ಅಮೆಜಾನ್‌ ಫ್ಯಾಬ್‌ ಫೋನ್ಸ್‌ ಫೆಸ್ಟ್‌ ಸೇಲ್‌ | Oneplus ಪ್ರಿಯರಿಗೆ ಬಿಗ್ ಡಿಸ್ಕೌಂಟ್

Share the Article

ಇ-ಕಾಮರ್ಸ್‌ ದೈತ್ಯ ಅಮೆಜಾನ್‌ ಗ್ರಾಹಕರಿಗೆ ಹೊಸ ಆಫರ್ ಗಳನ್ನು ನೀಡುತ್ತಲೇ ಬಂದಿದೆ. ಇದೀಗ ಅಮೆಜಾನ್‌ ಫ್ಯಾಬ್‌ ಫೋನ್ಸ್‌ ಫೆಸ್ಟ್‌ ಸೇಲ್‌ ನಡೆಸುತ್ತಿದ್ದು, ಒನ್‌ಪ್ಲಸ್‌ ಸ್ಮಾರ್ಟ್‌ಫೋನ್‌ಗಳಿಗೆ ಬಿಗ್‌ ಡಿಸ್ಕೌಂಟ್‌ ನೀಡುತ್ತಿದೆ.

ಹೌದು, ಅಮೆಜಾನ್‌ ಫ್ಯಾಬ್‌ ಫೋನ್ಸ್‌ ಫೆಸ್ಟ್‌ ಸೇಲ್‌ನಲ್ಲಿ ಒನ್‌ಪ್ಲಸ್‌ 10T ರಿಯಾಯಿತಿ ಪಡೆದುಕೊಂಡಿದೆ. ಈ ಸೇಲ್‌ ಡಿಸೆಂಬರ್ 31 ರ ಅಂತ್ಯದವರೆಗೆ ಅಂದರೆ ಇಂದಿನವರೆಗೆ ಮುಂದುವರಿಯುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್‌ ಜನಪ್ರಿಯ 5Gಫೋನ್‌ಗಳಲ್ಲಿ ಒಂದಾಗಿದೆ. ಇದು ಕ್ವಾಲ್‌ಕಾಮ್‌ ಸ್ನಾಪ್‌ಡ್ರಾಗನ್ 8+ Gen 1 SoC ಪ್ರೊಸೆಸರ್‌ ನಲ್ಲಿ ಕಾರ್ಯ ನಿರ್ವಹಿಸಲಿದೆ. ಹಾಗಾದ್ರೆ ಒನ್‌ಪ್ಲಸ್‌ 10T ಮೇಲೆ ಏನೆಲ್ಲಾ ಆಫರ್‌ ಲಭ್ಯವಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಒನ್‌ಪ್ಲಸ್‌ 10T ಅಮೆಜಾನ್‌ಲ್ಲಿ 5,000ರೂ.ಗಳ ಡಿಸ್ಕೌಂಟ್‌ ದೊರೆಯಲಿದೆ. ಇದರಿಂದ ಈ ಸ್ಮಾರ್ಟ್‌ಫೋನ್‌ ಇದೀಗ ಕೇವಲ 44,999ರೂ. ಬೆಲೆಯಲ್ಲಿ ಲಭ್ಯವಾಗುತ್ತಿದೆ. ಇದು 8GB RAM ಮತ್ತು 128GB ಸ್ಟೋರೇಜ್ ಮಾದರಿಗೆ ಅನ್ವಯಿಸಲಿದೆ. ಇದಲ್ಲದೆ ಎಕ್ಸ್‌ಚೇಂಜ್‌ ಆಫರ್‌ನಲ್ಲಿ (ಫೋನ್‌ ಗುಣಮಟ್ಟದ ಆಧಾರದ ಮೇಲೆ) 13,300 ವರೆಗೆ ರಿಯಾಯಿತಿ ಕೂಡ ದೊರೆಯಲಿದೆ. ಯೆಸ್‌ ಬ್ಯಾಂಕ್‌ ಕ್ರೆಡಿಟ್‌ ಕಾರ್ಡ್‌ ಮೂಲಕ ಇಎಂಐ ವಹಿವಾಟು ನಡೆಸುವವರಿಗೆ ಕೂಡ ಹೆಚ್ಚುವರಿ ರಿಯಾಯಿತಿ ದೊರೆಯಲಿದೆ.

ಒನ್‌ಪ್ಲಸ್‌ 10T ಸ್ಮಾರ್ಟ್‌ಫೋನ್‌ 4800mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 150W SUPERVOOC ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಈ ಚಾರ್ಜರ್ ಕೇವಲ 19 ನಿಮಿಷಗಳಲ್ಲಿ ಫೋನ್ ಅನ್ನು ಸಂಪೂರ್ಣವಾಗಿ ಚಾರ್ಜ್ ಮಾಡುತ್ತದೆ ಎಂದು ಕಂಪನಿ ಹೇಳಿಕೊಂಡಿದೆ. ಸ್ಮಾರ್ಟ್ ಬ್ಯಾಟರಿ ಹೆಲ್ತ್ ಅಲ್ಗಾರಿದಮ್, ಬ್ಯಾಟರಿ ಹೀಲಿಂಗ್ ಟೆಕ್ನಾಲಜಿ, ದಕ್ಷತೆಯನ್ನು ಸುಧಾರಿಸಲು VFC ಟ್ರಿಕಲ್ ಚಾರ್ಜಿಂಗ್ ಆಪ್ಟಿಮೈಸೇಶನ್ ಅಲ್ಗಾರಿದಮ್, ಚಾರ್ಜಿಂಗ್ ನಿರ್ವಹಿಸಲು ಕಸ್ಟಮೈಸ್ ಮಾಡಿದ ಸ್ಮಾರ್ಟ್ ಚಿಪ್ ಮತ್ತು 13 ಟೆಂಪ್‌ರೇಚರ್‌ ಸೆನ್ಸಾರ್‌ ಒಳಗೊಂಡ ಬ್ಯಾಟರಿ-ಸಂಬಂಧಿತ ಫೀಚರ್ಸ್‌ಗಳನ್ನು ಒಳಗೊಂಡಿದೆ.

ಒನ್‌ಪ್ಲಸ್‌ 10T ಸ್ಮಾರ್ಟ್‌ಫೋನ್‌ 6.7 ಇಂಚಿನ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು 2,412×1,080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಬಲವನ್ನು ಪಡೆದುಕೊಂಡಿದೆ. ಈ ಡಿಸ್‌ಪ್ಲೇ 10-ಬಿಟ್ ಕಲರ್‌, RGB ಬಣ್ಣದ ಹರವು ಮತ್ತು HDR10+ ಬೆಂಬಲಿಸಲಿದೆ. ಈ ಡಿಸ್‌ಪ್ಲೇ 360Hz ವರೆಗಿನ ಹಾರ್ಡ್‌ವೇರ್ ಟಚ್‌ ರೆಸ್ಪಾನ್ಸ್‌ ಮತ್ತು 720Hz ನ ಸಾಫ್ಟ್‌ವೇರ್ ಟಚ್‌ ರೆಸ್ಪಾನ್ಸ್‌ ಅನ್ನು ನೀಡಲಿದೆ.

Leave A Reply