ವಿದ್ಯಾರ್ಥಿಗಳೇ ಗಮನಿಸಿ | ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ʼಪಬ್ಲಿಕ್‌ ಪರೀಕ್ಷೆʼ – ಶಿಕ್ಷಣ ಇಲಾಖೆ ಆದೇಶ

ಮಕ್ಕಳು ಕಲಿಕೆಯಲ್ಲಿ ಹಿಂದೆ ಉಳಿಯುವುದನ್ನು ತಪ್ಪಿಸುವ ನಿಟ್ಟಿನಲ್ಲಿ ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ 1 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಿ ಉತ್ತೀರ್ಣ ಮಾಡಲಾಗುತ್ತಿತ್ತು. ಆದರೆ ಹೀಗೆ ಮಾಡುವುದರಿಂದ ಮಕ್ಕಳಲ್ಲಿ ಕಲಿಕೆ ಆಸಕ್ತಿ ಕಡಿಮೆಯಾಗುತ್ತಿದೆ. ಇದರ ಜೊತೆಗೆ ಕೊರೊನಾದಿಂದ ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದುಳಿದಿದ್ದು, ಇದೇ ಪರಿಸ್ಥಿತಿ ಮುಂದುವರೆದರೆ ಎಸ್.ಎಸ್.ಎಲ್. ಸಿ , ಪಿಯುಸಿ ಪರೀಕ್ಷೆ ಸೇರಿದಂತೆ ವಿವಿಧ ಕೋರ್ಸ್ ಗಳ ಪ್ರವೇಶ ಪರೀಕ್ಷೆಗಳನ್ನು ಎದುರಿಸಲು ವಿದ್ಯಾರ್ಥಿಗಳು ಸಂಕಷ್ಟ ಎದುರಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆಗೆ ಶಿಕ್ಷಣ ಇಲಾಖೆ ಕ್ರಮ ಕೈಗೊಳ್ಳಲು ಮುಂದಾಗಿದೆ.

ಹೀಗಾಗಿ, ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಲು ರಾಜ್ಯದ ಎಲ್ಲಾ ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಲಾಗಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಪರಿಶೀಲನೆಗಾಗಿ ಪಬ್ಲಿಕ್ ಪರೀಕ್ಷೆಯ ಮಾದರಿಯಲ್ಲೇ ಪರೀಕ್ಷೆ ನಡೆಸುವ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ.

Leave A Reply

Your email address will not be published.