ಸಾರ್ವಜನಿಕರೇ ಗಮನಿಸಿ | ಡಿ.29ರಂದು ಆಟೋ ಚಾಲಕರ ಮುಷ್ಕರ

ಡಿ.29ರಂದು ರಾಜಧಾನಿ ಬೆಂಗಳೂರಿನಲ್ಲಿ ಆಟೋ ಸಿಗಲ್ಲ. ಕಾರಣವೇನೆಂದರೆ, ಆಟೋ ಚಾಲಕರು ಡಿ.29 ರಂದು ಬೆಂಗಳೂರಿನಲ್ಲಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಆ ದಿನದಂದು ಬೆಂಗಳೂರು ನಗರದಲ್ಲಿ ಆಟೋ ಸಂಚಾರ ಬಂದ್ ಆಗಿರಲಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಮುಷ್ಕರಕ್ಕೆ ಕರೆ ನೀಡಿದ್ದಾರೆ ಎಂದು ವರದಿಯಾಗಿದೆ. ರಾಜ್ಯ ಸಾರಿಗೆ ಇಲಾಖೆ ವಿರುದ್ಧ ಆಟೋ ಚಾಲಕರು ನಿಜಕ್ಕೂ ಅಸಮಾದಾನ ಹೊಂದಿದ್ದಾರೆ. ರ್ಯಾಪಿಡೋ ಬೈಕ್ ಟ್ಯಾಕ್ಸಿ ಆ್ಯಪ್ ಬ್ಯಾನ್, ಬೌನ್ಸ್ ಎಲೆಕ್ಟ್ರಿಕ್ ಬೈಕ್ ಗೆ ನೀಡಿರುವ ಅನುಮತಿ ವಾಪಸ್ ಪಡೆಯುವಂತೆ ಒತ್ತಾಯಿಸಿದ್ದಾರೆ.

ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ಸ್ಟೇಷನ್​ನಿಂದ ಬೃಹತ್ ಆಟೋ ರ‍್ಯಾಲಿ ಮೂಲಕ ವಿಧಾನಸೌಧಕ್ಕೆ ತೆರಳಿ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ. ಈ ಆಟೋ ಮುಷ್ಕರಕ್ಕೆ ಈಗಾಗಲೇ 21 ಆಟೋ ಸಂಘಟನೆಗಳು ಸಾಥ್ ನೀಡಿವೆ. ರಾಜಧಾನಿಯ ಎರಡು ಲಕ್ಷದ ಹತ್ತು ಸಾವಿರ ಆಟೋ ಚಾಲಕರು ಈಗಾಗಲೇ ಈ ಮುಷ್ಕರಕ್ಕೆ ಬೆಂಬಲ ನೀಡಿದ್ದಾರೆ. ಹೀಗಾಗಿ ಡಿ 21ರ ಗುರುವಾರದಂದು ರಾಜಧಾನಿಯಲ್ಲಿ ಸಂಪೂರ್ಣ ಆಟೋ ಸಂಚಾರ ಸ್ತಬ್ಧವಾಗಲಿದೆ ಎಂದು ಮಾಧ್ಯವೊಂದು ವರದಿ ಮಾಡಿದೆ.

ಆಟೋ ಚಾಲಕರ ಪ್ರಮುಖ ಬೇಡಿಕೆಗಳು
ರ್ಯಾಪಿಡೋ ಬೈಕ್ ಟ್ಯಾಕ್ಸಿ ಆ್ಯಪ್ ಬ್ಯಾನ್ ಮಾಡಬೇಕು
ಬೌನ್ಸ್ ಎಲೆಕ್ಟ್ರಿಕ್ ಬೈಕ್ ಗೆ ನೀಡಿರುವ ಅನುಮತಿ ವಾಪಸ್ ಪಡೆಯಬೇಕು.

Leave A Reply

Your email address will not be published.