Lucky Plants: ಸರಿಯಾದ ದಿಕ್ಕಿನಲ್ಲಿ ಮನೆಯಂಗಳದಲ್ಲಿ ಈ ಗಿಡಗಳನ್ನು ಬೆಳೆಸಿ ಅದೃಷ್ಟ ನಿಮ್ಮನ್ನು ಹುಡುಕಿಕೊಂಡು ಬರುತ್ತೆ!!!

ಹಿರಿಯರ ಅನುಭವ ಮತ್ತು ಶಾಸ್ತ್ರ ಪುರಾಣಗಳ ಪ್ರಕಾರ ಮತ್ತು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ನಾವು ಜೀವನವನ್ನು ಸಂತೋಷ ಮತ್ತು ಸಮೃದ್ಧಿಯಿಂದ ನಡೆಸಲು ವಾಸ್ತು ಶಾಸ್ತ್ರದ ನಿಯಮಗಳನ್ನು ಅನುಸರಿಸುವುದು ಸಹಜವಾಗಿದೆ.

ಹಾಗೆಯೇ ಶಾಸ್ತ್ರ ಪ್ರಕಾರ ಸರಿಯಾದ ಗಿಡಗಳನ್ನು ಸರಿಯಾದ ದಿಕ್ಕಿನಲ್ಲಿ ನೆಟ್ಟರೆ, ಮನೆಯಲ್ಲಿ ಧನಾತ್ಮಕ ಶಕ್ತಿ ನೆಲೆಸುತ್ತದೆ ಮತ್ತು ವ್ಯಕ್ತಿಯ ಎಲ್ಲಾ ತೊಂದರೆಗಳು ದೂರವಾಗುತ್ತವೆ. ಮನೆಯಂಗಳದಲ್ಲಿ ಸರಿಯಾದ ದಿಕ್ಕಿನಲ್ಲಿ ಈ ಗಿಡಗಳನ್ನು ಬೆಳೆಸುವುದರಿಂದ ರಾತ್ರೋರಾತ್ರಿ ಅದೃಷ್ಟವನ್ನೇ ಬದಲಾಯಿಸುತ್ತವೆ.

ವಾಸ್ತು ಪ್ರಕಾರ ಮನೆ ಅಂಗಳದಲ್ಲಿ ನೆಡಬಹುದಾದ ಗಿಡಗಳು :•

ಅಶೋಕ ವೃಕ್ಷ: ಬಹುತೇಕ ಜನರು ತಮ್ಮ ಮನೆಗಳಲ್ಲಿ ಅಶೋಕ ಮರವನ್ನು ನೆಡುತ್ತಾರೆ. ಮನೆಯ ಅಂದಕ್ಕಾಗಿ ಇದನ್ನು ನೆಟ್ಟರೂ, ವಾಸ್ತು ಶಾಸ್ತ್ರದ ಪ್ರಕಾರ ಈ ಮರವನ್ನು ನೆಡುವುದರಿಂದ ಮನೆಯ ವಾಸ್ತು ದೋಷಗಳೂ ನಿವಾರಣೆಯಾಗುತ್ತವೆ. ಈ ಮರವನ್ನು ಯಾವಾಗಲೂ ಉತ್ತರ ದಿಕ್ಕಿನಲ್ಲಿ ನೆಡಬೇಕು.

ಮನಿ ಪ್ಲಾಂಟ್: ಈ ಸಸ್ಯವನ್ನು ವಾಸ್ತು ಶಾಸ್ತ್ರದಲ್ಲಿ ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ. ಈ ಗಿಡ ಹಸಿರಾಗಿರುವ ಮನೆಯಲ್ಲಿ ಹಣಕಾಸಿನ ಮುಗ್ಗಟ್ಟು ಇರುವುದಿಲ್ಲ ಎಂದು ಹೇಳಲಾಗುತ್ತದೆ, ಆದರೆ ಗಮನಿಸಬೇಕಾದ ಅಂಶವೆಂದರೆ ಮನಿ ಪ್ಲಾಂಟ್ ಅನ್ನು ಆಗ್ನೇಯ ದಿಕ್ಕಿನಲ್ಲಿ ಮಾತ್ರ ನೆಡಬೇಕು.

ದಾಳಿಂಬೆ ಮರ: ಮನೆಯಲ್ಲಿ ದಾಳಿಂಬೆ ಮರವನ್ನು ನೆಡುವುದು ಸಹ ಮಂಗಳಕರವೆಂದು ಪರಿಗಣಿಸಲಾಗುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ ಮನೆಯ ಅಂಗಳದ ಆಗ್ನೇಯ ದಿಕ್ಕಿನಲ್ಲಿ ದಾಳಿಂಬೆ ಗಿಡವನ್ನು ನೆಟ್ಟರೆ ಶುಭ ಫಲ ಸಿಗುತ್ತದೆ. ಇದರಿಂದ ಮನೆಯಲ್ಲಿ ಸುಖ-ಸಮೃದ್ಧಿ ಮತ್ತು ಲಕ್ಷ್ಮಿಯ ಕೃಪಾಕಟಾಕ್ಷ ಉಳಿಯುತ್ತದೆ.

ಬೆಟ್ಟದ ನೇರಳೆ : ಈ ಮರವು ಅನೇಕ ಆರೋಗ್ಯ ಸಂಬಂಧಿ ಸಮಸ್ಯೆಗಳನ್ನು ನಿವಾರಿಸಲು ರಾಮನ ಬಾಣಕ್ಕಿಂತ ಕಡಿಮೆಯಿಲ್ಲ ಎಂದು ಪರಿಗಣಿಸಲಾಗಿದ್ದರೂ, ವಾಸ್ತು ಶಾಸ್ತ್ರದಲ್ಲಿ ಈ ಮರಕ್ಕೆ ವಿಶೇಷ ಮಹತ್ವವಿದೆ. ಮನೆಯ ಉತ್ತರ ಅಥವಾ ಪೂರ್ವ ದಿಕ್ಕಿನಲ್ಲಿ ನೆಲ್ಲಿಕಾಯಿ ಗಿಡವನ್ನು ನೆಟ್ಟರೆ ರಾಜಸೂಯ ಯಾಗಕ್ಕೆ ಸಮಾನವಾದ ಫಲ ಪ್ರಾಪ್ತಿಯಾಗುತ್ತದೆ ಎಂದು ಹೇಳಲಾಗುತ್ತದೆ. ಇದನ್ನು ಪ್ರತಿನಿತ್ಯ ಪೂಜಿಸುವುದರಿಂದ ದೇವತೆಗಳ ಅನುಗ್ರಹ ಸಿಗುತ್ತದೆ ಎನ್ನಲಾಗುತ್ತದೆ.

ತುಳಸಿ ಗಿಡ: ಸನಾತನ ಧರ್ಮದಲ್ಲಿ ತುಳಸಿ ಗಿಡಕ್ಕೆ ವಿಶೇಷ ಮಹತ್ವವಿದೆ. ಹೆಚ್ಚಿನ ಮನೆಗಳಲ್ಲಿ ಬೆಳಗ್ಗೆ ಮತ್ತು ಸಂಜೆ ತುಳಸಿಯನ್ನು ಪೂಜಿಸಲಾಗುತ್ತದೆ. ತುಳಸಿ ಗಿಡವು ಮನೆಯ ಋಣಾತ್ಮಕ ಶಕ್ತಿಯನ್ನು ಹೋಗಲಾಡಿಸುತ್ತದೆ ಮತ್ತು ಮನೆಯಲ್ಲಿ ಸಂತೋಷ ಮತ್ತು ಶಾಂತಿಯನ್ನು ಕಾಪಾಡುತ್ತದೆ ಎಂದು ಹೇಳಲಾಗುತ್ತದೆ.

ಈ ಸಸ್ಯವನ್ನು ಯಾವಾಗಲೂ ಈಶಾನ್ಯ ದಿಕ್ಕಿನಲ್ಲಿ ನೆಡಬೇಕು ಎಂಬುದನ್ನು ನೆನಪಿನಲ್ಲಿಡಿ. ಭಾರತೀಯರಲ್ಲಿ ಆಚಾರ ವಿಚಾರ ರೂಢಿ ಸಂಪ್ರದಾಯಗಳ ಸೊಗಡು ಎಲ್ಲೆಡೆ ಹರಡಿರುವ ಕಾರಣ ಹಿರಿಯರ ಅನುಭವ ಮತ್ತು ಶಾಸ್ತ್ರ ಪುರಾಣಗಳನ್ನು ಪಾಲಿಸಲು ಮತ್ತು ನಮ್ಮ ಒಳಿತಿಗಾಗಿ ಸಣ್ಣ ಪ್ರಯತ್ನ ಇದಾಗಿದೆ. ಹಾಗಾಗಿ ಈ ಮೇಲಿನ ಗಿಡಗಳನ್ನು ಮನೆ ಅಂಗಳದಲ್ಲಿ ನೆಟ್ಟರೆ ಉತ್ತಮ ಎನ್ನಲಾಗುತ್ತದೆ.

Leave A Reply

Your email address will not be published.