ವಿದ್ಯುತ್ ದರ ಇಳಿಕೆ ಮಾಡಿದ ಸರ್ಕಾರ! ಚುನಾವಣೆ ಹಿನ್ನಲೆಯಲ್ಲಿ ಜನರಿಗೆ ಬಂಪರ್ ಆಫರ್
ಕರ್ನಾಟಕದಲ್ಲಿ ಚುನಾವಣೆ ಹತ್ತಿರ ಬರುತ್ತಿದ್ದರಂತೆ ಸರ್ಕಾರ ಜನರಿಗೆ ಬಂಪರ್ ಆಫರ್ ಗಳನ್ನು ಕೊಡುತ್ತಿದೆ. ಮೀಸಲಾತಿ, ಉದ್ಯೋಗ ಅವಕಾಶಗಳು, ಜಮೀನುಗುಳು ಎಂಬಂತೆ ಮುಂತಾದ ಹಲವಾರು ವಿಚಾರಗಳಲ್ಲಿ ಜನರಿಗೆ ಸಹಕಾರಿಯಾಗುವಂತಹ ಯೋಜನೆಗಳನ್ನು ನೀಡುತ್ತಿದೆ. ಅಂತೆಯೇ ಇದೀಗ ವಿದ್ಯುತ್ ದರದ ವಿಷಯದಲ್ಲಿ ಗ್ರಾಹಕರಿಗೆ ಗುಡ್ ನ್ಯೂಸ್ ನೀಡಿದೆ.
ಹೌದು ಕರ್ನಾಟಕ ಸರ್ಕಾರದ ಇಂಧನ ಇಲಾಖೆಯು ಬೆಸ್ಕಾಂ, ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ದರ ಇಳಿಕೆ ಮಾಡಿ ಆದೇಶ ಹೊರಡಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಇಂಧನ ಸಚಿವ ಸುನಿಲ್ ಕುಮಾರ್ ಅವರು, ಬೆಸ್ಕಾಂ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಹೊಂದಾಣಿಕೆ ವೆಚ್ಚ ಕಡಿತ ಮಾಡುವ ನಿರ್ಧಾರ ತೆಗದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ಇತ್ತೀಚೆಗಷ್ಟೇ ಸರ್ಕಾರವು ಇಂಧನ ಹೊಂದಾಣಿಕೆಯ ಶುಲ್ಕವನ್ನು ಪರಿಸ್ಕರಿಸಿ ಆದೇಶ ಹೊರಡಿಸಲಾಗಿತ್ತು. ಇದರಿಂದ ವಿದ್ಯುತ್ ದರ ಏರಿಕೆಯಾಗಿ ಗ್ರಾಹಕರಿಗೆ ತುಂಬಾ ತೊಂದರೆಯಾಗಿತ್ತು. ಈ ವೇಳೆ ಸರ್ಕಾರದ ವಿರುದ್ಧ ಜನರು ಆಕ್ರೋಶ ಹೊರಹಾಕಿದ್ದರು.
ಆದರೆ ಪ್ರಸ್ತುತ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಜನರ ಮನವೊಲಿಸಲು ಹಲವು ಕಸರತ್ತು ನಡೆಸುತ್ತಿದೆ. ಅಂತೆಯೇ ಇದೀಗ ಬೆಸ್ಕಾಂ ವ್ಯಾಪ್ತಿಯಲ್ಲಿ 37 ಪೈಸೆ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ 39 ಪೈಸೆ ಕಡಿತ ಮಾಡಲಾಗಿದೆ, ಇದರ ಪ್ರಯೋಜನ ನೇರವಾಗಿ ಗ್ರಾಹಕರಿಗೆ ಲಭಿಸಲಿದೆ ಎಂದು ಸಚಿವ ಸುನಿಲ್ ಕುಮಾರ್ ಟ್ವೀಟ್ ಮಾಡಿ ತಿಳಿಸಿದ್ದಾರೆ.