ಬೆಳ್ತಂಗಡಿ : ಭೂಕಬಳಿಕೆಯ ಆರೋಪದ ಮೇಲೆ ಸಾಮಾಜಿಕ ಜಾಲತಾಣದಲ್ಲಿ ಪಂಚಾಯತ್ ಉಪಾಧ್ಯಕ್ಷನ ನಿಂದನೆ | ಪ್ರಕರಣ ದಾಖಲು!!

Share the Article

ಸೋಷಿಯಲ್ ಮೀಡಿಯಾದಲ್ಲಿ ಒಂದಲ್ಲ ಒಂದು ವಿಚಾರಗಳು ಹರಿದಾಡುತ್ತಲೇ ಇರುತ್ತವೆ. ಅದರಲ್ಲಿ ಕೆಲವೊಂದು ವಿಚಾರಗಳು ಆಕ್ರೋಶಕ್ಕೆ ಕಾರಣವಾಗುವುದೂ ಉಂಟು. ಹಾಗೆಯೇ ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೊಬ್ಬರನ್ನು ನಿಂದಿಸಿದ್ದು, ಸದ್ಯ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ : ಕುವೆಟ್ಟು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಹಾಗೂ ಬೂತು ಸಮಿತಿಯ ಅಧ್ಯಕ್ಷರಾದ ಪ್ರದೀಪ್ ಶೆಟ್ಟಿ ಅವರ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಅಪಪ್ರಚಾರ ಮಾಡಿದ್ದು, ಈ ಬಗ್ಗೆ ಬೆಳ್ತಂಗಡಿ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪ್ರದೀಪ್ ಶೆಟ್ಟಿ ಅವರ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ, ಗುರುವಾಯನಕೆರೆ ಸಮೀಪ ಸುಮಾರು ಮೂರು ಎಕರೆಗಳಷ್ಟು ಡಿಸಿಮನ್ನಾ ಜಾಗವನ್ನು ಕಬಳಿಸಿದ್ದಾರೆ. ಅಲ್ಲದೆ, ಆ ಜಾಗಕ್ಕೆ ಅಕ್ರಮವಾಗಿ ಬೇಲಿ ಹಾಕಿ, 18 ಲಕ್ಷ ರೂಪಾಯಿಗೆ ಮಾರಾಟ ಮಾಡಲು ಯತ್ನಿಸುತ್ತಿರುವ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಎಂದು ಬರೆಯಲಾಗಿದೆ.

ಈ ಬಗ್ಗೆ ಬೆಳ್ತಂಗಡಿ ಆರಕ್ಷಕ ಠಾಣೆಯಲ್ಲಿ ದೂರು ನೀಡಿದ್ದು, ಸಬ್ ಇನ್ಸ್ಪೆಕ್ಟರ್ ದೂರು ದಾಖಲಿಸಿಕೊಂಡಿದ್ದಾರೆ. ಅಲ್ಲದೆ, ತನಿಖೆ ನಡೆಸಿ, ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ. ಈ ವೇಳೆ ಪ್ರದೀಪ್ ಶೆಟ್ಟಿ ಅವರಿಗೆ ಬೆಂಬಲವಾಗಿ ಪಕ್ಷದ ಪ್ರಮುಖರು, ಸಂಘಟನೆಯ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Leave A Reply