ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಕರ್ನಾಟಕ ಸ್ತಬ್ಧಚಿತ್ರಕ್ಕಿಲ್ಲ ಅವಕಾಶ! ಕೇಂದ್ರದ ನಡೆಗೆ ಎಲ್ಲೆಡೆ ಭಾರೀ ಆಕ್ರೋಶ!
ಗಣರಾಜ್ಯೋತ್ಸವದಂದು ದೇಶದ ವಿವಿಧ ರಾಜ್ಯಗಳಿಂದ ತಮ್ಮಲ್ಲಿನ ಕಲೆ, ಸಂಸ್ಕೃತಿಗಳನ್ನು ಪ್ರತಿಬಿಂಭಿಸುವ ಸ್ತಬ್ಧಚಿತ್ರಗಳ ಪ್ರದರ್ಶನ ನಡೆಯುವುದು ಎಲ್ಲರಿಗೂ ತಿಳಿದಿದೆ. ಆದರೆ ಈ ವರ್ಷ ಜನವರಿ 26 ರಂದು ನಡೆಯುವ ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರ ಪ್ರದರ್ಶನಕ್ಕೆ ಅವಕಾಶ ಇಲ್ಲವಾಗಿದೆ.
ಕರ್ನಾಟಕವು ಸತತ 13 ವರ್ಷಗಳಿಂದ ಗಣರಾಜ್ಯೋತ್ಸವ ಪರೇಡ್‍ನಲ್ಲಿ ರಾಜ್ಯದ ಸಂಸ್ಕೃತಿ ಮತ್ತು ಪರಂಪರೆಯನ್ನು ಸ್ಥಬ್ಧಚಿತ್ರದ ಮೂಲಕ ಪ್ರದರ್ಶಿಸಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗುತ್ತಿತ್ತು. ಆದರೆ ಈ ವರ್ಷ ಕೇಂದ್ರ ಸರ್ಕಾರವು ಕರ್ನಾಟಕದ ಸ್ತಬ್ಧ ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಲು ನಿರಾಕರಿಸಿದೆ.
2023ರ ಗಣರಾಜ್ಯೋತ್ಸವದಂದು ಕರ್ನಾಟಕವು ರಾಗಿ ವೈವಿಧ್ಯತೆಯ ಕುರಿತು ಪ್ರದರ್ಶನ ನೀಡುವುದಾಗಿ ಕೇಂದ್ರ ಸರ್ಕಾರದ ಎದುರು ಪ್ರಸ್ತಾಪ ಸಲ್ಲಿಸಿತ್ತು. ಆದರೆ ಇದು ತಿರಸ್ಕಸ್ಕೃತವಾಗಿದೆ ಎಂದು ರಾಜ್ಯ ಸರ್ಕಾರದ ಅಧಿಕಾರಿಗಳು ಈ ಬಗ್ಗೆ ಸ್ಪಷ್ಟಪಡಿಸಿದ್ದಾರೆ. ಇದರ ಪರಿಣಾಮವಾಗಿ ಜನವರಿ 26ರಂದು ಗಣರಾಜ್ಯೋತ್ಸವದ ಪ್ರಯುಕ್ತ ನವದೆಹಲಿಯ ಕರ್ತವ್ಯ ಪಥದಲ್ಲಿ ನಡೆಯುವ ವರ್ಣರಂಜಿತ ಪಥಸಂಚಲನದಲ್ಲಿ ಕರ್ನಾಟಕ 13 ವರ್ಷಗಳ ಬಳಿಕ ಪ್ರತಿನಿಧಿಸುತ್ತಿಲ್ಲ ಎಂದು ತಿಳಿಸಿದರು.
ಸ್ತಬ್ಧಚಿತ್ರ ಆಯ್ಕೆ ಸಮಿತಿಯ ತಜ್ಞರು ಮೊದಲು ನಡೆಸಿದ ಕೆಲವು ಸುತ್ತಿನ ಮೌಲ್ಯಮಾಪನದಲ್ಲಿ ಕರ್ನಾಟಕವು ಪ್ರದರ್ಶಿಸಿದ ರಾಗಿ ವಿಷಯಾಧಾರಿತ ವಿನ್ಯಾಸ ಹಾಗೂ ಸಂಗೀತವು ಮೆಚ್ಚುಗೆಯನ್ನು ಪಡೆದಿತ್ತು. ಆದರೆ ಕೊನೆಯ ಸುತ್ತಿನಲ್ಲಿ ಅದನ್ನು ತಿರಸ್ಕರಿಸಲಾಗಿದೆ. ಅಲ್ಲದೆ ಇತರ ರಾಜ್ಯಗಳು, ಕೇದ್ರವು ನಮಗೆ ಅವಕಾಶ ನೀಡದೆ ತಮ್ಮನ್ನು ನಿರ್ಲಕ್ಷಿಸುತ್ತಿದ್ದು, ಹಲವು ವರ್ಷಗಳಿಂದ ಕೆಲವೇ ರಾಜ್ಯಗಳಿಗೆ ಅವಕಾಶವನ್ನು ನೀಡುತ್ತಿದೆ ಎಂದು ಆಕ್ಷೇಪ ಎತ್ತಿದ್ದರು. ಹೀಗಾಗಿ ನಿರಂತರ ಅವಕಾಶ ಪಡೆದ ರಾಜ್ಯಗಳಿಗೆ ಈ ಸಲ ಅವಕಾಶ ನಿರಾಕರಿಸಿದೆ ಎನ್ನಲಾಗುತ್ತಿದೆ.
ಕಳೆದ ವರ್ಷದ ಗಣರಾಜ್ಯೋತ್ಸವದಲ್ಲಿ ಕೇರಳ ಸರ್ಕಾರ ನಾರಾಯಣಗುರು ಸ್ಥಬ್ಧ ಚಿತ್ರವನ್ನು ಪ್ರದರ್ಶಿಸುವುದಾಗಿ ಪ್ರಸ್ತಾಪ ಸಲ್ಲಿಸಿತ್ತು. ಆದರೆ ಕೇಂದ್ರ ಸರ್ಕಾರ ಅವಕಾಶ ಇದಕ್ಕೆ ನೀಡಿರಲಿಲ್ಲ. ಇದರಿಂದಾಗಿ ನಾರಾಯಣಗುರು ಅನುಯಾಯಿಗಳು ಕೇಂದ್ರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದರು. ಸದ್ಯ ಉತ್ತಮ ಪ್ರದರ್ಶನ ನೀಡುತ್ತಾ ಬಂದಿದ್ದ ನಮ್ಮ ರಾಜ್ಯದ ಸ್ತಬ್ಧಚಿತ್ರಕ್ಕೆ ಈ ಬಾರಿ ಅವಕಾಶ ತಪ್ಪಿರುವುದಕ್ಕೆ ಎಲ್ಲೆಡೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.
13 ವರ್ಷಗಳಿಂದ ಸ್ಥಬ್ಧಚಿತ್ರ ಪ್ರದರ್ಶಿಸುತ್ತಿರುವ ಕರ್ನಾಟಕವು ಹಲವಾರು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ. ಕೆಲವು ಸೃಜನಶೀಲ ಹಾಗೂ ವರ್ಣರಂಜಿತ ಸ್ಥಬ್ಧಚಿತ್ರಕ್ಕಾಗಿ ವ್ಯಾಪಕ ಮೆಚ್ಚುಗೆಯನ್ನು ಪಡೆದಿದೆ. ಹೆಚ್ಚಾಗಿ ಜಾನಪದ, ಜೀವವೈವಿಧ್ಯ, ಕರಕುಶಲ ವಿಷಯಗಳನ್ನೇ ಪ್ರದರ್ಶನಕ್ಕೆ ಆವರಿಸಿಕೊಳ್ಳುತ್ತಾ ಬಂದಿದೆ.2022ರ ಗಣರಾಜ್ಯೋತ್ಸವದಂದು ಕರ್ನಾಟಕ ಪ್ರದರ್ಶಿಸಿದ್ದ ಸ್ಥಬ್ಧ ಚಿತ್ರಕ್ಕೆ 2ನೇ ಸ್ಥಾನ ಪಡೆದಿತ್ತು.