Indian Railway Recruitment 2022: ನೀವು 10ನೇ ತರಗತಿ ತೇರ್ಗಡೆ ಹೊಂದಿದ್ದೀರಾ ? ಹಾಗಾದರೆ ರೈಲ್ವೆ ಇಲಾಖೆಯಲ್ಲಿದೆ ಉದ್ಯೋಗಾವಕಾಶ
Indian Railway Recruitment 2022: ಭಾರತೀಯ ರೈಲ್ವೆ ಇಲಾಖೆಯು ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್ rrccr.com ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ. ಈ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 15, 2023. ಹಾಗಾಗಿ ಆಸಕ್ತ ಅಭ್ಯರ್ಥಿಗಳು ಈ ಅವಕಾಶವನ್ನು ಮಿಸ್ ಮಾಡದೇ ಬಳಸಿಕೊಳ್ಳಲು ಸೂಕ್ತ ಅವಕಾಶ ಎಂದೇ ಹೇಳಬಹುದು.
ಹುದ್ದೆಗಳ ವಿವರಗಳು:
ಮುಂಬೈ ಕ್ಲಸ್ಟರ್: 1659 ಹುದ್ದೆಗಳು
ಭೂಸಾವಲ್ ಕ್ಲಸ್ಟರ್: 418 ಹುದ್ದೆಗಳು
ಪುಣೆ ಕ್ಲಸ್ಟರ್: 152 ಹುದ್ದೆಗಳು
ನಾಗ್ಪುರ ಕ್ಲಸ್ಟರ್: 114 ಹುದ್ದೆಗಳು
ಸೋಲಾಪುರ್ ಕ್ಲಸ್ಟರ್: 79 ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ- 2422
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 15-12-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15-01-2023
ವಿದ್ಯಾರ್ಹತೆ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿಯಿಂದ ಕನಿಷ್ಠ 50 ಪ್ರತಿಶತ ಅಂಕಗಳೊಂದಿಗೆ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಇದರೊಂದಿಗೆ ಐಟಿಐ ಪ್ರಮಾಣಪತ್ರವನ್ನು ಸಹ ಹೊಂದಿರಬೇಕು.
ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ರೂ 100 ಪಾವತಿಸಬೇಕಾಗುತ್ತದೆ.
ಆಯ್ಕೆ ಪ್ರಕ್ರಿಯೆ: ಈ ನೇಮಕಾತಿಯಲ್ಲಿ ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. 10ನೇ ತರಗತಿ (ಕನಿಷ್ಠ 50% ಒಟ್ಟು ಅಂಕಗಳೊಂದಿಗೆ) + ಐಟಿಐ ಅಂಕಗಳ ಶೇಕಡಾವಾರು ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ತಯಾರಿಸಲಾಗುತ್ತದೆ.
ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 15-12-2022 ಕ್ಕೆ 15 ವರ್ಷಗಳನ್ನು ಪೂರ್ಣಗೊಳಿಸಿರಬೇಕು. ಹಾಗೆಯೇ 24 ವರ್ಷಗಳ ಒಳಗಿನವರಾಗಿರಬೇಕು. ಇನ್ನು SC/ST ಅಭ್ಯರ್ಥಿಗಳಿಗೆ 05 ವರ್ಷಗಳು ಮತ್ತು OBC ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಈ ಹುದ್ದೆಯ ಬಗೆಗಿನ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ