆ. ಅಂತಹವರಿಗೆ ಇನ್ನು ಮುಂದೆ ಉಚಿತ ಪಡಿತರ ಸಿಗುವುದಿಲ್ಲ ಎಂದು ಸರ್ಕಾರ ಆದೇಶಿಸಿದೆ.

ಸರ್ಕಾರದ ನಿಯಮನುಸಾರ ನಾಲ್ಕು ತಿಂಗಳಿಂದ ಪಡಿತರ ತೆಗೆದುಕೊಳ್ಳದವರ ಕಾರ್ಡ್ ಕೂಡ ರದ್ದಾಗಲು ಸಿದ್ಧವಾಗುತ್ತಿದೆ. ಸಂಪೂರ್ಣ ಪಟ್ಟಿಯನ್ನು ಸಿದ್ಧಪಡಿಸಿ ಪಡಿತರ ವಿತರಕರಿಗೆ ಕಳುಹಿಸಲಾಗುವುದು ಎಂದು ಘೋಷಿಸಿದೆ. ಜೊತೆಗೆ ಅನರ್ಹರ ಸಂಪೂರ್ಣ ಪಟ್ಟಿಯನ್ನು ವಿತರಕರಿಗೆ ಕಳುಹಿಸುವುದಾಗಿ ಸರ್ಕಾರ ನಿರ್ಧರಿಸಿದೆ . ಈ ಪಟ್ಟಿಯನ್ನು ಆಧರಿಸಿ ಹೆಸರು ತೆಗೆದವರಿಗೆ ಡೀಲರ್‌ಗಳು ಪಡಿತರ ವಿತರಿಸುವುದಿಲ್ಲ. ವಿತರಕರು ಅನರ್ಹರ ಹೆಸರನ್ನು ಗುರುತಿಸಿ ಅವರ ವರದಿಗಳನ್ನು ಜಿಲ್ಲಾ ಕೇಂದ್ರಕ್ಕೆ ಕಳುಹಿಸಬೇಕು. ನಂತರ ಈ ವ್ಯಕ್ತಿಗಳ ಕಾರ್ಡ್‌ಗಳನ್ನು ರದ್ದುಗೊಳಿಸಲಾಗುತ್ತದೆ ಎಂದು ಆದೇಶಿಸಲಾಗಿದೆ.

ಅರ್ಹ ಜನರಿಗೆ ಮೂಲಭೂತ ಸೌಲಭ್ಯ ಒದಗಿಸುವುದು ಸರ್ಕಾರದ ನಿಲುವು ಆಗಿದೆ. ಎಲ್ಲರಿಗೂ ಸಮಾನ ಹಕ್ಕು ಮತ್ತು ಸೌಲಭ್ಯ ದೊರಕಿಸುವಲ್ಲಿ ಇದೊಂದು ಮಹತ್ವದ ಹೆಜ್ಜೆಯಾಗಿದೆ.