Shivamogga: ISIS ಜೊತೆ ನಂಟು; ಮತ್ತಿಬ್ಬರು ಶಂಕಿತ ಉಗ್ರರ ಬಂಧನ

Share the Article

ಖಾಕಿ ಪಡೆ ಎಷ್ಟೇ ಕಾರ್ಯಾಚರಣೆ ನಡೆಸಿದರೂ ಕೂಡ ದೇಶ ವಿರೋಧಿ ಉಗ್ರ ಸಂಘಟನೆಗಳು ಬಲಗೊಳ್ಳುವ ಜೊತೆಗೆ ದೇಶ ವಿರೋಧಿ ಚಟುವಟಿಕೆಗಳು ತೆರೆ ಮರೆಯಲ್ಲಿ ನಡೆಯುತ್ತಿದೆ. ಇದೀಗ, ಐಎಸ್​ಐಎಸ್​ ಉಗ್ರಗಾಮಿ ಸಂಘಟನೆಯೊಂದಿಗೆ ನಂಟು ಹೊಂದಿರುವ ಅನುಮಾನದ ಮೇರೆಗೆ ಎನ್​ಐಎ ಮತ್ತಿಬ್ಬರು ಶಂಕಿತ ಉಗ್ರಗಾಮಿಗಳನ್ನು ಬಂಧಿಸಲಾಗಿದೆ.

ಇತ್ತೀಚೆಗೆ ಮಂಗಳೂರಿನಲ್ಲಿ ಸಂಭವಿಸಿದ್ದ ಕುಕ್ಕರ್ ಬಾಂಬ್ ಸ್ಫೋಟ ಮತ್ತು ಶಿವಮೊಗ್ಗ ತುಂಗಾತೀರದ ಬಾಂಬ್ ಬ್ಲಾಸ್ಟ್ ಪ್ರಕರಣದ ತನಿಖೆಯನ್ನು ಎನ್​ಐಎ ಚುರುಕುಗೊಳಿಸಿದ್ದು ಈ ಪ್ರಕರಣದ ಕುರಿತಂತೆ ಎನ್​ಐಎ ಅಧಿಕಾರಿಗಳು ಜನವರಿ 05 ರಂದು ರಾಜ್ಯದ ಶಿವಮೊಗ್ಗ, ಬೆಂಗಳೂರು, ದಾವಣಗೆರೆ, ದಕ್ಷಿಣ ಕನ್ನಡ ಮತ್ತು ಉಡುಪಿ ಸೇರಿ 7 ಕಡೆ ದಾಳಿ ನಡೆಸಿದ್ದಾರೆ. ಈ ವೇಳೆ ತುಂಗಾ ತೀರದಲ್ಲಿ ನಡೆದ ಟ್ರಯಲ್ ಬ್ಲಾಸ್ಟ್‌ನಲ್ಲಿ ಐಸಿಸ್ ಒಳಸಂಚು ಇರುವ ಬಗ್ಗೆ ತಿಳಿದು ಬಂದಿದೆ.

ಈ ದಾಳಿ ವೇಳೆ ಎನ್​ಐಎ ಐಸಿಸ್​ನ ಸಕ್ರಿಯ ಸದಸ್ಯರಾಗಿರುವ ಶಿವಮೊಗ್ಗದ ಮಂಜುನಾಥ ಬಡಾವಣೆಯ ಉಜೇರ್​ ಫರ್ಹಾನ್​ ಬೇಗ್, ಉಡುಪಿಯ ರೇಶಾನ್ ತಾಜೂದ್ದೀನ್ ಶೇಖ್‌ ಅವರ ಮನೆಗಳ ಮೇಲೆ ಎನ್‌ಐಎ ಅಧಿಕಾರಿಗಳು ದಾಳಿ ಮಾಡಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಶಂಕಿತ ಉಗ್ರ ಮಾಜ್ ವಿಚಾರಣೆ ವೇಳೆ ಇಬ್ಬರ ಹೆಸರು ಬಹಿರಂಗವಾಗಿದೆ. ಈ ಹಿನ್ನೆಲೆ ಆರೋಪಿ ಮಾಜ್‌ಗೆ ಸಹಪಾಠಿಯಾಗಿದ್ದ ರೇಶಾನ್ ತಾಜೂದ್ದೀನ್​ನನ್ನು ಬಂಧಿಸಲಾಗಿದೆ.

ಶಿವಮೊಗ್ಗದ ತುಂಗಾ ತಟದಲ್ಲಿ ಟ್ರಯಲ್ ಬ್ಲಾಸ್ಟ್ ಪ್ರಕರಣ ಮತ್ತು ಐಎಸ್​ಐಎಸ್​ (ISIS) ಉಗ್ರಗಾಮಿ ಸಂಘಟನೆಯೊಂದಿಗೆ ನಂಟು ಹೊಂದಿದ್ದಾರೆಂದು ಎನ್​ಐಎ (NIA) ಅಧಿಕಾರಿಗಳು ಶಂಕಿತ ಉಗ್ರ ಮಜಿನ್ ಅಬ್ದುಲ್ ರಹಮಾನ್ ಮತ್ತು ನದೀಮ್ ಅಹ್ಮದ್ ಕೆಎ ಎಂಬ ಇಬ್ಬರು ಶಂಕಿತ ಉಗ್ರಗಾಮಿಗಳನ್ನು ಬಂಧಿಸಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಎನ್​ಐಎ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದಾಳಿ ಮಾಡಿ ಶಂಕಿತ ಉಗ್ರರನ್ನು ವಶಕ್ಕೆ ಪಡೆದಿದ್ದು, ಈಗ ಮತ್ತಿಬ್ಬರನ್ನು ಬಂಧಿಸಲಾಗಿದೆ.

ಈ ದಾಳಿ ನಡೆಸಿದ ಸಂದರ್ಭ ಡಿಜಿಟಲ್ ಡಿವೈಸಸ್ ಮತ್ತು ಹಲವು ದಾಖಲೆಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಇವರು ಐಸಿಸ್ ಹ್ಯಾಂಡ್ಲರ್ಸ್‌ನಿಂದ ಕ್ರಿಪ್ಟೋ ವ್ಯಾಲೆಟ್‌ಗೆ ಹಣ ಪಡೆದುಕೊಳ್ಳುವ ವ್ಯವಸ್ಥೆ ಮಾಡಿಕೊಂಡಿದ್ದರು ಎನ್ನಲಾಗಿದೆ. ಆರೋಪಿಗಳು ಲಿಕ್ಕರ್ ಶಾಪ್, ಗೋದಾಮು, ಟ್ರಾನ್ಸ್‌ಫಾರ್ಮರ್‌ಗೆ ಬೆಂಕಿಹಚ್ಚಲು ಸಂಚು ರೂಪಿಸಿದ್ದರು ಎಂದು ತಿಳಿದುಬಂದಿದೆ.

Leave A Reply