ಯುವಕ-ಯುವತಿಯರಿಗೆ ಗುಡ್ ನ್ಯೂಸ್ | ಬೈಕ್‌ ಖರೀದಿಗೆ ಸರ್ಕಾರವೇ ನೀಡುತ್ತೆ ಸಹಾಯ ಧನ!

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಸಮುದಾಯದ ನಿರುದ್ಯೋಗಿ ಯುವಕ, ಯುವತಿಯರಿಗೆ ಸ್ವಯಂ ಉದ್ಯೋಗಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಬೈಕ್‌ ಖರೀದಿಗೆ ಸರ್ಕಾರದಿಂದ ಸಹಾಯ ಧನ ನೀಡಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ್‌ ಪೂಜಾರಿ ಹೇಳಿದ್ದಾರೆ.

ಬೈಕ್ ಖರೀದಿಗೆ ಸರ್ಕಾರದಿಂದ 50 ಸಾವಿರ ಸಹಾಯ ಧನ ನೀಡಲಾಗುತ್ತಿದ್ದು, ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 100 ದ್ವಿಚಕ್ರ ವಾಹನಗಳನ್ನು ನೀಡುವ ಗುರಿ ಹೊಂದಲಾಗಿದೆ. ಪ್ರತಿ ದ್ವಿಚಕ್ರ ವಾಹನಕ್ಕೆ 70 ಸಾವಿರ ರೂ. ನಿಗದಿ ಮಾಡಲಾಗಿದ್ದು, 50 ಸಾವಿರ ಸಬ್ಸಿಡಿ ಹಾಗೂ 20 ಸಾವಿರ ರೂ ಬ್ಯಾಂಕ್‌ ಸಾಲ ಸೌಲಭ್ಯ ಇರಲಿದೆ ಎಂದು ಹೇಳಿದರು.

ಹಾಗೆಯೇ, ಮೆಟ್ರಿಕ್ ಪೂರ್ವ ಹಾಗೂ ನಂತರದ ವಿದ್ಯಾರ್ಥಿಗಳಿಗೆ ಮಾಸಿಕ ಭೋಜನ ವೆಚ್ಚವನ್ನು ಹೆಚ್ಚಳ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ 1600 ರೂ. ನಿಂದ 1750 ರೂಪಾಯಿಗೆ ಏರಿಕೆ ಮಾಡಲಾಗಿದೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ 1500 ರಿಂದ 1650 ರೂಪಾಯಿಗೆ ಹೆಚ್ಚಿಸಲಾಗಿದೆ ಎಂದು ಹೇಳಿದ್ದಾರೆ.

Leave A Reply

Your email address will not be published.