ಸಾಧ್ಯವಾದರೇ 10 ಸೆಕೆಂಡಿನಲ್ಲಿ ಈ ಫೋಟೋದಲ್ಲಿರುವ ಬೆಕ್ಕನ್ನು ಕಂಡು ಹಿಡಿಯಿರಿ

ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣ (Social Media) ಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ- ಪಕ್ಷಿಗಳಾಗಿರಬಹುದು ಇಲ್ಲವೇ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವ ಜೊತೆಗೆ ಬುದ್ದಿಯವಂತಿಕೆಗೆ ಸವಾಲು ಎಸೆಯುವುದಂತು ಸ್ಪಷ್ಟ. ಇದೀಗ, ಅದೆ ರೀತಿಯ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕು ಭಿನ್ನತೆ ಎದುರಾಗುತ್ತದೆ. ಇದನ್ನು ದೃಷ್ಟಿ ಭ್ರಮೆ (Optical Illusion) ಎನ್ನಲಾಗುತ್ತದೆ.

ಈ ದೃಷ್ಟಿ ಭ್ರಮೆ ಅಥವಾ ಆಪ್ಟಿಕಲ್ ಇಲ್ಯೂಷನ್​ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಈ ಸವಾಲುಗಳನ್ನು ಸಾಕಷ್ಟು ಜನರು ಸ್ವೀಕರಿಸಿ, ಅದರಲ್ಲಿ ತೊಡಗುತ್ತಾರೆ. ನೀವು ಕೂಡಾ ಈ ಸವಾಲು ಸ್ವೀಕರಿಸಲು ಸಿದ್ದರಾಗಿದ್ದೀರಾ??

ಸಾಮಾನ್ಯವಾಗಿ ಹೆಚ್ಚಿನವರು ಹೊಸ ಹೊಸ ಆಪ್ಟಿಕಲ್ ಇಲ್ಯೂಷನ್ ಸವಾಲುಗಳನ್ನು ಸ್ವೀಕರಿಸುವುದನ್ನು ಆನಂದಿಸುತ್ತಾರೆ. ನಿಮ್ಮ ವೀಕ್ಷಣಾ ಕೌಶಲ್ಯ ಮತ್ತು ಏಕಾಗ್ರತೆಯನ್ನು ಸುಧಾರಿಸುವಲ್ಲಿ ಆಪ್ಟಿಕಲ್ ಇಲ್ಯೂಷನ್​ಗಳು ಸಹ ಪ್ರಯೋಜನಕಾರಿಯಾಗಿದ್ದು, ನಿಮ್ಮ ಕಣ್ಣಿಗೆ ಕೆಲಸ ಕೊಡಲು ನೀವು ರೆಡಿನಾ??.

ನಿಮಗಿರುವ ಸಿಂಪಲ್ ಟಾಸ್ಕ್ ಇಷ್ಟೇ! ಸದ್ಯ ವೈರಲ್ ಆಗಿರುವ ಫೋಟೋದಲ್ಲಿ ನೀವು ಟೈಲ್ಸ್ ಫ್ಲೋರ್ ನೋಡಬಹುದು. ಫೋಟೋದ ಒಂದು ಭಾಗದಲ್ಲಿ ಒಂದು ಬೆಕ್ಕು ಕುಳಿತಿದೆ. ಆದರೆ, ಅದನ್ನು ಪತ್ತೆಹಚ್ಚುವುದು ಸುಲಭದ ಮಾತಲ್ಲ. ಆದ್ರೆ ನಿಮಗಿದು ದೊಡ್ಡ ವಿಷಯವಲ್ಲ!! ಏಕೆಂದರೆ ಈ ಉತ್ತರ ಕಂಡುಹಿಡಿಯಲು ನೀವು ಕೊಂಚ ತಲೆಗೆ ಕೆಲಸ ಕೊಡಬೇಕಷ್ಟೆ . ..

ಆದ್ರೂ ಕೂಡ ನಾವು ನಿಮಗೊಂದು ಹಿಂಟ್ ಕೊಡುತ್ತೇವೆ. ಅದೇನಪ್ಪಾ ಅಂದರೆ , ಟೈಲ್ಸ್ ಬಣ್ಣಕ್ಕೂ ಬೆಕ್ಕಿನ ಬಣ್ಣಕ್ಕೂ ಸಾಮ್ಯತೆ ಇದೆ. ಒಂದನ್ನೊಂದು ಬೆರೆತು ಹೋಗಿವೆ.
ಹಾಗಾದ್ರೆ ಮತ್ತೇಕೆ ತಡ!! ನಿಮಗೆ 10 ಸೆಕೆಂಡ್ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ಆ ಬೆಕ್ಕು ಎಲ್ಲಿದೆ ಎಂದು ಪತ್ತೆ ಹಚ್ಚಬೇಕು. ಓದುಗರೇ ನಿಮಗಿದೋ ಸವಾಲು!!!!ವೀಕ್ಷಣಾ ಕೌಶಲ್ಯವನ್ನು ಹೆಚ್ಚಿಸಲು ನೀವು ಬಯಸುವಿರಾ? ಹಾಗಾದರೆ, ಈ ಸವಾಲನ್ನು ಸ್ವೀಕರಿಸಿ….

ನಿಮ್ಮ ಸಮಯ ಈಗ ಶುರು…. 10 ಸೆಕೆಂಡ್ ಸಮಯದಲ್ಲಿ ನೀವು ಫೋಟೋದಲ್ಲಿ ಬೆಕ್ಕನ್ನು ಗುರುತಿಸಿದರೆ ನಿಮ್ಮ ಕಣ್ಣಿನ ಸಾಮರ್ಥ್ಯ ಮತ್ತು ಬುದ್ಧಿಮತ್ತೆಗೆ ನೀವೇ ಫುಲ್ ಮಾರ್ಕ್ಸ್ ಕೊಟ್ಟುಬಿಡಿ.. ಒಂದು ವೇಳೆ ನಿಮಗೆ ಹುಡುಕಿ ಸಾಕಾದ ರೂ ಕೂಡ ಉತ್ತರ ಸಿಕ್ಕಿಲ್ವ.. ಚಿಂತೆ ಮಾಡಬೇಡಿ.. ಬೆಕ್ಕನ್ನು ಗುರುತಿಸಲು ಸಾಧ್ಯವಾಗದೇ, ಎಲ್ಲಿದೆ ಅಂತಾ ಹುಡುಕಾಡುತ್ತಿದ್ದರೆ ಈ ಕೆಳಗಿನ ಚಿತ್ರವನ್ನು ನೋಡಿ ನಿಮಗೆ ಉತ್ತರ ಸಿಗಲಿದೆ.

Leave A Reply

Your email address will not be published.