Home Jobs 778 ಪಿಯು ಉಪನ್ಯಾಸಕ ಹುದ್ದೆಗಳ ನೇರ ನೇಮಕಾತಿ-ಸಚಿವ ಬಿ.ಸಿ.ನಾಗೇಶ್ ಟ್ವೀಟ್

778 ಪಿಯು ಉಪನ್ಯಾಸಕ ಹುದ್ದೆಗಳ ನೇರ ನೇಮಕಾತಿ-ಸಚಿವ ಬಿ.ಸಿ.ನಾಗೇಶ್ ಟ್ವೀಟ್

Hindu neighbor gifts plot of land

Hindu neighbour gifts land to Muslim journalist

ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಶಿಕ್ಷಣ ಸಚಿವ ಬಿ ಸಿ ನಾಗೇಶ್‌ ಅವರು ಒಂದು ಸಿಹಿ ಸುದ್ದಿಯನ್ನು ನೀಡಿದ್ದಾರೆ. ಅದೇನೆಂದರೆ, ಈಗಾಗಲೇ ಕಾಲೇಜು ಶಿಕ್ಷಣ ಇಲಾಖೆಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಒಟ್ಟು 778 ಪಿಯು ಉಪನ್ಯಾಸಕ(PU Lecturers) ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

“ಪದವಿ ಪೂರ್ವ ಶಿಕ್ಷಣ ಇಲಾಖೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ 778 ಉಪನ್ಯಾಸಕರ ಖಾಲಿ ಹುದ್ದೆಗಳನ್ನು ನೇರ ನೇಮಕಾತಿ(Direct Recruitment) ಮೂಲಕ ಭರ್ತಿ ಮಾಡಿಕೊಳ್ಳಲಾಗುತ್ತದೆ” ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್(Education Minister BC Nagesh) ಅವರು ತಿಳಿಸಿದ್ದಾರೆ. ಶೀಘ್ರದಲ್ಲೇ ಅಧಿಸೂಚನೆ(Notification) ಹೊರಡಿಸಲಾಗುತ್ತದೆ ಎಂದು ಹೇಳಿದ್ದಾರೆ.
ಹುದ್ದೆಯ ಕುರಿತಾಗಿ ಹೆಚ್ಚಿನ ಮಾಹಿತಿ ಈ ಕೆಳಗೆ ನೀಡಲಾಗಿದೆ.

ಹುದ್ದೆಯ ಮಾಹಿತಿ:
ಒಟ್ಟು 10 ವಿಷಗಳ ಉಪನ್ಯಾಸಕರ ಹುದ್ದೆಗಳು ಖಾಲಿ ಇವೆ.
ಕನ್ನಡ- 100
ಇಂಗ್ಲಿಷ್- 120
ಹಿಸ್ಟರಿ- 120
ಎಕನಾಮಿಕ್ಸ್-180
ಜಿಯೋಗ್ರಫಿ-20
ಕಾಮರ್ಸ್​-80
ಸೋಶಿಯಾಲಜಿ-75
ಪೊಲಿಟಿಕಲ್ ಸೈನ್ಸ್​-75
ಸೈಕಾಲಜಿ-2
ಕಂಪ್ಯೂಟರ್ ಸೈನ್ಸ್- 6
ಒಟ್ಟು 778 ಹುದ್ದೆಗಳು

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್​ಸೈಟ್​ dce.kar.nic.in ಗೆ ಭೇಟಿ ನೀಡಬಹುದು.