BEL Recruitment: ಬಿಇಎಲ್ ನಿಂದ ಉದ್ಯೋಗವಕಾಶ | ಮಾಸಿಕ ವೇತನ ರೂ.40,000

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಅಧಿಸೂಚನೆಯನ್ನು ಹೊರಡಿಸಿದ್ದು, ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರ ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಅರ್ಜಿ ಸಲ್ಲಿಸಲು ಕೊನೆ ದಿನ ಜನವರಿ 15, 2023 ಎಂದು ನಿಗದಿಪಡಿಸಲಾಗಿದೆ.

ಸಂಸ್ಥೆ : ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್
ಒಟ್ಟು ಹುದ್ದೆಗಳು : 13
ಟ್ರೈನಿ ಇಂಜಿನಿಯರ್ : 4 ಹುದ್ದೆ
ಪ್ರಾಜೆಕ್ಟ್ ಇಂಜಿನಿಯರ್ : 9 ಹುದ್ದೆ
ವಿದ್ಯಾರ್ಹತೆ : ಕಂಪ್ಯೂಟರ್ ಸೈನ್ಸ್‌ನಲ್ಲಿ ಬಿ.ಟೆಕ್, BE
ವೇತನ : 30 ಸಾವಿರ ಹಾಗೂ 40 ಸಾವಿರ ರೂ.
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 15-01-2023
ಅರ್ಜಿ ಸಲ್ಲಿಕೆ ವಿಧಾನ : ಆನ್​ ಲೈನ್​

ವಿದ್ಯಾರ್ಹತೆ : ಮಾನ್ಯತೆ ಪಡೆದ ಸಂಸ್ಥೆಯಿಂದ BE/B.Tech ಪದವಿ ಪಡೆದಿರಬೇಕು. ಸಾಮಾನ್ಯ, EWS, OBC ಅಭ್ಯರ್ಥಿಗಳು ಶೇಕಡಾ 55 ಅಂಕಗಳೊಂದಿಗೆ ಪಾಸ್​ ಆಗಿರಬೇಕು. SC, ST, PwBD ಅಭ್ಯರ್ಥಿಗಳು ಉತ್ತೀರ್ಣರಾಗಿದ್ದರೆ ಸಾಕು. ಟ್ರೈನಿ ಇಂಜಿನಿಯರ್ ಹುದ್ದೆಗೆ ಆಯ್ಕೆಯಾದವರಿಗೆ ತಿಂಗಳಿಗೆ 30,000 ರೂ.ವೇತನ ನೀಡಲಾಗುವುದು. ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗೆ ಆಯ್ಕೆಯಾದವರಿಗೆ 40000 ರೂ. ವೇತನ ನೀಡಲಾಗುವುದು.

ಅರ್ಜಿ ಶುಲ್ಕ : ಟ್ರೈನಿ ಇಂಜಿನಿಯರ್ ಹುದ್ದೆಗೆ ಅರ್ಜಿ ಶುಲ್ಕ: 150 ರೂ. ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗೆ ಅರ್ಜಿ ಶುಲ್ಕ: 450 ರೂ.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್‌ ಕ್ಲಿಕ್‌ ಮಾಡಿ

Leave A Reply

Your email address will not be published.