Home latest Delhi Republic Day Parade 2023: ಗಣರಾಜ್ಯೋತ್ಸವ ಪರೇಡ್​​​​ನಲ್ಲಿ ರಾಜ್ಯದ ಸ್ತಬ್ಧಚಿತ್ರಕ್ಕೆ ಅವಕಾಶ | ಕೊನೆ...

Delhi Republic Day Parade 2023: ಗಣರಾಜ್ಯೋತ್ಸವ ಪರೇಡ್​​​​ನಲ್ಲಿ ರಾಜ್ಯದ ಸ್ತಬ್ಧಚಿತ್ರಕ್ಕೆ ಅವಕಾಶ | ಕೊನೆ ಕ್ಷಣದಲ್ಲಿ ಕರ್ನಾಟಕದ ‘ನಾರಿ ಶಕ್ತಿ’ ಸ್ತಬ್ಧಚಿತ್ರ ಸೇರ್ಪಡೆ

Hindu neighbor gifts plot of land

Hindu neighbour gifts land to Muslim journalist

ಜನವರಿ 26ರಂದು ದೆಹಲಿಯ ರಾಜಪಥ್‍ನಲ್ಲಿ ನಡೆಯುವ ಗಣರಾಜ್ಯೋತ್ಸವ ದಿನಾಚರಣೆಯ ಪರೇಡ್‍ನಲ್ಲಿ(Delhi Republic Day Parade) ಈ ವರ್ಷ ಕರ್ನಾಟಕದ ಸ್ತಬ್ಧಚಿತ್ರ ಪ್ರದರ್ಶನಕ್ಕೆ(Karnataka Tableau) ಅವಕಾಶ ನೀಡಿರಲಿಲ್ಲ. ಕೇಂದ್ರದ ಈ ತೀರ್ಮಾನದಿಂದ ರಾಜ್ಯದ ಜನರಲ್ಲಿ ಅಸಮಾಧಾನ ವ್ಯಕ್ತವಾಗಿತ್ತು. ಸದ್ಯ ಇದೀಗ ಅಂತಿಮ ಕ್ಷಣದಲ್ಲಿ ಕರ್ನಾಟಕದ ‘ನಾರಿ ಶಕ್ತಿ’ ಸ್ತಬ್ಧಚಿತ್ರಕ್ಕೆ ಅವಕಾಶ ಕಲ್ಪಿಸಲಾಗಿದೆ.

ಈ ಬಾರಿಯ ಗಣರಾಜ್ಯೋತ್ಸದ ಪರೇಡ್​ನಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಕೊನೆಗೂ ಅನುಮತಿ ಸಿಕ್ಕಿದ್ದು, ಕಳೆದ 13 ವರ್ಷಗಳಿಂದ ಗಣರಾಜ್ಯೋತ್ಸವದ ಪರೇಡ್​ನಲ್ಲಿ ಕರ್ನಾಟಕದ ಸ್ತಬ್ಧಚಿತ್ರ ಪ್ರದರ್ಶನವಾಗುತ್ತಿತ್ತು. ಮುಖ್ಯಮಂತ್ರಿ ಬೊಮ್ಮಾಯಿ ಅವರ ಅನುಮತಿ ಮೇರೆಗೆ ಮತ್ತೆ ಅವಕಾಶ ನೀಡಲಾಗಿದೆ ಎಂದು ತಿಳಿದುಬಂದಿದೆ.

ಕಳೆದ 13 ವರ್ಷಗಳಿಂದ ಗಣರಾಜ್ಯೋತ್ಸವದ ಪರೇಡ್​ನಲ್ಲಿ ಕರ್ನಾಟಕದ ಸ್ತಬ್ಧಚಿತ್ರ ಪ್ರದರ್ಶನವಾಗುತ್ತಿತ್ತು. ಆದರೆ ಈ ಬಾರಿ ಟ್ಯಾಬ್ಲೋ ಗೆ ಅವಕಾಶ ನಿರಾಕರಿಸಲಾಗಿತ್ತು. ಕೇಂದ್ರ ಸರಕಾರದಿಂದ ನಿರಾಕರಣೆಗೊಂಡಿದ್ದ ಹಿನ್ನೆಲೆ, ಈ ಕುರಿತಾಗಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರದ ಬಳಿ ಮನವಿ ಸಲ್ಲಿಸುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರಾಜ್ಯದ ಜನತೆಗೆ ಭರವಸೆ ನೀಡಿದ್ದರು. ಹೀಗಾಗಿ, ಕೊನೆ ಕ್ಷಣದಲ್ಲಿ ಈ ಬಾರಿಯ ಗಣರಾಜೋತ್ಸವ ಪೕರೆಡ್‌ನಲ್ಲಿ ರಾಜ್ಯದ ಟ್ಯಾಬ್ಲೋಗೆ ಅವಕಾಶ ಸಿಕ್ಕಿದೆ.

ಸತತ 13 ವರ್ಷಗಳಿಂದ ಪ್ರದರ್ಶನಗೊಳ್ಳುತ್ತ ಬಂದಿದ್ದ ಕರ್ನಾಟಕದ ಸ್ತಬ್ಧ ಚಿತ್ರಕ್ಕೆ ಈ ವರ್ಷವೂ ಅವಕಾಶ ಸಿಕ್ಕಿದ್ದು ಸತತ 14ನೇ ಬಾರಿ ರಾಜ್ಯದ ಸ್ಥಬ್ದ ಚಿತ್ರ ಪ್ರದರ್ಶನಗೊಳ್ಳಲಿದೆ.

ಪದ್ಮಶ್ರೀ ಪುರಸ್ಕೃತ ಮಹಿಳಾ ಸಾಧಕರ ಸಾಧನೆ ಅನಾವರಣಗೊಳಿಸಲು ರಾಜ್ಯ ನಾರಿ ಶಕ್ತಿ ಕಲ್ಪನೆಯಲ್ಲಿ ತಯಾರಿ ನಡೆದಿದ್ದು, ರಾಜ್ಯದ ಮೂವರು ಮಹಿಳಾ ಸಾಧಕಿಯರ ಬಗ್ಗೆ ಸ್ತಬ್ಧಚಿತ್ರ ಅಣಿಯಾಗಿದೆ. ಸಾಲುಮರದ ತಿಮ್ಮಕ್ಕ, ಸೂಲಗಿತ್ತಿ ನರಸಮ್ಮ, ತುಳಿಸಿಗೌಡ ಇವರ ಸಾಧನೆ ಅನಾವರಣಗೊಳ್ಳಲಿದೆ.