ಉಡುಪಿ ಜಿಲ್ಲೆಯಲ್ಲಿ ಘೋರ ದುರಂತ : ಮದುವೆಗೂ ಮುನ್ನ ರೋಸ್ ಸಮಾರಂಭದಲ್ಲಿ, ಕುಸಿದು ಬಿದ್ದು ಯುವತಿ ಸಾವು

Share the Article

ಉಡುಪಿ :  ರೋಸ್ ಸಮಾರಂಭದಲ್ಲಿ(ಕ್ರೈಸ್ತರ ಮದುವೆಯ ಮುನ್ನ ದಿನ ನಡೆಯುವ ಕಾರ್ಯಕ್ರಮ) ರಕ್ತದೊತ್ತಡ ಕಡಿಮೆಯಾಗಿ ಕುಸಿದುಬಿದ್ದು ಯುವತಿಯೋರ್ವಳು ಮೃತಪಟ್ಟ ಘಟನೆ ಕೊಳಲಗಿರಿ ಹಾವಂಜೆಯಲ್ಲಿ ನಡೆದಿದೆ.ಮೃತ ಯುವತಿಯನ್ನು ಹಾವಂಜೆ ನಿವಾಸಿ ಜೋಸ್ನಾ ಲೂಯಿಸ್ ಎಂದು ಗುರುತಿಸಲಾಗಿದೆ.

ಇವರು ನಿನ್ನೆ ರಾತ್ರಿ ಕೊಳಲಗಿರಿ ಹಾವಂಜೆಯ ಸಂಬಂಧಿಕರ ಮನೆಯಲ್ಲಿ ನಡೆದ ರೋಸ್ ಸಮಾರಂಭಕ್ಕೆ ತೆರಳಿದ್ದರು.

ಅಲ್ಲಿ 8.30ರ ಸುಮಾರಿಗೆ ಏಕಾಏಕಿಯಾಗಿ ರಕ್ತದ ಒತ್ತಡ ಕಡಿಮೆಯಾದ ಪರಿಣಾಮ ಜೋಸ್ನಾ ಅವರು ಅಲ್ಲೆ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದರು. ತಕ್ಷಣ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಜೋಸ್ನಾ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

Leave A Reply