BREAKING NEWS : ರಾಜ್ಯ ರಾಜಧಾನಿಯಲ್ಲಿ ಘೋರ ದುರಂತ!!! ಮೆಟ್ರೋ ಪಿಲ್ಲರ್ ಕಬ್ಬಿಣದ ರಾಡುಗಳು ಬಿದ್ದು ತಾಯಿ, ಮಗು ಸಾವು

ಮೆಟ್ರೋ ಪಿಲ್ಲರ್‌ ಕಬ್ಬಿಣದ ರಾಡುಗಳು ರಸ್ತೆಗೆ ಉರುಳಿದ್ದು, ಇದರ ಪರಿಣಾಮ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದ ತಾಯಿ ಮತ್ತು ಮಗು ಸಾವನ್ನಪ್ಪಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

 

ಬೆಂಗಳೂರಿನ ನಾಗವಾರ ರಿಂಗ್ ರೋಡ್‍ನ ಎಚ್‍ಬಿಆರ್ ಲೇಔಟ್ ಬಳಿ ಈ ಘಟನೆ ನಡೆದಿದೆ. ಎಚ್‍ಬಿಆರ್ ಲೇಔಟ್ ಬಳಿ ಮೆಟ್ರೋ ಕಾಮಗಾರಿ ನಡೆಯುತ್ತಿತ್ತು. ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್ ಕಬ್ಬಿಣದ ರಾಡುಗಳು ಬಿದ್ದು ಘೋರ ದುರಂತವಾಗಿದೆ. ಈ ದುರಂತಕ್ಕೆ ತಾಯಿ ಮತ್ತು ಮಗು ಬಲಿಯಾಗಿದ್ದಾರೆ.

ಕಾಮಗಾರಿ ನಡೆಯುತ್ತಿದ್ದ ರಸ್ತೆಯಲ್ಲಿ ಪತಿ, ಪತ್ನಿ ಅವಳಿ ಮಕ್ಕಳ ಜೊತೆಗೆ ಬೈಕ್‍ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಏಕಾಏಕಿ ಇವರ ಮೇಲೆ ಕಬ್ಬಿಣದ ರಾಡುಗಳು ಬಿದ್ದಿವೆ. ಘಟನೆಯ ಪರಿಣಾಮ ಪತಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಮಗು ಹಾಗೂ ಪತ್ನಿಗೆ ಗಂಭೀರ ಗಾಯಗಳಾಗಿವೆ. ತಕ್ಷಣವೇ ಇವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.

ಆದರೆ, ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ತಾಯಿ ಮತ್ತು ಮಗು ಸಾವನ್ನಪ್ಪಿದ್ದಾರೆ. ಮೃತರನ್ನು ತೇಜಸ್ವಿನಿ (28) ಮತ್ತು ಮಗು ವಿಹಾನ್(2) ಎಂದು ಗುರುತಿಸಲಾಗಿದೆ. ಲೋಹಿತ್ ಹಾಗೂ ಮತ್ತೊಂದು ಹೆಣ್ಣು ಮಗುವಿಗೆ ಐಸಿಯೂನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave A Reply

Your email address will not be published.