ಮತ್ತೊಬ್ಬ ಸೋಷಿಯಲ್‌ ಸೂಪರ್‌ಸ್ಟಾರ್‌ ಆತ್ಮಹತ್ಯೆ

Share the Article

ಮನರಂಜನಾ ಉದ್ಯಮದಲ್ಲಿ ಸಾವಿನ ಕದ ತಟ್ಟುತ್ತಿರುವ ಪ್ರಕರಣ ಹೆಚ್ಚಾಗಿದ್ದು, ಇತ್ತೀಚೆಗೆ ತುನಿಶಾ ಶರ್ಮಾ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಮತ್ತೊಂದು ಆತ್ಮಹತ್ಯೆ ಪ್ರಕರಣ ವರದಿಯಾಗಿದೆ.ಛತ್ತೀಸ್‌ಗಢದ ರಾಯಗಢದಿಂದ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ನೇಣು ಬಿಗಿದ ಸ್ಥಿತಿಯಲ್ಲಿ ಸೋಷಿಯಲ್​ ಮೀಡಿಯಾ ಸೂಪರ್​ ಸ್ಟಾರ್​ ಮೃತದೇಹ ಪತ್ತೆಯಾಗಿದೆ.

22 ವರ್ಷದ ಸೋಷಿಯಲ್ ಮೀಡಿಯಾ ಪ್ರಭಾವಿ ನೇಣಿಗೆ ಕೊರಳೊಡ್ಡಿದ ಘಟನೆ ಬೆಳಕಿಗೆ ಬಂದಿದ್ದು, ಈಕೆಯ ಹೆಸರು ಲೀನಾ ನಾಗವಂಶಿ ಎನ್ನಲಾಗಿದ್ದು, ಲೀನಾ ಅವರ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂಬ ಬಗ್ಗೆ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ದಸ್ತಾನ್-ಎ-ಕಾಬೂಲ್ ನಟಿ 21 ರ ಹರೆಯದ ತುನಿಶಾ ಶನಿವಾರದಂದು ಶೋನ ಸೆಟ್‌ನಲ್ಲಿರುವ ನಟ ಶೀಜಾನ್ ಖಾನ್ ಅವರ ಮೇಕಪ್ ರೂಮ್‌ನಲ್ಲಿ ಶವವಾಗಿ ಪತ್ತೆಯಾದ ಬೆನ್ನಲ್ಲೇ ಇದೀಗ, ಮತ್ತೊಂದು ನಟಿಯು ಈ ಸಾಲಿಗೆ ಸೇರಿಕೊಂಡಿದ್ದಾರೆ.

ಲೀನಾ ನಾಗವಂಶಿ ರಾಯಗಢ ಜಿಲ್ಲೆಯ ಚಕ್ರಧರ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಕೆಲೋ ವಿಹಾರ್ ಕಾಲೋನಿಯಲ್ಲಿ ನೆಲೆಸಿದ್ದರು. ಈಕೆ ಕಾಲೇಜಿನಲ್ಲಿ ಓದುತ್ತಿದ್ದಳು ಎನ್ನಲಾಗಿದ್ದು, ಇನ್‌ಸ್ಟಾಗ್ರಾಮ್‌ನಲ್ಲಿ 11 ಸಾವಿರಕ್ಕೂ ಹೆಚ್ಚು ಫಾಲೋವರ್ಸ್ ಹೊಂದಿದ್ದಾಳೆ. ಇನ್‌ಸ್ಟಾಗ್ರಾಂ ನಲ್ಲಿ ತುಂಬಾ ಸಕ್ರಿಯಳಾಗಿದ್ದ ಲೀನಾ ಅವರನ್ನು ಸಾಮಾಜಿಕ ಮಾಧ್ಯಮದ ಪ್ರಭಾವಿ ಎನ್ನಲು ಇದೆ ಕಾರಣ ಎನ್ನಲಾಗಿದೆ. ಅಲ್ಲದೆ ಈಕೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಲೀನಾ ನಾಗವಂಶಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಚಕ್ರಧರನಗರ ಪೊಲೀಸರು ಸ್ಥಳಕ್ಕಾಗಮಿಸಿ ಮೃತದೇಹವನ್ನು ತೆಗೆದುಕೊಂಡು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಿದ್ದಾರೆ. ಈ ಕುರಿತಾಗಿ ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಬೇಕಿದ್ದು , ಈ ವರದಿ ಬಂದ ಬಳಿಕವಷ್ಟೇ ಸಾವಿನ ನೈಜ ಕಾರಣ ಬಹಿರಂಗವಾಬೇಕಿದೆ.

Leave A Reply