HDFC Badthe Kadam Scholarship : ಪಿಯು, ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ | ಸಿಗಲಿದೆ ರೂ.18 ಸಾವಿರದಿಂದ 1 ಲಕ್ಷದವರೆಗೆ ವಿದ್ಯಾರ್ಥಿ ವೇತನ!
ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುವ ನಿಟ್ಟಿನಲ್ಲಿ ಎಸ್ ಬಿಐ, ಹೆಚ್‌ಡಿಎಫ್‌ಸಿ ಬ್ಯಾಂಕ್ ಗಳು ಹಾಗೆ ಇನ್ನೂ ಕೆಲವು ಶಿಕ್ಷಣ ಸಂಸ್ಥೆಗಳು ಸ್ಕಾಲರ್‌ಶಿಪ್ ಮೂಲಕ ಮಕ್ಕಳ ಓದುವ ಕನಸಿಗೆ ಆಸರೆಯಾಗುತ್ತಿದೆ.
ಹೆಚ್‌ಡಿಎಫ್‌ಸಿ ಲಿಮಿಟೆಡ್ ಬಧ್ತೆ ಕದಮ್ ಸ್ಕಾಲರ್‌ಶಿಪ್, ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣವನ್ನು ಮುಂದುವರಿಸಲು ಹಣಕಾಸಿನ ನೆರವು ನೀಡುವ ಸಲುವಾಗಿ ಆನ್ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿಶೇಷವಾಗಿ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಹಾಗೂ ಕೋವಿಡ್-19 ಸಾಂಕ್ರಾಮಿಕ ರೋಗದಿಂದ ಸಂಕಷ್ಟಕ್ಕೆ ಸಿಲುಕಿದವರಿಗೆ ಆರ್ಥಿಕ ನೆರವು ಒದಗಿಸಲಾಗುತ್ತದೆ.
ಹೆಚ್‌ಡಿಎಫ್‌ಸಿ ಲಿಮಿಟೆಡ್ ಬಧ್ತೆ ಕದಮ್ ಸ್ಕಾಲರ್‌ಶಿಪ್ ಮೂಲಕ 2022-23ನೇ ಸಾಲಿನ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಿದ್ದು, ಆನ್‌ಲೈನ್ ಮೂಲಕ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ತಮ್ಮ ಶಿಕ್ಷಣವನ್ನು 9ನೇ ತರಗತಿಯಿಂದ ಪದವಿ ಹಂತದವರೆಗೆ ಶಿಕ್ಷಣ ಮುಂದುವರೆಸಲು ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ನೀಡುವ ಗುರಿಯನ್ನು ಹೊಂದಿದೆ.ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು, ಮಾನ್ಯತೆ ಪಡೆದ ಕಾಲೇಜು ಮತ್ತು ವಿಶ್ವವಿದ್ಯಾಲಯದಲ್ಲಿ, 9ನೇ ತರಗತಿಯಿಂದ ಪದವಿ ಹಂತದವರೆಗೆ ಅಧ್ಯಯನ ಮಾಡುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
11 ಮತ್ತು 12ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು, ಬಿಎ, ಬಿಕಾಂ, ಬಿಎಸ್‌ಸಿ ಇತ್ಯಾದಿ ಸಾಮಾನ್ಯ ಪದವಿ ಕೋರ್ಸ್‌ಗಳು ಮತ್ತು ವೃತ್ತಿಪರ ಕೋರ್ಸ್‌ಗಳನ್ನು ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಕೂಡ ಅರ್ಜಿ ಸಲ್ಲಿಸಿ ಯೋಜನೆಯ ಸದುಪಯೋಗ ಪಡಿಸಿಕೊಳ್ಳಬಹುದು.ಈ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಕೆಗೆ 30-12-2022 ಕೊನೆ ದಿನ ವಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹೆಚ್‌ಡಿಎಫ್‌ಸಿ ಲಿಮಿಟೆಡ್ ಬಧ್ತೆ ಕದಮ್ ಸ್ಕಾಲರ್‌ಶಿಪ್ ಅನ್ನು, ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕ, ಹಾಸ್ಟೆಲ್ ಶುಲ್ಕ, ಇಂಟರ್ನೆಟ್, ಲ್ಯಾಪ್‌ಟಾಪ್, ಪುಸ್ತಕಗಳನ್ನು ಒಳಗೊಂಡತೆ ಶೈಕ್ಷಣಿಕ ವೆಚ್ಚಗಳನ್ನು ಭರಿಸಲು ಬಳಸಿಕೊಳ್ಳಬಹುದಾಗಿದೆ. ಈ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು ಹೀಗಿವೆ:ಹಿಂದಿನ ತರಗತಿ ಅಥವಾ ಬೋರ್ಡ್ ಪರೀಕ್ಷೆಗಳ ಅಂಕ ಪಟ್ಟಿ, ಶುಲ್ಕ ರಸೀದಿ, ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್ ಪ್ರತಿ, ಪಾಸ್‌ಪೋರ್ಟ್ ಸೈಜ್ ಫೋಟೋ ಈ ಎಲ್ಲ ದಾಖಲೆಗಳು ಅರ್ಜಿ ಸಲ್ಲಿಸಲು ಬೇಕಾಗಿವೆ.
ಅರ್ಜಿ ಸಲ್ಲಿಸುವ ವಿದ್ಯಾರ್ಥಿಯು ಹಿಂದಿನ ತರಗತಿ ಅಥವಾ ಬೋರ್ಡ್ ಪರೀಕ್ಷೆಗಳಲ್ಲಿ ಶೇಕಡ 60ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರಬೇಕು. ಕುಟುಂಬದ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದ ರೂ.6 ಲಕ್ಷ ಅಥವಾ ಅದಕ್ಕಿಂತ ಕಡಿಮೆ ಇರಬೇಕಾಗುತ್ತದೆ .
ವಿದ್ಯಾರ್ಥಿ ವೇತನದ ಬಗ್ಗೆ ತಿಳಿಯುವುದಾದರೆ:
11 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳಿಗೆ – ರೂ. 18,000 ದೊರೆಯಲಿದೆ ಅದೆ ರೀತಿ, ಪದವಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ- ರೂ. 30,000 ರೂ. ದೊರೆಯಲಿದೆ. ಇಷ್ಟೇ ಅಲ್ಲದೆ, ಇನ್ನೂ ಹಲವು ವಿದ್ಯಾರ್ಥಿವೇತನಗಳಿದ್ದು, ಕೋವಿಡ್ ಸಂದರ್ಭದಲ್ಲಿ ಪೋಷಕರನ್ನು ಕಳೆದುಕೊಂಡ ವಿದ್ಯಾರ್ಥಿನಿಯರಿಗೆ ರೂ.1 ಲಕ್ಷದ ವರೆಗೆ ವಿದ್ಯಾರ್ಥಿವೇತನ ದೊರೆಯಲಿದೆ.