PM Kisan : ಹದಿಮೂರನೇ ಕಂತಿನ ಹಣ ಬರಬೇಕಾದರೆ ಈ ಮೂರು ಕೆಲಸ ಮಾಡಿ
ಇತ್ತೀಚೆಗಷ್ಟೇ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ 12ನೇ ಕಂತಿನ ಹಣ ಬಿಡುಗಡೆ ಮಾಡಿದ್ದು, ಇದೀಗ 13ನೇ ಕಂತಿಗಾಗಿ ರೈತರು ಎದುರು ನೋಡುತ್ತಿದ್ದಾರೆ.ರೈತರ ನೆರವಿಗೆ ಕೇಂದ್ರ ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸಿ ಆರ್ಥಿಕ ನೆರವಿನ ಜೊತೆಗೆ ರಸಗೊಬ್ಬರ ಪೂರೈಕೆ ಮಾಡಿ ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿದೆ.ಈಗಾಗಲೇ 8.42 ಕೋಟಿ ರೈತರು ಪಿಎಂ ಕಿಸಾನ್ ನಿಧಿಯ ಲಾಭವನ್ನು ಪಡೆದಿದ್ದಾರೆ.
ಈ ಮೂರು ಕೆಲಸ ಮಾಡದೇ ಹೋಗಿದ್ದಲ್ಲಿ ರೈತರ ಖಾತೆ 13ನೇ ಕಂತಿನ ಹಣ ಸೇರುವುದಿಲ್ಲ ಎಂಬುದನ್ನು ಗಮನಿಸಬೇಕು. ಪಿಎಂ ಕಿಸಾನ್ ಯೋಜನೆಯ 13ನೇ ಕಂತಿನ ಹಣಕ್ಕಾಗಿ ರೈತರು ಎದುರು ನೋಡುತ್ತಿದ್ದಾರೆ. ಈಗಾಗಲೇ, 13ನೇ ಕಂತಿನ ಹಣವನ್ನು ಕೇಂದ್ರ ಸರ್ಕಾರ ರೈತರ ಖಾತೆಗೆ ರವಾನೆ ಮಾಡಲಾಗುತ್ತದೆ.
ರೈತರನ್ನು ಆರ್ಥಿಕವಾಗಿ ಉತ್ತೇಜಿಸುವ ನಿಟ್ಟಿನಲ್ಲಿ ಸರ್ಕಾರ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯ 12 ಕಂತಿನ ಹಣ ರೈತರ ಖಾತೆಗೆ ಜಮೆ ಆಗಿದ್ದು, ಇದೀಗ ರೈತರು ಪಿಎಂ ಕಿಸಾನ್ ಯೋಜನೆಯ 13ನೇ ಕಂತಿನ ನಿರೀಕ್ಷೆಯಲ್ಲಿದ್ದಾರೆ. 13ನೇ ಕಂತಿನ ಹಣವನ್ನು ಕೇಂದ್ರ ಸರ್ಕಾರ ರೈತರ ಖಾತೆಗೆ ವರ್ಗಾಯಿಸಲಿದೆ.
ಕಳೆದ ಬಾರಿ 8.42 ಕೋಟಿ ರೈತರು ಪಿಎಂ ಕಿಸಾನ್ ನಿಧಿಯ ಪ್ರಯೋಜನ ಪಡೆದಿದ್ದು, ಆದರೆ ಈ ಬಾರಿ ಸಂಖ್ಯೆ ಕಡಿಮೆಯಾಗುವ ಸಂಭವ ಹೆಚ್ಚಿದೆ ಎನ್ನಲಾಗುತ್ತಿದೆ. ಹೀಗಾಗಿ, PM ಕಿಸಾನ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ ಎನ್ನುವುದನ್ನು ಖಾತರಿ ಮಾಡಿಕೊಳ್ಳುವುದು ಉತ್ತಮ.
ಸರ್ಕಾರದ ಅನ್ನದಾತರ ಏಳಿಗೆಗೆ ರೂಪಿಸಿರುವ ಯೋಜನೆಯಾದ ಪಿಎಂ ಕಿಸಾನ್ ಅಡಿಯಲ್ಲಿ ರೈತರಿಗೆ ವಾರ್ಷಿಕ 6,000 ರೂ. ಯನ್ನು ನೀಡಲಾಗುತ್ತಿದೆ. ಈ ಹಣವನ್ನು ಫಲಾನುಭವಿಗಳಿಗೆ ಮೂರು ಕಂತುಗಳಲ್ಲಿ ಎರಡು ಸಾವಿರ ರೂ.ಯಂತೆ ರೈತರ ಖಾತೆಗೆ ಜಮಾ ಮಾಡಲಾಗುತ್ತಿದೆ. ಆಗಸ್ಟ್ ನಿಂದ ನವೆಂಬರ್ ವರೆಗಿನ 12ನೇ ಕಂತಿನಲ್ಲಿ ಫಲಾನುಭವಿಗಳ ಸಂಖ್ಯೆ 8.42 ಕೋಟಿಗೆ ಏರಿಕೆಯಾಗಿದೆ ಎಂದು ಇತ್ತೀಚೆಗಷ್ಟೇ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಸಂಸತ್ತಿನಲ್ಲಿ ಮಾಹಿತಿ ನೀಡಿದ್ದಾರೆ.
ಪಿಎಂ ಕಿಸಾನ್ ಸಮ್ಮಾನ್ ನಿಧಿಯ 13 ನೇ ಕಂತು ಜನವರಿ 15 ಮತ್ತು 20 ರ ನಡುವೆ ರೈತರ ಖಾತೆಗೆ ಜಮೆ ಆಗುವ ಸಾಧ್ಯತೆ ದಟ್ಟವಾಗಿದೆ. ಆದರೆ ಈ ನಡುವೆ ಕೆಲ ಅಗತ್ಯ ಕೆಲಸಗಳನ್ನು ಪೂರ್ಣಗೊಳಿಸಬೇಕಾದ ಅವಶ್ಯಕತೆ ಇದೆ. ಜನವರಿ 7ರೊಳಗೆ ಬ್ಯಾಂಕ್ ಖಾತೆಯನ್ನು ಆಧಾರ್ ಜೊತೆ ಲಿಂಕ್ ಮಾಡಿಕೊಳ್ಳಬೇಕು.
13 ನೇ ಕಂತು ಖಾತೆ ಸೇರಬೇಕಾದರೆ, ಇ-ಕೆವೈಸಿ ಜೊತೆಗೆ, ಬ್ಯಾಂಕ್ ಖಾತೆಯನ್ನು ಆಧಾರ್‌ನೊಂದಿಗೆ ಲಿಂಕ್ ಮಾಡುವುದು ಅವಶ್ಯಕವಾಗಿದೆ. ಇದರ ಜೊತೆಗೆ, ಬ್ಯಾಂಕ್‌ಗೆ ಹೋಗಿ ಮತ್ತು NPCI ನಲ್ಲಿ ಆಧಾರ್ ಲಿಂಕ್ ಮಾಡಿದ ಬ್ಯಾಂಕ್ ಖಾತೆಯನ್ನು ಹೊಂದುವುದು ಉತ್ತಮ. ರೈತರು ಈ ಕೆಲಸಗಳನ್ನು ಪೂರ್ಣಗೊಳಿಸದೆ ಹೋದಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಹಣವನ್ನು ತಡೆ ಹಿಡಿಯುವ ಸಾಧ್ಯತೆ ಇದೆ.
ಈ ಯೋಜನೆಯಲ್ಲಿ ದೊಡ್ಡ ಮಟ್ಟದ ವಂಚನೆ ನಡೆದಿದೆ ಎನ್ನಲಾಗುತ್ತಿದ್ದು ಈ ಬಗ್ಗೆ ಸರ್ಕಾರಕ್ಕೆ ದೂರುಗಳು ಕೂಡ ಬಂದಿವೆ. ಈ ಬಳಿಕ, ಕೇಂದ್ರ ಸರ್ಕಾರ ಸಾಮಾಜಿಕ ಲೆಕ್ಕ ಪರಿಶೀಲನೆ ನಡೆಸಿದ್ದು, ಹಸೀಲ್ ಮಟ್ಟದಲ್ಲಿ ನಡೆದ ಪರಿಶೀಲನೆಯ ಅನುಸಾರ ಕೋಟ್ಯಾಂತರ ರೈತರ ಹೆಸರನ್ನು ಪಟ್ಟಿಯಿಂದ ಕೈ ಬಿಡಲಾಗಿದೆ.