ನಂಜನಗೂಡಿನಲ್ಲಿ ರೈತನ ಮೇಲೆ ಹುಲಿ ದಾಳಿ, ಗಂಭೀರ ಗಾಯ, ಪ್ರಾಣಾಪಾಯದಿಂದ ಪಾರು

Share the Article

ಮೈಸೂರು : ನಂಜನಗೂಡು ತಾಲೂಕಿನ ಬಳ್ಳೂರು ಹುಂಡಿಯಲ್ಲಿ ರೈತನೊಬ್ಬ ಜಮೀನಿನಲ್ಲಿ ಜಾನುವಾರುಗಳನ್ನು ಮೇಯಿಸುತ್ತಿದ್ದ ಸಂದರ್ಭದಲ್ಲಿ ಹುಲಿ ದಾಳಿ ನಡೆಸಿದ್ದು, ತೀವ್ರ ಗಾಯಗೊಳಿಸಿ ಸಾವಿನಿಂದ ಪಾರಾದ ಘಟನೆ ಬೆಳಕಿಗೆ ಬಂದಿದೆ. ಸ್ವಾಮೀ (52) ಗಂಭೀರ ಗಾಯಗೊಂಡ ರೈತ ಎಂದು ಗುರುತಿಸಲಾಗಿದೆ.

ಹುಲಿ ದಾಳಿ ಮಾಡಿದಾಗ ಜೋರಾಗಿ ಕಿರುಚಿದ್ದು, ಹುಲಿಯಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಅಷ್ಟರಲ್ಲಿ ಅವರ ತಲೆ, ಕೆನ್ನೆ, ಮುಖದ ಭಾಗಕ್ಕೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ ಈ ವೇಳೆ ಗಾಬರಿಗೊಂಡ ಸ್ವಾಮಿ ಅವರು ಜೋರಾಗಿ ಕಿರುಚಿಕೊಂಡಿದ್ದು, ಪ್ರತಿರೋಧ ಒಡ್ಡಿದ್ದಾರೆ ಎನ್ನಲಾಗಿದೆ. ಕೊನೆಗೂ ಹುಲಿಯಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಅಷ್ಟರಲ್ಲಿ ಅವರ ತಲೆ, ಕೆನ್ನೆ, ಮುಖದ ಭಾಗಕ್ಕೆ ಗಾಯಗಳಾಗಿವೆ. ಸದ್ಯ ಗಾಯಾಳು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ, ಈ ವಿಚಾರ ತಿಳಿದ ಗ್ರಾಮಸ್ಥರು ಭಾರೀ ಆತಂಕಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Leave A Reply