Home latest ಲಿವ್ ಇನ್ ರಿಲೇಷನ್ ಶಿಪ್ ನಲ್ಲಿದ್ದ ಮತ್ತೊಂದು ಯುವತಿಯ ಬಿತ್ತು ಹೆಣ!

ಲಿವ್ ಇನ್ ರಿಲೇಷನ್ ಶಿಪ್ ನಲ್ಲಿದ್ದ ಮತ್ತೊಂದು ಯುವತಿಯ ಬಿತ್ತು ಹೆಣ!

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು : ಸಿಲಿಕಾನ್‌ ಸಿಟಿಯ ರಾಮೂರ್ತಿನಗರದ ಟಿ.ಸಿಪಾಳ್ಯ ಎಂಬಲ್ಲಿ ಬಾಡಿಗೆ ರೂಮ್‍ವೊಂದನ್ನು ಮಾಡಿ ” ಲಿವ್ ಇನ್ ರಿಲೇಶನ್‌ಶಿಪ್‍”ನಲ್ಲಿದ್ದ ಪ್ರೇಮಿಗಳಿಬ್ಬರ ನಡುವೆ ಗಲಾಟೆ ಶುರುವಾಗಿ ಪ್ರಿಯತಮೆಯನ್ನೇ ಕೊಲೆಯಲ್ಲಿ ಅಂತ್ಯಗೊಳಿಸಿದ ದುರಂತ ಘಟನೆ ನಡೆದಿದೆ. ನೇಪಾಳ ಮೂಲದ ಕೃಷ್ಣಕುಮಾರಿ (23) ಕೊಲೆಯಾದ ಯುವತಿ, ನೇಪಾಳ ಮೂಲದ ಸಂತೋಷ್ ದಾಮಿ (27) ಕೊಲೆ ಮಾಡಿದ ಆರೋಪಿ. ಕೃಷ್ಣ ಕುಮಾರಿ ಹೊರಮಾವು ಯೂನಿಸೆಕ್ಸ್ ಸ್ಪಾದಲ್ಲಿ ಬ್ಯೂಟಿಷಿಯನ್ ಆಗಿ ಕೆಲಸ ಮಾಡುತ್ತಿದ್ದಳು. ಸಂತೋಷ್ ಟಿ.ಸಿ ಪಾಳ್ಯದಲ್ಲಿ ಬಾರ್ಬರ್ ಶಾಪ್‍ನಲ್ಲಿ ಕೆಲಸ ಮಾಡುತ್ತಿದ್ದರು ಈ ಇಬ್ಬರಿಗೂ ಪರಿಚಯವಾಗಿ ಪ್ರೇಮಾಂಕುರವಾಗಿತ್ತು.

ಅದಾದ ಬಳಿಕ ಕೃಷ್ಣಕುಮಾರಿ ಹಾಗೂ ಸಂತೋಷ್ ಇಬ್ಬರು ಸೇರಿ ರಾಮೂರ್ತಿನಗರದ ಟಿಸಿಪಾಳ್ಯದಲ್ಲಿ ಬಾಡಿಗೆ ರೂಂನಲ್ಲೇ ಇಬ್ಬರೂ ವಾಸಿಸುತ್ತಿದ್ದರು. ಇಬ್ಬರ ನಡುವೆ ನಿನ್ನೆ ರಾತ್ರಿ ಜಗಳ ನಡೆದಿದೆ‌.‌ ತಮ್ಮ ಮೇಲೆ ಹಲ್ಲೆ ಮಾಡುತ್ತಿರುವ ಬಗ್ಗೆ ಸ್ನೇಹಿತೆಯರಿಗೆ ವಿಡಿಯೋ ಕಾಲ್ ಮಾಡಿ ತಿಳಿಸಿದ್ದಳು. ಆದರೆ, ಸ್ನೇಹಿತೆಯರು ಮನೆಗೆ ಬರುವಷ್ಟರಲ್ಲಿ ಕೃಷ್ಣಕುಮಾರಿ ಹತ್ಯೆಯಾಗಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.
ಎರಡು ವರ್ಷದಿಂದಲೂ ಪರಿಚಿತರಾಗಿದ್ದ ಪ್ರೇಮಿಗಳು ಜೀವನ ಸಾಗಿಸಲು ಕೆಲಸ ಮಾಡುತ್ತಿದ್ದರು‌. ಈ ಮಧ್ಯೆ ಸಂತೋಷ್, ಪ್ರಿಯತಮೆ ಮೇಲೆ ಅನುಮಾನ ವ್ಯಕ್ಯಪಡಿಸಿದ್ದ. ಪರಪುರುಷನೊಂದಿಗೆ ಪ್ರಿಯತಮೆ ಸಂಬಂಧ ಹೊಂದಿದ್ದಾಳೆಂದು ಶಂಕೆ ವ್ಯಕ್ತಪಡಿಸಿ, ನಿನ್ನೆ ರಾತ್ರಿ ಕ್ಯಾತೆ ತೆಗೆದಿದ್ದನಂತೆ. ಇದೇ ವಿಚಾರಕ್ಕಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ಗಲಾಟೆಯಾಗಿದೆ. ಈ ವೇಳೆ ಕುತ್ತಿಗೆ ಹಿಡಿದು ತಲೆಯನ್ನು ಗೋಡೆ ಹೊಡೆದು ಮಾರಣಾಂತಿಕ ಹಲ್ಲೆ ನಡೆಸಿದ್ದ. ಹಲ್ಲೆ ಪರಿಣಾಮ ಯುವತಿ ಕುಸಿದುಬಿದ್ದಿದ್ದಳು. ಕೂಡಲೇ ಸಮೀಪದ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಕೃಷ್ಣಕುಮಾರಿ ಮೃತಪಟ್ಟಿದ್ದಾಳೆ. ಸದ್ಯ ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ರಾಮಮೂರ್ತಿನಗರ ಪೊಲೀಸರು ಸಂತೋಷ್​ನನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ ಎಂದು ಪೂರ್ವ ವಿಭಾಗದ ಡಿಸಿಪಿ ಭೀಮಾಶಂಕರ್ ಗುಳೇದ್ ಮಾಹಿತಿ ನೀಡಿದ್ದಾರೆ.