KSRTC Recruitment 2023: ಭರ್ಜರಿ 2000 ಚಾಲಕ ಹುದ್ದೆಗಳ ನೇಮಕ, 10ನೇ ತರಗತಿ ಪಾಸಾದವರಿಗೆ ಆದ್ಯತೆ

KSRTC Recruitment 2023: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(Karnataka State Road Transport Corporation) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅತಿ ಶೀಘ್ರದಲ್ಲೇ ನೇಮಕಾತಿ ಮಾಡಲಿದೆ. ಈ ಬಗ್ಗೆ ಶ್ರೀರಾಮುಲು ಘೋಷಣೆ ಮಾಡಿದ್ದಾರೆ. ರಾಜ್ಯದ ವಿವಿಧ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಖಾಲಿ ಇರುವ ಚಾಲಕ ಹುದ್ದೆಗಳನ್ನು ಭರ್ತಿ ಮಾಡಲು ಶೀಘ್ರದಲ್ಲೇ 2000 ಚಾಲಕರನ್ನು ನೇಮಿಸಿಕೊಳ್ಳಲಾಗುತ್ತದೆ.

ಒಟ್ಟು 2000 ಚಾಲಕರ ಹುದ್ದೆಗಳನ್ನು ಭರ್ತಿ ಮಾಡಲು ಕೆಎಸ್​ಆರ್​​ಟಿಸಿ ಅಧಿಕೃತ ನೋಟಿಫಿಕೇಶನ್ ಬಿಡುಗಡೆ ಮಾಡಲಿದೆ. ಹೆಚ್ಚಿನ ಮಾಹಿತಿಗಾಗಿ ksrtc.inಗೆ ಭೇಟಿ ನೀಡಿ, ನೋಟಿಫಿಕೇಶನ್‌ ಬಿಡುಗಡೆಯಾದ ಕೂಡಲೇ ಅರ್ಜಿ ಸಲ್ಲಿಸಬಹುದು.

ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ/ SSLC ಪಾಸಾಗಿರಬೇಕು.

ವಯೋಮಿತಿ: ಅಭ್ಯರ್ಥಿಗಳ ವಯಸ್ಸು ಎಷ್ಟಿರಬೇಕು ಎಂಬುದನ್ನು ನಿಗದಿಪಡಿಸಿಲ್ಲ. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳಿಗೆ ಡ್ರೈವಿಂಗ್ ಟೆಸ್ಟ್ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ವೇತನ: ಡ್ರೈವಿಂಗ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 10,000-20,000 ವೇತನ ಕೊಡಲಾಗುತ್ತದೆ.

Leave A Reply

Your email address will not be published.