Home Interesting ಮಹಿಳೆಯರಿಗಾಗುವ ಸಮಸ್ಯೆಗಳನ್ನು ನಿವಾರಿಸಲೆಂದೇ ಸ್ಥಾಪನೆಗೊಂಡಿದೆ ಹೊಸತಾದ ಕೇಂದ್ರ!

ಮಹಿಳೆಯರಿಗಾಗುವ ಸಮಸ್ಯೆಗಳನ್ನು ನಿವಾರಿಸಲೆಂದೇ ಸ್ಥಾಪನೆಗೊಂಡಿದೆ ಹೊಸತಾದ ಕೇಂದ್ರ!

Hindu neighbor gifts plot of land

Hindu neighbour gifts land to Muslim journalist

ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ದೌರ್ಜನ್ಯಗಳ ನಡುವೆ, ರಾಜ್ಯ ಸರ್ಕಾರವು ಮಹಿಳೆಯರಿಗೆ ಸಿಹಿಸುದ್ದಿ ನೀಡಿದೆ. ಹೌದು. ಮಹಿಳೆಯರಿಗೆ ಆಗುವ ಸಮಸ್ಯೆಗಳನ್ನು ನಿವಾರಿಸಲು ಹೊಸತಾದ ಕೇಂದ್ರವೊಂದನ್ನು ಸ್ಥಾಪಿಸಿದೆ.

ರಾಜ್ಯದಲ್ಲಿ ಪ್ರತಿ ಜಿಲ್ಲೆಗೊಂದು ಸಖಿ ಕೇಂದ್ರಗಳನ್ನು ಆರಂಭಿಸಲಾಗಿದ್ದು, ಸಖಿ ಒನ್ ಸ್ಟಾಪ್ ಸೆಂಟರ್ ಗೆ ದೂರು ಸಲ್ಲಿಸಬೇಕಾದವರು 1091 ಸಂಖ್ಯೆಗೆ ಕರೆ ಮಾಡಿ ದೂರು ಸಲ್ಲಿಸಬಹುದು. 2018 ರ ಮೇ ತಿಂಗಳಲ್ಲಿ ರಾಝ್ಯ ಸರ್ಕಾರ ಗೆಳತಿ ವಿಶೇಷ ಚಿಕಿತ್ಸಾ ಘಟಕ ಸ್ಥಾಪಿಸಿತ್ತು. ಇದನ್ನು ಕೇಂದ್ರ ಸರ್ಕಾರದ ವ್ಯಾಪ್ತಿಗೆ ತರಲಾಗಿದ್ದು, ಸಖಿ ಒನ್ ಸ್ಟಾಪ್ ಸೆಂಟರ್ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿದೆ.

ಸಮಾಜ ಅಥವಾ ಕುಟುಂಬದಲ್ಲಿ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರು ನ್ಯಾಯಕ್ಕಾಗಿ ಪೊಲೀಸ್ ಠಾಣೆ, ಚಿಕಿತ್ಸೆಗಾಗಿ ಆಸ್ಪತ್ರೆಗೆ, ಸಮಾಲೋಚನೆಗಾಗಿ ಪ್ರತ್ಯೇಕವಾಗಿ ಅಲೆದಾಡಬೇಕಿತ್ತು. ಇನ್ನು ಮುಂದೆ ಮಹಿಳಾ ಸಾಂತ್ವನ ಕೇಂದ್ರಗಳಿಗೆ ಹೋದ ದೂರುಗಳು ಸಖಿ ಕೇಂದ್ರಗಳಿಗೆ ಶಿಫಾರಸು ಮಾಡಡಲಾಗುತ್ತದೆ. ಈ ಮೂಲಕ ಮಹಿಳೆಯರ ಸಮಸ್ಯೆಗಳಿಗೆ ಮುಕ್ತಿ ದೊರಕಲಿದೆ.