ಮೊಬೈಲ್‌ ರೀಚಾರ್ಜ್‌ ಮಾಡುವವರಿಗೆ ಇದು ಬೆಸ್ಟ್‌ ಪ್ಲ್ಯಾನ್‌ ಹೊಸ ವರ್ಷಕ್ಕೆ | 2023 ರ ಪ್ಲ್ಯಾನ್‌ ಲಿಸ್ಟ್‌ ಇಲ್ಲಿದೆ

ಭಾರತದಲ್ಲಿ ಹಲವಾರು ಟೆಲಿಕಾಂ ಕಂಪನಿಗಳು ಇವೆ. ಅವುಗಳಲ್ಲಿಮುಖ್ಯವಾಗಿ ಭಾರೀ ಚಾಲ್ತಿಯಲ್ಲಿರುವುದು ರಿಲಯನ್ಸ್ ಜಿಯೋ ಮತ್ತು ಏರ್‌ಟೆಲ್ . ಈ ಕಂಪೆನಿಗಳ ನಡುವಿನ ದರ ಪೈಪೋಟಿ ದಿನೇ ದಿನೇ ಮುಂದುವರಿಯುತ್ತಲೇ ಇದೆ ಅಂದರೆ ತಪ್ಪಾಗಲಾರದು . ಪ್ರಸ್ತುತ ಜಿಯೋ ದೇಶದ ಅತಿದೊಡ್ಡ ಟೆಲಿಕಾಂ ಕಂಪೆನಿಯಾಗಿ ಹೊರಹೊಮ್ಮಿದ ನಂತರ ಇತ್ತ ಏರ್‌ಟೆಲ್ ಕೂಡ ವಿಭಿನ್ನ ಪ್ರಯೋಜನಗಳ ಮೂಲಕ ಹೆಚ್ಚು ಗ್ರಾಹಕರನ್ನು ಸೆಳೆಯಲು ಮುಂದಾಗಿದೆ. ಇದೀಗ ಜಿಯೋ, ಏರ್‌ಟೆಲ್‌ ಹಾಗೂ ವಿ ಟೆಲಿಕಾಂ ಗಳು ಈ ವರ್ಷ ಕೆಲವು ನೂತನ ಪ್ರೀಪೇಯ್ಡ್‌ ಪ್ಲ್ಯಾನ್‌ಗಳನ್ನು ಪರಿಚಯಿಸುವ ಸಾಧ್ಯತೆಗಳಿವೆ.

ಹೌದು, ಜಿಯೋ, ಏರ್‌ಟೆಲ್‌ ಹಾಗೂ ವಿ ಟೆಲಿಕಾಂಗಳು ವಿಭಿನ್ನ ಯೋಜನೆಗಳ ಆಯ್ಕೆ ಹೊಂದಿವೆ. ಹಾಗಾದರೆ ಪ್ರಸ್ತುತ 2023ರಲ್ಲಿ ಅತ್ಯುತ್ತಮ ಎನಿಸುವ ಕೆಲವು ಪ್ಲ್ಯಾನ್‌ಗಳ ಬಗ್ಗೆ ಇಲ್ಲಿ ತಿಳಿಸಲಾಗಿದೆ.

  • ಜಿಯೋದ 2545ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು:

ಜಿಯೋದ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 336 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 1.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

  • ಜಿಯೋದ 2879ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು:

ಜಿಯೋದ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

  • ಜಿಯೋ ಟೆಲಿಕಾಂ 2999ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು:

ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯವಿದೆ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿ ಯಾಗಿ ಜಿಯೋ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್‌ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯವಿದೆ.

  • ಏರ್‌ಟೆಲ್‌ನ 1799ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು:

ಏರ್‌ಟೆಲ್‌ನ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಒಟ್ಟು 24GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಏರ್‌ಟೆಲ್‌ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಒಟ್ಟು 3600 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ಏರ್‌ಟೆಲ್‌ನ 2999ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು
ಏರ್‌ಟೆಲ್‌ನ 2999ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು
ಏರ್‌ಟೆಲ್‌ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಏರ್‌ಟೆಲ್‌ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಉಚಿತ ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿ ಯಾಗಿ ಏರ್‌ಟೆಲ್ Xstream ಪ್ರೀಮಿಯಂ ಸೇವೆ, ವಿಂಕ್ ಮ್ಯೂಸಿಕ್, ಫಾಸ್ಟ್‌ ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

  • ಏರ್‌ಟೆಲ್‌ನ 3359ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು:

ಏರ್‌ಟೆಲ್‌ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 2.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯ ವಾಗಲಿವೆ. ಏರ್‌ಟೆಲ್‌ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಹೆಚ್ಚುವರಿ ಯಾಗಿ ಮೂರು ತಿಂಗಳ ಡಿಸ್ನಿ+ ಹಾಟ್‌ಸ್ಟಾರ್ (disney+ hotstar) ಚಂದಾದಾರಿಕೆ ಹಾಗೂ ಏರ್‌ಟೆಲ್‌ ಆಪ್ಸ್‌ಗಳ ಸೇವೆ ಪಡೆದಿದೆ.

  • ವಿ ಟೆಲಿಕಾಂನ 2899ರೂ. ಪ್ರೀಪೇಯ್ಡ್‌ ಪ್ಲಾನ್ ಪ್ರಯೋಜನಗಳು:

ವಿ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 1.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ವಿ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇದರೊಂದಿಗೆ ವಿಕೆಂಡ್ ಡೇಟಾ ರೋಲ್ ಓವರ್ ಸೌಲಭ್ಯ ಲಭ್ಯ.

  • ವಿ ಟೆಲಿಕಾಂನ 3099ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು:

ವಿ ಟೆಲಿಕಾಂನ ಈ ಪ್ಲ್ಯಾನಿನಲ್ಲಿ ಪ್ರತಿದಿನ 2 GB ಡೇಟಾ ಪ್ರಯೋಜನ ದೊರೆಯುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ. ಇನ್ನು ಈ ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಹೆಚ್ಚುವರಿ ಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಚಂದಾದಾರಿಕೆ ಸಹ ದೊರೆಯಲಿದೆ. ಇದರೊಂದಿಗೆ ವಿ ಆಪ್ಸ್‌ಗಳು ಲಭ್ಯವಾಗಲಿವೆ.

ಈ ಮೇಲಿನಂತೆ ರಿಲಯನ್ಸ್ ಜಿಯೋ ಮತ್ತು ಏರ್‌ಟೆಲ್, ವಿ ಟೆಲಿಕಾಂ ಗಳ ಉತ್ತಮ ರಿಚಾರ್ಜ್ ಪ್ಲಾನ್ ಗಳನ್ನು ಆಕ್ಟಿವೇಟ್ ಮಾಡಿಕೊಳ್ಳಬಹುದು.

Leave A Reply

Your email address will not be published.