2nd PUC annual exam 2023 : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನೋಂದಣಿ ದಿನಾಂಕ ವಿಸ್ತರಣೆ!
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಮಾರ್ಚ್ ನಲ್ಲಿ ನಡೆಯುವ 2023ರ ವಾರ್ಷಿಕ ಪರೀಕ್ಷೆಗೆ ಖಾಸಗಿ ಅಭ್ಯರ್ಥಿಗಳು ವಿದ್ಯಾರ್ಥಿಗಳ ನೋಂದಣಿಗೆ ಅವಧಿ ವಿಸ್ತರಿಸಲಾಗಿದೆ. ಇದರ ಜೊತೆಗೆ ಅನುತ್ತೀರ್ಣ ಹಾಗೂ ಫಲಿತಾಂಶ ತಿರಸ್ಕರಿಸಿದ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕ ಸಂದಾಯ ಮಾಡಲು ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ.
ಈ ಮುನ್ನ ಖಾಸಗಿ ಅಭ್ಯರ್ಥಿಗಳು, ಅನುತ್ತೀರ್ಣ ಹಾಗೂ ಫಲಿತಾಂಶ ತಿರಸ್ಕರಿಸಿದ ವಿದ್ಯಾರ್ಥಿಗಳ ನೋಂದಣಿ ಮತ್ತು ಪರೀಕ್ಷಾ ಶುಲ್ಕ ಸಂದಾಯ ಮಾಡಲು ನವೆಂಬರ್ 28 ರವರೆಗೆ ಅವಕಾಶ ನೀಡಲಾಗಿತ್ತು. ಈಗ ಈ ದಿನಾಂಕವನ್ನು ಪೋಷಕರು ಹಾಗೂ ವಿದ್ಯಾರ್ಥಿಗಳ ಮನವಿ ಮೇರೆಗೆ ಡಿಸೆಂಬರ್ 12ರ ವರೆಗೆ ವಿಸ್ತರಿಸಲಾಗಿದೆ.
ಈ ಕುರಿತು ಕರ್ನಾಟಕ ಕರ್ನಾಟಕ ಶಾಲಾ ಪರಿಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಸುತ್ತೋಲೆ ಹೊರಡಿಸಿದ್ದು, ಪೋಷಕರು ಹಾಗು ವಿದ್ಯಾರ್ಥಿಗಳು ದೂರವಾಣಿ ಕರೆ ಮತ್ತು ಮನವಿ ಪತ್ರಗಳ ಮೇರೆಗೆ ಖಾಸಗಿ ಅಭ್ಯರ್ಥಿಯಾಗಿ ನೋಂದಾಯಿಸಿಕೊಳ್ಳುವ ದಿನಾಂಕವನ್ನು ಮತ್ತು ಅನುತ್ತೀರ್ಣ ಹಾಗು ಫಲಿತಾಂಶ
ತಿರಸ್ಕರಿಸಿದ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಪಾವತಿಸುವ ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ತಿಳಿಸಿದೆ.