ಪೊಲೀಸ್ ಸಿಬ್ಬಂದಿ ಮಕ್ಕಳೇ ಗಮನಿಸಿ : ಸಿಗಲಿದೆ ರೂ.20 ಸಾವಿರ ವಿದ್ಯಾರ್ಥಿ ವೇತನ, ಈ ಕೂಡಲೇ ಅರ್ಜಿ ಸಲ್ಲಿಸಿ
ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುವ ನಿಟ್ಟಿನಲ್ಲಿ ಎಸ್ ಬಿಐ, ಹೆಚ್‌ಡಿಎಫ್‌ಸಿ ಬ್ಯಾಂಕ್ ಗಳು ಹಾಗೆ ಇನ್ನೂ ಕೆಲವು ಶಿಕ್ಷಣ ಸಂಸ್ಥೆಗಳು ಸ್ಕಾಲರ್‌ಶಿಪ್ ಮೂಲಕ ಮಕ್ಕಳ ಓದುವ ಕನಸಿಗೆ ಆಸರೆಯಾಗುತ್ತಿದೆ. ಅಷ್ಟೆ ಅಲ್ಲದೆ,ಸರ್ಕಾರ ವಿದ್ಯಾರ್ಥಿಗಳ ಏಳಿಗೆಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಆರ್ಥಿಕ ನೆರವು, ಸ್ಕಾಲರ್ ಶಿಪ್ ಜೊತೆಗೆ ಶಿಕ್ಷಣ ಬೆಂಬಲಿಸುವ ನಿಟ್ಟಿನಲ್ಲಿ ಅನೇಕ ಕ್ರಮಗಳನ್ನು ಜಾರಿಗೆ ತಂದಿದೆ.
ಇದೀಗ, ಡಿಬಿಎಸ್ ಬ್ಯಾಂಕ್ ಸ್ಕಾಲರ್‌ಶಿಪ್ 2023ಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಪ್ರಸ್ತುತ 9 ಮತ್ತು 10ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಪೊಲೀಸ್ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಬ್‌ಇನ್‌ಸ್ಪೆಕ್ಟರ್ ಮತ್ತು ಅವರಿಗಿಂತ ಕೆಳಗಿನ ಶ್ರೇಣಿಗಳಲ್ಲಿನ ಸಿಬ್ಬಂದಿಗಳ ಮಕ್ಕಳು ತಮ್ಮ ಶಿಕ್ಷಣವನ್ನು ಮುಂದುವರಿಸುವ ನಿಟ್ಟಿನಲ್ಲಿ ಅವರನ್ನು ಪ್ರೋತ್ಸಾಹಿಸಲು ಡಿಬಿಎಸ್ ಬ್ಯಾಂಕ್ ಪ್ರತಿ ವರ್ಷ ಈ ವಿದ್ಯಾರ್ಥಿವೇತನವನ್ನು ನೀಡುತ್ತಿದೆ.
ಅರ್ಹತಾ ಮಾನದಂಡ :
ಅರ್ಜಿ ಸಲ್ಲಿಸುವ ವಿದ್ಯಾರ್ಥಿಯು ಪೊಲೀಸ್ ಸಿಬ್ಬಂದಿಯ ಮಕ್ಕಳಾಗಿರಬೇಕು ಜೊತೆಗೆ ಸಬ್‌ಇನ್‌ಸ್ಪೆಕ್ಟರ್ ಮತ್ತು ಕೆಳಗಿನ ಶ್ರೇಣಿಗಳ ಸಿಬ್ಬಂದಿಯ ಮಕ್ಕಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ತಮಿಳುನಾಡು, ಕರ್ನಾಟಕ, ಕೇರಳ, ಆಂಧ್ರ ಪ್ರದೇಶ, ತೆಲಂಗಾಣ ಮತ್ತು ಪುದುಚೆರಿಯಲ್ಲಿ ನೆಲೆಸಿರಬೇಕು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಯು ಪ್ರಸ್ತುತ 9 ಅಥವಾ 10ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿರಬೇಕು.
ಈ ಸ್ಕಾಲರ್ ಶಿಪ್ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಅರ್ಜಿ ಸಲ್ಲಿಕೆಗೆ 05-02-2023 ಕೊನೆಯ ದಿನಾಂಕವಾಗಿದೆ.
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು ಹೀಗಿವೆ:
ಕಳೆದ ಸಾಲಿನ ಅಂಕಪಟ್ಟಿ, ಆಧಾರ್ ಕಾರ್ಡ್ ಪ್ರತಿ, ಮಕ್ಕಳ ಪೋಷಕರು ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಉದ್ಯೋಗ ಗುರುತಿನ ಚೀಟಿಯ ಮಾಹಿತಿ , ಪ್ರಸ್ತುತ ವರ್ಷದ ಪ್ರವೇಶ ಪ್ರತಿ ( ಶುಲ್ಕ ರಶೀದಿ, ಪ್ರವೇಶ ಪತ್ರ, ವಿದ್ಯಾರ್ಥಿಯ ಶಾಲಾ ಗುರುತಿನ ಪತ್ರ, ಇತ್ಯಾದಿ) ಬೇಕಾಗುತ್ತವೆ.
ಇದರ ಜೊತೆಗೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ಬ್ಯಾಂಕ್ ವಿವರಗಳು ಅಥವಾ ಪೋಷಕರ ಬ್ಯಾಂಕ್ ವಿವರಗಳು, ವಿದ್ಯಾರ್ಥಿಯ ಫೋಟೋ ಬೇಕಾಗುತ್ತದೆ. ಅರ್ಜಿ ಸಲ್ಲಿಸಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಮೂರು ವರ್ಷದ ವರೆಗೆ ಅಂದರೆ 12ನೇ ತರಗತಿಯ ವರೆಗೆ ವಾರ್ಷಿಕ ರೂ. 20,000/- ವಿದ್ಯಾರ್ಥಿವೇತನ ಲಭ್ಯವಾಗಲಿದೆ.
Good