ಭೀಕರ ಚಳಿಯ ಕಾರಣ ಈ ಶಾಲೆಯ ಮಕ್ಕಳಿಗೆ ಜ.15ರವರೆಗೆ ರಜೆ ಘೋಷಣೆ

ರಾಷ್ಟ್ರ ರಾಜಧಾನಿ ನವದೆಹಲಿ ಚಳಿಗೆ ತತ್ತರಿಸಿ ಹೋಗಿದ್ದು, ನೆನ್ನೆ(ಜನವರಿ08) ದೆಹಲಿಯ ಸಫ್ದರ್‍ಜಂಗ್‍ನಲ್ಲಿ ಕನಿಷ್ಠ ತಾಪಮಾನ 1.9 ಡಿಗ್ರಿ ಸೆಲ್ಸಿಯಸ್​ಗೆ ಕುಸಿತ ಕಂಡಿದೆ. ಈ ಹಿನ್ನೆಲೆಯಲ್ಲಿ ನಿನ್ನೆಯಿಂದ ಜನವರಿ 15ರವರೆಗೆ ದೆಹಲಿಯಲ್ಲಿ ಎಲ್ಲಾ ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ಈ ಬಗ್ಗೆ ದೆಹಲಿ ಸರ್ಕಾರದ ಸೂಚನೆಯಂತೆ ಶಿಕ್ಷಣ ನಿರ್ದೇಶನಾಲಯ ಸುತ್ತೋಲೆ ಹೊರಡಿಸಲಾಗಿದೆ.

9ನೇ ತರಗತಿಯಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಪರ್ಯಾಯ ತರಗತಿಗಳು ನಡೆಯಲಿದ್ದು,ರಜೆ ಇದ್ದರೂ ಕೂಡ ಶೈಕ್ಷಣಿಕ ಕಾರ್ಯಕ್ಷಮತೆ ಬಗ್ಗೆ ಗಮನಹರಿಸಲಾಗುತ್ತದೆ ಎಂದು ದೆಹಲಿ ಶಿಕ್ಷಣ ನಿರ್ದೇಶನಾಲಯ ಮಾಹಿತಿ ನೀಡಿದೆ. ಚಳಿಗಾಲ ಎಂದಾಗ ಹಾಸಿಗೆಯಿಂದ ಏಳಲು ಹರಸಾಹಸ ಪಡುವವರು ಹೆಚ್ಚಿನವರಿದ್ದಾರೆ.

ಬೆಳಗ್ಗೆ ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದಟ್ಟವಾದ ಮಂಜು ಆವರಿಸಿರುವ ಜನ ತೀವ್ರ ಚಳಿಯಿಂದ ತತ್ತರಿಸಿ ಹೋಗಿದ್ದಾರೆ. ಪ್ರತಿಕೂಲ ಹವಾಮಾನ ಹಾಗೂ ಇತರ ಕಾರ್ಯಾಚರಣೆಯ ಸಮಸ್ಯೆ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸುಮಾರು 20 ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದೆ.

ಇದಲ್ಲದೆ, ಮಂಜು ಕವಿದ ವಾತಾವರಣದ ಪರಿಣಾಮ 42 ರೈಲುಗಳು ಸಂಚಾರದಲ್ಲೂ ವ್ಯತ್ಯಯವಾಗಿದೆ ಎಂದು ಉತ್ತರ ರೈಲ್ವೆ ವಕ್ತಾರರು ಮಾಹಿತಿ ನೀಡಿದ್ದಾರೆ. ಚಳಿ ಹೆಚ್ಚಾಗುತ್ತಲೇ ಇದ್ದು ಎರಡು ದಿನಗಳವರೆಗೆ ಪರಿಸ್ಥಿತಿ ವಿಕೋಪಕ್ಕೆ ತೆರಳುವ ಸಾಧ್ಯತೆ ಇರುವ ಹಿನ್ನೆಲೆ ಜನ ಎಚ್ಚರವಹಿಸಬೇಕು ಎಂದು ಸರ್ಕಾರ ಮನವಿ ಸಲ್ಲಿಸಿದೆ.

Leave A Reply

Your email address will not be published.