BEL Recruitment 2022: ಬಿಇಎಲ್‌ನಲ್ಲಿ BE/BTech ಪದವೀಧರರಿಗೆ ಉದ್ಯೋಗ | ಮಾಸಿಕ ವೇತನ ರೂ.50,000

ಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್(Bharath Electronics Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಉದ್ಯೋಕಾಂಕ್ಷಿಗಳಿಗೆ ಇಲ್ಲೊಂದು ಸುವರ್ಣಾವಕಾಶವಿದೆ. ಅರ್ಜಿ ಸಲ್ಲಿಸಲು ಜನವರಿ 7, 2023 ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್​​ ಮೂಲಕ ಈಗಲೇ ಅರ್ಜಿ ಸಲ್ಲಿಸಿ.

ಸಂಸ್ಥೆ : ಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್
ಹುದ್ದೆ: ಪ್ರಾಜೆಕ್ಟ್​ ಎಂಜಿನಿಯರ್-I
ಒಟ್ಟು : ಹುದ್ದೆ 14
ವೇತನ: ತಿಂಗಳಿಗೆ 40,000-50,000
ಉದ್ಯೋಗದ ಸ್ಥಳ :ಬೆಂಗಳೂರು

ವಿದ್ಯಾರ್ಹತೆ: ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ/ಎಲೆಕ್ಟ್ರಾನಿಕ್ಸ್ ಮತ್ತು ದೂರಸಂಪರ್ಕ/ಸಂವಹನ/ದೂರಸಂಪರ್ಕ, ಮೆಕ್ಯಾನಿಕಲ್, ಕೆಮಿಕಲ್ ಇಂಜಿನಿಯರಿಂಗ್​ನಲ್ಲಿ ಬಿಇ/ಬಿ.ಟೆಕ್ ಪೂರ್ಣಗೊಳಿಸಿರಬೇಕು.

ವಯೋಮಿತಿ: ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 1, 2022ಕ್ಕೆ ಗರಿಷ್ಠ 32 ವರ್ಷ ಮೀರಿರಬಾರದು. ಒಬಿಸಿ ಅಭ್ಯರ್ಥಿಗಳು- 3 ವರ್ಷ, ಎಸ್​​ಸಿ/ಎಸ್​ಟಿ ಅಭ್ಯರ್ಥಿಗಳು- 5 ವರ್ಷ, PWD ಅಭ್ಯರ್ಥಿಗಳು-10 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನ: ಪ್ರಾಜೆಕ್ಟ್​ ಎಂಜಿನಿಯರ್-I ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 40,000-50,000 ಸಂಬಳ ಕೊಡಲಾಗುತ್ತದೆ.

ಅರ್ಜಿ ಶುಲ್ಕ:
ಎಸ್​​ಸಿ/ಎಸ್​ಟಿ/PWD ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ
ಸಾಮಾನ್ಯ ಅಭ್ಯರ್ಥಿಗಳು- 472 ರೂ. ಪಾವತಿಸಬೇಕು.
ಅರ್ಜಿ ಪಾವತಿಸುವ ಬಗೆ- SBI ಕಲೆಕ್ಟ್​

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ಬಗೆ: ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
DGM (HR/MR,MS&ADSN)
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್
ಜಾಲಹಳ್ಳಿ, P.O.,
ಬೆಂಗಳೂರು – 560013

Leave A Reply

Your email address will not be published.