Ration Card : ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸುವವರಿಗೆ ಸಿಹಿ ಸುದ್ದಿ |
ಬಡತನ ರೇಖೆಗಿಂತ ಕೆಳಗಿರುವ ಜನರ ಜೀವನ ಬಹಳ ಕಷ್ಟಕರ ಆಗಿರುತ್ತದೆ ಮತ್ತು ಮೂಲಭೂತ ಸೌಕರ್ಯ ಪಡೆದುಕೊಳ್ಳುವಲ್ಲಿ ಆರ್ಥಿಕವಾಗಿ ಅಶಕ್ತರಾಗಿರುತ್ತಾರೆ. ಹಾಗಾಗಿ ಬಡವರ ಜೀವನ ಸುಧಾರಿಸಿಕೊಳ್ಳಲು ಸರ್ಕಾರ ಹೆಚ್ಚಿನ ಪ್ರಯತ್ನ ಮಾಡುತ್ತಿದೆ ಅದಲ್ಲದೆ ಕೆಲವು ಸೌಲಭ್ಯಗಳನ್ನು ನೀಡಿ ಬಡವರನ್ನು ಪ್ರೋತ್ಸಾಹಿಸುತ್ತಿದೆ. ಒಟ್ಟಿನಲ್ಲಿ ಸರ್ಕಾರವು ಜನತೆಯ ಏಳಿಗೆಗಾಗಿ ಶ್ರಮಿಸುತ್ತಲೇ ಇದೆ. ಬಡವರಿಗೆ ಮೂಲಭೂತ ಸೌಲಭ್ಯ ಕಲ್ಪಿಸಲು ಸರ್ಕಾರ ಹರ ಸಾಹಸ ಪಡುತ್ತಿದೆ.ಪ್ರಸ್ತುತ ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಮಹತ್ವದ ಮಾಹಿತಿಯೊದನ್ನು ನೀಡಿದೆ.
ಹೌದು ರಾಜ್ಯದ ನಾಗರೀಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ahara.kar.nic.in ಜಾಲತಾಣದ ಮೂಲಕ, ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಕರ್ನಾಟಕ ಪಡಿತರ ಚೀಟಿ ( New Ration Card ) ಪಟ್ಟಿ 2022 ರಲ್ಲಿ ಹೆಸರು ಇಲ್ಲದ ಎಲ್ಲಾ ಜನರು ಈಗ ಅಗತ್ಯವಿರುವ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು. ಜೊತೆಗೆ ಅರ್ಜಿಯ ಸ್ಥಿತಿಗತಿಯನ್ನು ಪರಿಶೀಲಿಸಬಹುದು ಮಾಹಿತಿ ನೀಡಲಾಗಿದೆ.
ಹೊಸ ಬಿಪಿಎಲ್, ಎಪಿಎಲ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಲು ಅರ್ಹತೆಗಳು :
- ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸುವವರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
- ಈಗಾಗಲೇ ಪಡಿತರ ಚೀಟಿ ಹೊಂದಿರದೇ ಇರೋರು ಅರ್ಜಿ ಸಲ್ಲಿಸಬಹುದು
- ಹೊಸದಾಗಿ ಮದುವೆಯಾದ ದಂಪತಿಗಳು, ಹೊಸ ಪಡಿತರ ಚೀಟಿಗಾಗಿ ಅರ್ಜಿ ಹಾಕಬಹುದು
- ಕುಟುಂಬದ ಆದಾಯದ ಮೇಲೆ ಪಡಿತರ ಚೀಟಿ ಬಿಪಿಎಲ್, ಎಪಿಎಲ್ ಎಂಬುದು ನಿರ್ಧರಿತವಾಗಿರಲಿದೆ.
•
ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಬೇಕಿರುವ ಅಗತ್ಯ ದಾಖಲೆಗಳು: - ಇತ್ತೀಚಿನ ಪಾರ್ಸ್ ಪೋರ್ಟ್ ಅಳತೆಯ ಭಾವಚಿತ್ರ
- ವೋಟರ್ ಐಡಿ
- ಆಧಾರ್ ಕಾರ್ಡ್
- ವಯಸ್ಸಿನ ಪ್ರಮಾಣ ಪತ್ರ
- ಡ್ರೈವಿಂಗ್ ಲೈಸೆನ್ಸ್
- ಮೊಬೈಲ್ ಸಂಖ್ಯೆ
- ಸ್ವಯಂ ಘೋಷಿತ ಪ್ರಮಾಣ ಪತ್ರ
ಈ ಮೇಲ್ಕಂಡ ದಾಖಲೆಗಳಿದ್ದರೆ , ಆನ್ ಲೈನ್ ಮೂಲಕ ಹೊಸ ಪಡಿತರ ಚೀಟಿಗಾಗಿ ನೀವು ಅರ್ಜಿಯನ್ನು ಸಲ್ಲಿಸಬಹುದು.
ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಈ ಕ್ರಮ ಅನುಸರಿಸಿ:
- kar.nic.in ಈ ಅಧಿಕೃತ ವೆಬ್ ಸೈಟ್ ತಾಣಕ್ಕೆ ಭೇಟಿ ನೀಡಬೇಕು.
- ಈ ಜಾಲತಾಣಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನೀವು ಮುಖಪುಟದಲ್ಲಿನ ಇ-ಸೇವೆಗಳು ಎಂಬಲ್ಲಿ ಕ್ಲಿಕ್ ಮಾಡಿ.
ಇದಲ್ಲದೇ. - https://ahara.kar.nic.in/Home/EServices ತಾಣಕ್ಕೂ ನೇರವಾಗಿ ಕ್ಲಿಕ್ ಮಾಡಬಹುದಾಗಿದೆ.
- ಈ ಜಾಲತಾಣದಲ್ಲಿ ಕ್ಲಿಕ್ ಮಾಡಿದ ನಂತ್ರ, ನೀವು ಇ-ಪಡಿತರ ಚೀಟಿ ಆಯ್ಕೆ. ಆ ಬಳಿಕ ಕೆಳಗಡೆ ಸ್ಕ್ರಾಲ್ ಮಾಡಿದ್ರೇ.. ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸೋ ಲಿಂಕ್ ಸಿಗಲಿದೆ.
- ಅಲ್ಲಿ ಕ್ಲಿಕ್ ಮಾಡಿ ಈ ಬಳಿಕ ನೀವು ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಭಾಷೆಯನ್ನು ಆಯ್ಕೆ ಮಡಿ, • ಅಲ್ಲಿ ಕೇಳುವಂತ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ.
- ನೀವು ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸುತ್ತಿದ್ದೀರಾ ಎನ್ನುವುದನ್ನು ಆಯ್ಕೆ ಮಾಡಿಕೊಂಡು ನಮೂದಿಸಿ.
- ಈ ಬಳಿಕ ಅರ್ಜಿಯ ಜೊತೆಗೆ ಕೇಳುವಂತ ದಾಖಲೆಗಳ ಸಾಫ್ಟ್ ಕಾಫಿಗಳನ್ನು ಅಪ್ ಲೋಡ್ ಮಾಡಿ,
- ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಿ
ಮುಖ್ಯವಾಗಿ ಆನ್ ಲೈನ್ ಮೂಲಕ ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿಲ್ಲ. ಆದರೆ ಪಡಿತರ ಚೀಟಿ ನಿಮ್ಮ ಕೈಗೆ ಬಂದ ನಂತರ , ಸಂಬಂಧ ಪಟ್ಟಂತ ಅಧಿಕಾರಿಯಿಂದ ಪಡೆಯಲು ರೂ.100 ಪಾವತಿಸಬೇಕಿದೆ.
ಈ ಮೂಲಕ ನೀವು ಹೊಸ ಪಡಿತರ ಚೀಟಿಗಾಗಿ ಆನ್ ಲೈನ್ ಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.