ಪಿಂಚಣಿ ದಾರರಿಗೆ ಸಿಹಿ ಸುದ್ದಿ| ರಾಜ್ಯ ಸರ್ಕಾರ ಪಿಂಚಣಿ ಸೌಲಭ್ಯ ಪರಿಷ್ಕರಣೆ ಮಾಡಿ ಆದೇಶ!!
ಪಿಂಚಣಿದಾರರಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ನಿವೃತ್ತಿ ಪಿಂಚಣಿ ಸೌಲಭ್ಯಕ್ಕೆ ಸಂಬಂಧಿಸಿದಂತೆ ಸರ್ಕಾರ ಮಾರ್ಪಾಡು ಆದೇಶ ಹೊರಡಿಸಿದೆ.
ಇಪಿಎಫ್ ಅಥವಾ ಕಾರ್ಮಿಕ ಭವಿಷ್ಯ ನಿಧಿ ಸೇವಾ ಕ್ಷೇತ್ರದಲ್ಲಿ ಕೆಲಸ ಮಾಡುವ ಉದ್ಯೋಗಿಗಳಿಗಾಗಿ ಭಾರತ ಸರಕಾರ ಜಾರಿಗೆ ತಂದಿರುವ ಪ್ರಮುಖ ಉಳಿತಾಯ ಯೋಜನೆಯಾಗಿದೆ. ಇದೀಗ, ನಿವೃತ್ತಿ ಪಿಂಚಣಿದಾರರಿಗೆ ಸಂಬಂಧಿಸಿದಂತೆ ಹೊಸ ಮಾಹಿತಿ ನೀಡಿದೆ.ಎನ್ ಪಿಎಸ್ ಗೆ ಒಳಪಡುವ ಸರ್ಕಾರಿ ನೌಕರರಿಗೆ ನಿವೃತ್ತಿ ಉಪದಾನ, ಮರಣ ಉಪದಾನ ಹಾಗೂ ಕುಟುಂಬ ಪಿಂಚಣಿ ಸೌಲಭ್ಯವನ್ನು 2018 ರ ಏಪ್ರಿಲ್ 1 ರ ಬದಲಿಗೆ 2006 ಏಪ್ರಿಲ್ 1 ರಿಂದಲೇ ಪೂರ್ವನ್ವಯವಾಗುವಂತೆ ಆದೇಶ ನೀಡಲಾಗಿದೆ.
ಎನ್ ಪಿಎಸ್ ಅಧಿಕಾರಿಗಳು ಮತ್ತು ನೌಕರರಿಗೆ ಅನ್ವಯವಾಗುವಂತೆ ಸೌಲಭ್ಯದ ಹಿಂದಿನ ಆದೇಶ ಮಾರ್ಪಡಿಸಿ 2006 ರ ಏಪ್ರಿಲ್ 1 ರಿಂದಲೇ ಜಾರಿಗೆ ಬರುವಂತೆ ವಿಸ್ತರಣೆ ಮಾಡಲಾಗಿದೆ.
ನಿವೃತ್ತಿ ಉಪದಾನ, ಮರಣ ಉಪದಾನ ಹಾಗೂ ಕುಟುಂಬ ಪಿಂಚಣಿ ಸೌಲಭ್ಯ ಏಪ್ರಿಲ್ 1 ರ 2018 ರಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಲಾಗಿದ್ದರಿಂದ ಈ ಸೌಲಭ್ಯವನ್ನು 2006 ರಿಂದ ಮರಣ ಹೊಂದಿದ ಅಥವಾ ನಿವೃತ್ತಿ ಹೊಂದಿದ ಪ್ರಕರರಣಗಳಿಗೂ ಎರಡು ಅನ್ವಯಿಸಲು 2021 ರ ಅಗಸ್ಟ್ 23 ರಂದು ನಡೆಸ ಎಸ್ ಪಿಎಸ್ ಅಧಿಕಾರಿಗಳ ಸಮಿತಿ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.