Home Business 15 ವರ್ಷ ಹಳೆಯ ವಾಹನ ಗುಜರಿ ನೀತಿ: ಮಹತ್ವದ ಮಾಹಿತಿ ಇಲ್ಲಿದೆ

15 ವರ್ಷ ಹಳೆಯ ವಾಹನ ಗುಜರಿ ನೀತಿ: ಮಹತ್ವದ ಮಾಹಿತಿ ಇಲ್ಲಿದೆ

Hindu neighbor gifts plot of land

Hindu neighbour gifts land to Muslim journalist

ಕೇಂದ್ರ ಸರ್ಕಾರ ವಾಹನ ಗುಜರಿ ನೀತಿಯನ್ನು ಕಳೆದ ವರ್ಷ ಪ್ರಕಟಿಸಿದೆ. ಈ ನಡುವೆ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರು ಇತ್ತೀಚೆಗಷ್ಟೇ, ಈ ವಿಚಾರವನ್ನು ಪ್ರಸ್ತಾಪಿಸಿದ್ದು, 15 ವರ್ಷಕ್ಕಿಂತ ಹಳೆಯದಾದ ಸರ್ಕಾರಿ ವಾಹನಗಳನ್ನು ಗುಜರಿಗೆ ಹಾಕಲಾಗುವ ಕುರಿತು ಮಾಹಿತಿ ನೀಡಿದ್ದಾರೆ.

ವಿಶ್ವದ ಹವಾಮಾನ ಬದಲಾವಣೆ ಸಮಸ್ಯೆಯನ್ನು ಹತೋಟಿಗೆ ತರುವ ನಿಟ್ಟಿನಲ್ಲಿ ಹಲವು ಕ್ರಮಗಳಲ್ಲಿ ವಾಹನಗಳ ಮಾಲಿನ್ಯ ನಿಗ್ರಹಿಸುವುದು ಒಂದಾಗಿದೆ. ಭಾರತ ಈ ನಿಟ್ಟಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳನ್ನು ಹಂತ ಹಂತವಾಗಿ ನಿಲ್ಲಿಸಿ ಎಲೆಕ್ಟ್ರಿಕ್ ವಾಹನಗಳನ್ನು ಸಂಪೂರ್ಣವಾಗಿ ತರುವ ಯೋಜನೆ ಜಾರಿಗೆ ತರಲು ಮುಂದಾಗಿದೆ.

ವಾಹನ ಸ್ಕ್ರ್ಯಾಪೇಜ್ ನೀತಿ (V-VMP) ಏಪ್ರಿಲ್ 1, 2022 ರಿಂದ ಜಾರಿಗೆ ಬಂದಿದ್ದು, ಇದನ್ನು 2021-22ರ ಕೇಂದ್ರ ಬಜೆಟ್​ನಲ್ಲಿ ಘೋಷಣೆ ಮಾಡಲಾಗಿದೆ. ಈ ನೀತಿ ಅಡಿ ವೈಯಕ್ತಿಕ ವಾಹನಗಳಿಗೆ 20 ವರ್ಷಗಳ ನಂತರ ಫಿಟ್‌ನೆಸ್ ಪರೀಕ್ಷೆಗಳನ್ನು ನಡೆಸಲಾಗುತ್ತದೆ.

ವಾಣಿಜ್ಯ ವಾಹನಗಳಿಗೆ 15 ವರ್ಷಗಳು ಪೂರ್ಣಗೊಂಡ ಬಳಿಕ ಈ ಪ್ರಕ್ರಿಯೆಯ ಅವಶ್ಯಕತೆ ಉಂಟಾಗುತ್ತದೆ. ಸದ್ಯ ಇದರಲ್ಲಿ 36 ಅರ್ಜಿಗಳು ಅನುಮೋದನೆಗೊಂಡಿದ್ದು, 11 ರಾಜ್ಯಗಳ ಗುಜರಿ ಉದ್ಯಮಿಗಳು ಏಕಗವಾಕ್ಷಿ ವ್ಯವಸ್ಥೆಗೆ ಅರ್ಜಿ ಸಲ್ಲಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅನುಮೋದನೆ ಪಡೆಯಲು ನೆರವಾಗಿವೆ.

ಕೇಂದ್ರ ಸರ್ಕಾರ ಜಾರಿಗೆ ತಂದ 15 ವರ್ಷಕ್ಕಿಂತ ಹಳೆಯ ವಾಹನಗಳ ಗುಜರಿ ನೀತಿಯ ಏಕಗವಾಕ್ಷಿ ಯೋಜನೆಗೆ ಕರ್ನಾಟಕ ಸೇರಿದಂತೆ 11 ರಾಜ್ಯಗಳು ಸೇರ್ಪಡೆಯಾಗಿದೆ. ಏಕ ಗವಾಕ್ಷಿ ವ್ಯವಸ್ಥೆಗೆ 11 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳನ್ನು ಒಳಪಡಿಸಲಾಗಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಮಾಹಿತಿ ನೀಡಿದೆ.

ಖಾಸಗಿ ಕಂಪನಿಗಳು ವಾಹನ ಗುಜರಿ ಘಟಕ ಆರಂಭಿಸಲು ಅರ್ಜಿ ಸಲ್ಲಿಸಲು ಅನುಕೂಲವಾಗಲಿದ್ದು, ಈಗಾಗಲೇ 117 ಹೂಡಿಕೆದಾರರು ಘಟಕ ಸ್ಥಾಪನೆಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. 2022ರ ನವೆಂಬರ್ 14ರಂತೆ ನೋಂದಾಯಿತ ವಾಹನ ಸ್ಕ್ರ್ಯಾಪಿಂಗ್ ಸೌಲಭ್ಯಗಳಿಗೆ ಆಸಕ್ತಿ ತೋರಿದ 117 ಹೂಡಿಕೆದಾರರ ಅರ್ಜಿಗಳು ಪ್ರಕ್ರಿಯೆಯಲ್ಲಿದ್ದು, ಅವುಗಳಲ್ಲಿ 36 ಅರ್ಜಿಗಳನ್ನು ಆಯಾ ರಾಜ್ಯ ಸರ್ಕಾರಗಳು ಅನುಮೋದನೆ ನೀಡಿವೆ.

ಗುಜರಾತ್, ಉತ್ತರ ಪ್ರದೇಶ, ಕರ್ನಾಟಕ, ಆಂಧ್ರಪ್ರದೇಶ, ಒಡಿಶಾ, ಮಧ್ಯಪ್ರದೇಶ, ರಾಜಸ್ಥಾನ, ಅಸ್ಸಾಂ, ಗೋವಾ, ಉತ್ತರಾಖಂಡ ಮತ್ತು ಚಂಡೀಗಢವನ್ನು ವಿ-ವಿಎಂಪಿಗಾಗಿ ರಾಷ್ಟ್ರೀಯ ಏಕ ಗವಾಕ್ಷಿ ವ್ಯವಸ್ಥೆಗೆ ಒಳಪಡಿಸಲಾಗಿದೆ ಎಂದು ಹೇಳಿಕೆಯಲ್ಲಿ ವಿವರಣೆ ನೀಡಲಾಗಿದೆ.