Home Business ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಿಢೀರ್‌ ದಾಖಲಾದ ನಿರ್ಮಲಾ ಸೀತಾರಾಮನ್‌

ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಿಢೀರ್‌ ದಾಖಲಾದ ನಿರ್ಮಲಾ ಸೀತಾರಾಮನ್‌

Hindu neighbor gifts plot of land

Hindu neighbour gifts land to Muslim journalist

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಾಷ್ಟ್ರ ರಾಜಧಾನಿ ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸೋಮವಾರ ಮಧ್ಯಾಹ್ನ 12 ಗಂಟೆಗೆ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಇರುವ ಏಮ್ಸ್ ಆಸ್ಪತ್ರೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ದಾಖಲಿಸಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ನಿರ್ಮಲಾ ಸೀತಾರಾಮನ್ ಅವರು 2023 ಫೆಬ್ರುವರಿ 1 ರಂದು ಕೇಂದ್ರ ಬಜೆಟ್ ಮಂಡಿಸಲು ಸಿದ್ಧತೆ ನಡೆಸುತ್ತಿದ್ದು, ಹ ಬಜೆಟ್ ಸಿದ್ದತೆಯಲ್ಲಿ ನಿರತರಾಗಿದ್ದ ನಿರ್ಮಲಾ ಸೀತಾರಾಮನ್ ಅವರು ಇದೀಗ ಆಸ್ಪತ್ರೆ ಪಾಲಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅನಾರೋಗ್ಯಕ್ಕೆ ತುತ್ತಾಗಿದ್ಧಾರೆ. ದಿಲ್ಲಿಯ ಏಮ್ಸ್ ಆಸ್ಪತ್ರೆಗೆ ಅವರು ಚಿಕಿತ್ಸೆಗೆ ದಾಖಲಾಗಿದ್ದಾರೆ. 63 ವರ್ಷ ವಯಸ್ಸಿನ ನಿರ್ಮಲಾ ಸೀತಾರಾಮನ್, ಏಮ್ಸ್ ಆಸ್ಪತ್ರೆಯ ಖಾಸಗಿ ವಾರ್ಡ್‌ಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಏಮ್ಸ್ ಆಸ್ಪತ್ರೆಯ ಖಾಸಗಿ ವಾರ್ಡ್‌ನಲ್ಲಿ ನಿರ್ಮಲಾ ಸೀತಾರಾಮನ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಕೇಂದ್ರ ಹಣಕಾಸು ಸಚಿವರ ಆರೋಗ್ಯ ಸ್ಥಿತಿ ಉತ್ತಮವಾಗಿದ್ದು, ಯಾವುದೇ ಗಂಭೀರ ಸಮಸ್ಯೆ ಇಲ್ಲ ಎಂದು ಏಮ್ಸ್ ತಜ್ಞ ವೈದ್ಯರು ಮಾಹಿತಿ ನೀಡಿದ್ದಾರೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಆರೋಗ್ಯ ಸ್ಥಿತಿ ಉತ್ತಮವಾಗಿದ್ದು, ಯಾವುದೇ ಗಂಭೀರ ಸಮಸ್ಯೆ ಇಲ್ಲ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಆದರೆ, ನಿರ್ಮಲಾ ಸೀತಾರಾಮನ್ ಅವರು ಆಸ್ಪತ್ರೆಗೆ ದಾಖಲಾಗಿರುವ ಕಾರಣವೇನು ಎಂಬ ಮಾಹಿತಿಗೆ ನಿಖರ, ಅಧಿಕೃತ ಮಾಹಿತಿ ಈವರೆಗೂ ಲಭ್ಯವಾಗಿಲ್ಲ.