ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಜಾಗೃತಿ ಮೂಡಿಸಿದ ನಟಿ ರಶ್ಮಿಕಾ!

Share the Article

ನ್ಯಾಷನಲ್ ಕ್ರಷ್ ನಟಿ ರಶ್ಮಿಕಾ ಮಂದಣ್ಣ ಭಾರತೀಯ ಚಿತ್ರರಂಗದ ಬಹುಬೇಡಿಕೆಯ ನಟಿಯರಲ್ಲಿ ಇವರೂ ಒಬ್ಬರು. ಹಲವಾರು ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಲ್ಲದೆ, ಪುಷ್ಪ ಸಿನಿಮಾ ಹಿಟ್ ಬಳಿಕ ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ರಶ್ಮಿಕಾ ಮಿಂಚುತ್ತಿದ್ದಾರೆ.

ಸದ್ಯ ನಟಿ ಸಾಕಷ್ಟು ಟ್ರೋಲ್ ಗಳಿಗೆ ಒಳಗಾಗಿದ್ದು, ಹಲವಾರು ಕಾರಣಗಳಿಂದ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಹಾಗೇ ಸಿನಿಮಾರಂಗದಿಂದ ನಟಿಯನ್ನು ಬ್ಯಾನ್ ಮಾಡಿ ಎಂಬ ಒತ್ತಾಯವೂ ಕೇಳಿಬರುತ್ತಿತ್ತು. ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದೇ ತಮ್ಮ ಕೆಲಸದಲ್ಲಿ ಮಗ್ನರಾಗಿರುವ ರಶ್ಮಿಕಾ ಇದೀಗ ಹೆಣ್ಣು ಮಕ್ಕಳ ಶಿಕ್ಷಣ ಅಭಿಯಾನದ ಮೂಲಕ ಎಲ್ಲರ ಮೆಚ್ಚಿಗೆಗೆ ಪಾತ್ರರಾಗಿದ್ದಾರೆ.

ರಶ್ಮಿಕಾ ಮಂದಣ್ಣ ಇನ್ಸ್ಟಾಗ್ರಾಮ್ ಪೇಜ್ ನಲ್ಲಿ ತಮ್ಮ ಹೆಸರನ್ನು ಉಲ್ಟಾ ಬರೆಯುವುದರ ಮೂಲಕ ಎಲ್ಲರಲ್ಲೂ ಅಚ್ಚರಿ ಮತ್ತು ಕುತೂಹಲವನ್ನು ಮೂಡಿಸಿದ್ದರು. ಈ ರೀತಿಯಾಗಿ ಪೋಸ್ಟ್ ಮಾಡಲು ಕಾರಣ ಏನಿರಬಹುದು ಎಂದು ಎಲ್ಲರಲ್ಲೂ ಪ್ರಶ್ನೆ ಮೂಡಿದ್ದು, ಚರ್ಚೆ ಕೂಡ ನಡೆಯಿತು. ಕೆಲವರು ಟ್ರೋಲ್‍ ಗೆ ವ್ಯಂಗ್ಯ ಮಾಡಲು ಆ ರೀತಿ ಮಾಡಿದ್ರಾ ಎಂದರೆ, ಇನ್ನೂ ಹಲವರು ಹಲವು ರೀತಿಯಲ್ಲಿ ಕಾಮೆಂಟ್ ಮಾಡಿದ್ದಾರೆ.

ಆದರೆ ರಶ್ಮಿಕಾ ತಮ್ಮ ಹೆಸರನ್ನು ಉಲ್ಟಾ ಬರೆಯಲು ಬೇರೆಯೇ ಕಾರಣ ಇದೆಯಂತೆ. ಅದೇನೆಂದರೆ, ಅವರು ಹೆಣ್ಣು ಮಕ್ಕಳಿಗೆ ಶಿಕ್ಷಣ ಕೊಡಿ ಎಂದು ಹೇಳುವ ಅಭಿಯಾನವನ್ನು ಆರಂಭಿಸಿದ್ದು, ಅನಕ್ಷರಸ್ಥ ಹೆಣ್ಣುಮಕ್ಕಳಿಗೆ ಅಕ್ಷರಗಳು ಉಲ್ಟಾ ಕಾಣುತ್ತವೆ ಎಂದು ಹೇಳುವುದಕ್ಕಾಗಿ ಅವರು ತಮ್ಮ ಹೆಸರನ್ನು ಉಲ್ಟಾ ಬರೆದಿದ್ದರು ಎನ್ನಲಾಗಿದೆ.

ನಟಿ ಪ್ರತಿ ಹೆಣ್ಣು ಮಗುವಿಗೂ ಶಿಕ್ಷಣ ಕೊಡಿ ಎನ್ನುತ್ತಾ, ಈ ಮೂಲಕ ಜನಜಾಗೃತಿ ಮೂಡಿಸುತ್ತಿದ್ದಾರೆ. ಇನ್ನೂ ನಟಿಯ ಈ ನಡೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ರಶ್ಮಿಕಾ ಬಗ್ಗೆ ಟ್ರೋಲ್ ಮಾಡುತ್ತಿದ್ದವರು ಕೂಡ ಈ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಕಾಮೆಂಟ್ ಮಾಡಿದ್ದಾರೆ.

https://www.instagram.com/reel/CmGRx_PKcXt/?igshid=YmMyMTA2M2Y=
Leave A Reply