WhatsApp : ವಾಟ್ಸಪ್ ನಲ್ಲಿ ಬಂತು, ನಿಮಗೆ ನೀವೇ ಮೆಸೇಜ್ ಮಾಡೋ ಹೊಸ ಫೀಚರ್ಸ್ | ಹೇಗೆ ಅಂತೀರಾ?

ಮೆಟಾ-ಮಾಲೀಕತ್ವದ ಜನಪ್ರಿಯ ವಾಟ್ಸಪ್ ಸಂದೇಶ ರವಾನೆ ಮಾಡಲು ಅತಿ ಹೆಚ್ಚು ಬಳಕೆಯಾಗುವ ಪ್ಲಾಟ್ ಫಾರಂ ಆಗಿದ್ದು, ಜನಪ್ರಿಯ ಅಪ್ಲಿಕೇಶನ್ ವಾಟ್ಸ್​ಆ್ಯಪ್ 2022 ರಲ್ಲಿ ಸಾಕಷ್ಟು ಬೆಳವಣಿಗೆ ಕಂಡು ಅತಿ ಹೆಚ್ಚು ಫೀಚರ್​ಗಳನ್ನು ಪರಿಚಯಿಸಿದೆ. ಇದಕ್ಕಾಗಿಯೇ ಇಂದು ವಿಶ್ವದಲ್ಲಿ ವಾಟ್ಸ್​ಆ್ಯಪ್ ಬಳಸುವವರ ಸಂಖ್ಯೆ 2 ಬಿಲಿಯನ್​ ದಾಟಿದ್ದು, ಭಾರತದಲ್ಲೇ ಸುಮಾರು 550 ಮಿಲಿಯನ್ ಜನರು ಈ ಅಪ್ಲಿಕೇಶನ್ ಬಳಸುತ್ತಿದ್ದಾರೆ.

ವಿಶ್ವದಲ್ಲಿಂದು ಕೋಟ್ಯಾಂತರ ಬಳಕೆದಾರರನ್ನು ಹೊಂದಿರುವ ಅಪ್ಲಿಕೇಶನ್ ಆಗಿ ಬೆಳೆದಿರುವ ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಪ್ಲಾಟ್‌ಫಾರ್ಮ್ (Messaging Platform) ವಾಟ್ಸಪ್ (WhatsApp) ದಿನಕ್ಕೊಂದು ಹೊಸ ವೈಶಿಷ್ಟ್ಯವನ್ನು ಪರಿಚಯಿಸುತ್ತಿರುವ ವಾಟ್ಸ್​ಆ್ಯಪ್ ಇದೀಗ ಬಹುನಿರೀಕ್ಷಿತ ಕಮ್ಯೂನಿಟಿ ಫೀಚರ್ಸ್‌ ಅನ್ನು (WhatsApp Community) ಪರಿಚಯಿಸಿದ ಬಳಿಕ ಸ್ಟೇಟಸ್ ನಲ್ಲಿ ವಾಯ್ಸ್ ನೋಟ್ ಹಾಕುವ ಫೀಚರ್ ಪರಿಚಯಿಸಲು ಮುಂದಾಗಿದೆ. ಇದೀಗ ಮತ್ತೊಂದು ವೈಶಿಷ್ಟ್ಯವನ್ನು ಪರಿಚಯ ಮಾಡಿದೆ . ಸದ್ಯದಲ್ಲೇ ವಾಟ್ಸ್​ಆ್ಯಪ್​ ಸ್ಟೇಟಸ್​ನಲ್ಲಿ ವಾಯ್ಸ್ ಮೆಸೇಜ್ ಅನ್ನು ಹಂಚಿಕೊಳ್ಳಬಹುದ್ದಾಗಿದ್ದು, ವಾಯ್ಸ್ ನೋಟ್ ಅನ್ನು ಸ್ಟೇಟಸ್​ನಲ್ಲಿ ಹಂಚಿಕೊಳ್ಳಬಹುದಾದ ಆಯ್ಕೆ ಮೊದಲಿಗೆ ಐಒಎಸ್ ಬಳಕೆದಾರರಿಗೆ ಲಭ್ಯವಾಗಲಿದೆ. ಈವರೆಗೆ ಸ್ಟೇಟಸ್​ನಲ್ಲಿ ವಿಡಿಯೋ, ಫೋಟೋ, ಲಿಂಕ್​ ಮತ್ತು ಬರಹಗಳನ್ನು ಮಾತ್ರ ಹಂಚಿಕೊಳ್ಳಬಹುದಾಗಿತ್ತು. ಆದರೆ ಇನ್ನೂ ಮುಂದೆ, ವಾಯ್ಸ್ ನೋಟ್ ಎಂಬ ಹೊಸ ಫೀಚರ್ ಬಂದರೆ ಬಳಕೆದಾರರು ಸ್ಟೇಟಸ್​ನಲ್ಲಿ ವಾಯ್ಸ್ ನೋಟ್ ಅಥವಾ ವಾಯ್ಸ್ ಕ್ಲಿಪ್​ಗಳನ್ನು ಶೇರ್ ಮಾಡಬಹುದಾಗಿದೆ. 30 ಸೆಕೆಂಡ್​ಗಳ ಕಾಲ ಇದು ಇರಲಿದೆ.

Message Yourself: ಇನ್ನುಂದೆ ವಾಟ್ಸ್​ಆ್ಯಪ್​ನಲ್ಲಿ (WhatsApp) ನಿಮ್ಮ ನಂಬರ್​ಗೆ ನೀವೇ ಮೆಸೇಜ್ ಮಾಡಬಹುದಾದ ಆಯ್ಕೆಯನ್ನು ಮೆಟಾ ಒಡೆತನದ ಕಂಪನಿ ಬಿಡುಗಡೆ ಮಾಡಿದ್ದು, ಈ ಹೊಸ ಮೆಸೇಜ್ ವಿಥ್ ಯುವರ್​ಸೆಲ್ಫ್ ಎಂಬ ಫೀಚರ್ ಕಾಂಟೆಕ್ಟ್ ಲಿಸ್ಟ್​​ನಲ್ಲಿ ಕಾಣಿಸಿಕೊಳ್ಳಲಿದೆ.

ಪ್ರಸಿದ್ಧ ಮೆಸೇಜಿಂಗ್ ವಾರಕ್ಕೆ ಒಂದು ಹೊಸ ಫೀಚರ್​ಗಳ ಬಗ್ಗೆ ಘೋಷಣೆ ಮಾಡುವ ವಾಟ್ಸ್​ಆ್ಯಪ್​ನಲ್ಲಿ ಇನ್ನಷ್ಟು ಅನೇಕ ಅಪ್ಡೇಟ್​ಗಳು ಬರಲಿಕ್ಕಿದ್ದು ಉಳಿದವು ಪರೀಕ್ಷಾ ಹಂತದಲ್ಲಿವೆ ಎನ್ನಲಾಗಿದೆ . ಇದರ ನಡುವೆ ವಾಟ್ಸ್​ಆ್ಯಪ್ ಆಂಡ್ರಾಯ್ಡ್ (Android) ಮತ್ತು ಐಓಎಸ್ ಬಳಕೆದಾರರಿಗೆ ಹೊಸ ಆಯ್ಕೆಯೊಂದನ್ನು ಪರಿಚಯಿಸಿದ್ದು, ಇನ್ನೂ ಮುಂದೆ, ವಾಟ್ಸ್​ಆ್ಯಪ್​ನಲ್ಲಿ (WhatsApp) ನಿಮ್ಮ ನಂಬರ್​ಗೆ ನೀವೇ ಮೆಸೇಜ್ ಮಾಡಬಹುದಾದ ಆಯ್ಕೆಯನ್ನು ಮೆಟಾ ಒಡೆತನದ ಕಂಪನಿ ಪರಿಚಯಿಸಿದೆ.

ಪ್ರಸ್ತುತ ಆಯ್ದ ಬಳಕೆದಾರರಿಗೆಷ್ಟೆ ಈ ಫೀಚರ್ ಲಭ್ಯವಾಗಿದ್ದು, ಮುಂದಿನ ವಾರದಿಂದ ಎಲ್ಲರಿಗೂ ಬಳಕೆಗೆ ಸಿಗಲಿದೆ ಎನ್ನಲಾಗುತ್ತಿದೆ. ವಾಟ್ಸ್​ಆ್ಯಪ್​ನ ಈ ಹೊಸ ಮೆಸೇಜ್ ವಿಥ್ ಯುವರ್​ಸೆಲ್ಫ್ ಎಂಬ ಫೀಚರ್ ಕಾಂಟೆಕ್ಟ್ ಲಿಸ್ಟ್​​ನಲ್ಲಿ ಕಾಣಲಿದ್ದು, ವಾಟ್ಸ್​ಆ್ಯಪ್ ತೆರೆದು ನ್ಯೂ ಚಾಟ್​ನಲ್ಲಿ ಕಾಂಟೆಕ್ಟ್ ಲಿಸ್ಟ್​​ ತೆರೆದಾಗ ಅಲ್ಲಿಬಳಕೆದಾರರಿಗೆ ಅವರದ್ದೇ ನಂಬರ್ ಕಾಣಸಿಗುತ್ತದೆ.

ಅದರ ಮೇಲೆ ಕ್ಲಿಕ್ ಮಾಡಿದರೆ ಚಾಟ್ ಬಾಕ್ಸ್ ಓಪನ್ ಆಗಲಿದ್ದು ನಿಮಗೆ ನೀವೇ ಮೆಸೇಜ್ ಕಳುಹಿಸುವ ಹೊಸ ಫೀಚರ್ ದೊರೆಯಲಿದೆ. ಈ ಮೆಸೇಜ್ ಚಾಟ್ ಬಾಕ್ಸ್​ನಲ್ಲಿ ಬಳಕೆದಾರರಿಗೆ ಎಲ್ಲ ರೀತಿಯ ಆಯ್ಕೆ ದೊರೆಯಲಿದ್ದು, ಫೋಟೋ, ವಿಡಿಯೋ, ಡಾಕ್ಯುಮೆಂಟ್, ಆಡಿಯೋ ಎಲ್ಲ ರೀತಿಯ ಫೈಲ್​ಗಳನ್ನು ರವಾನೆ ಮಾಡಬಹುದಾಗಿದೆ. ಅಲ್ಲದೆ, ಅಗತ್ಯ ದಾಖಲೆಗಳನ್ನು ಕೂಡ ಸೇವ್ ಮಾಡಬಹುದಾಗಿದೆ.

Leave A Reply

Your email address will not be published.