ಡಿ.4 ರಿಂದ 5ರವರೆಗೆ ಮದ್ಯ ಮಾರಾಟ, ಸಾಗಾಣಿಕೆ ಮತ್ತು ಶೇಖರಣೆ ನಿಷೇಧ!

Share the Article

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಡಿ.4 ರಿಂದ ಡಿ.5ರವರೆಗೆ ಎಲ್ಲ ತರಹದ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಇಂತಹ ಒಂದು ಆದೇಶವನ್ನು ಮಂಡ್ಯ ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಅವರು ಹೊರಡಿಸಿದ್ದಾರೆ. ಶ್ರೀರಂಗಪಟ್ಟಣ ಟೌನ್ ಮತ್ತು ಗಂಜಾಂನಲ್ಲಿ ಹನುಮ ಜಯಂತಿ ಅಂಗವಾಗಿ ಡಿ.4ರಂದು ಶೋಭಾ ಸಂಕೀರ್ತನಾ ಯಾತ್ರೆ ನಡೆಯಲಿದ್ದು, ಯಾತ್ರೆಯಲ್ಲಿ ನೂರಾರು ಸಂಖ್ಯೆಯಲ್ಲಿ ಜನರು ಸೇರಲಿದ್ದಾರೆ.

ಹೀಗಾಗಿ, ಡಿ.4 ರಂದು ಬೆಳಿಗ್ಗೆ 6 ಗಂಟೆಯಿಂದ ಡಿ.5ರ ಬೆಳಿಗ್ಗೆ 6 ಗಂಟೆಯವರೆಗೆ ಶ್ರೀರಂಗಪಟ್ಟಣ ಟೌನ್ ಮತ್ತು ಗಂಜಾಂ ವ್ಯಾಪ್ತಿಯಲ್ಲಿ ಬರುವ ಎಲ್ಲ ತರಹದ ಮದ್ಯದ ಅಂಗಡಿ, ಬಾರ್‌ಗಳನ್ನು ಮುಚ್ಚಲು ಹಾಗೂ ಮದ್ಯ ಮಾರಾಟ, ಸಾಗಾಣಿಕೆ ಮತ್ತು ಶೇಖರಣೆ ಮಾಡುವುದನ್ನು ನಿಷೇಧಿಸಲಾಗಿದೆ.

ಶ್ರೀರಂಗಪಟ್ಟಣವು ಕೋಮು ಸೂಕ್ಷ್ಮ ಪ್ರದೇಶವಾಗಿರುವುದರಿಂದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ  ಜಿಲ್ಲಾಧಿಕಾರಿಗಳು ಈ ಆದೇಶ ಹೊರಡಿಸಿದ್ದಾರೆ.

Leave A Reply