IIMB Recruitment 2022: ಪಿಜಿ ಆದವರಿಗೆ ಉದ್ಯೋಗ | ಮಾಸಿಕ ವೇತನ ರೂ.36,000

ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್
ಬೆಂಗಳೂರು(Indian Institute of Management Bengaluru) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಈ ಎಲ್ಲಾ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಆಸಕ್ತರು ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು.

 

ಒಟ್ಟು 2 ಅಕಾಡೆಮಿಕ್ ಅಸೋಸಿಯೇಟ್(Academic Associate) ಹುದ್ದೆಗಳು ಖಾಲಿ ಇದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ(Bengaluru) ಹುದ್ದೆ ಇರುತ್ತದೆ. ಇದೇ ಡಿಸೆಂಬರ್ 25, 2022 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 06/12/2022
ಅರ್ಜಿ ಸಲ್ಲಿಸಲು ಕೊನೆಯ ದಿನ: 25/12/2022

ಸಂಸ್ಥೆ : ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು
ಹುದ್ದೆ: ಅಕಾಡೆಮಿಕ್ ಅಸೋಸಿಯೇಟ್
ಒಟ್ಟು ಹುದ್ದೆ : 2
ವೇತನ ಮಾಸಿಕ: ₹ 30,000-36,000
ಸ್ಥಳ : ಬೆಂಗಳೂರು

ವಿದ್ಯಾರ್ಹತೆ : ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ಅರ್ಜಿ ಶುಲ್ಕ: ಶುಲ್ಕ ವಿನಾಯಿತಿ ಇದೆ.

ಆಯ್ಕೆ ಪ್ರಕ್ರಿಯೆ : ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

Leave A Reply

Your email address will not be published.